Yuvavahini

JUL 31, 2016 6.34 AM IST

ಯುವವಾಹಿನಿ ಗೌರವ ಅಭಿನಂದನೆ- 2016

ತುಳು ಜನಪದ ಅಧ್ಯಯನ ಪ್ರಬೃತಿ ಡಾ| ನವೀನ್ ಕುಮಾರ್ ಮರಿಕೆ

ತುಳುನಾಡಿನ ಪ್ರಾಚೀನ ಶ್ರೇಷ್ಠ ಪರಂಪರೆಯಲ್ಲಿ ನಡೆದು ಬಂದ ರೀತಿ ರಿವಾಜುಗಳು, ಸಾಂಸ್ಕೃತಿಕ ಹರಹುಗಳು ಮತ್ತದರ ಶ್ರೇಷ್ಠತೆ, ವೈಶಿಷ್ಠತೆ ನಮ್ಮಲ್ಲೇ ಹೆಚ್ಚಿನವರಿಗೆ ಅರಿವಿಲ್ಲದಿರಬಹುದು ಅದರಲ್ಲೂ ಜನಜೀವನದ ಮಧ್ಯೆ ಇದ್ದು ತಮ್ಮ ಅಸಾಧಾರಣ ಶಕ್ತಿ ಸಾಮರ್ಥ್ಯಗಳಿಂದ ಅಸಹಾಯಕರಿಗೆ ಸಹಾಯಕರಾಗಿ ದುಷ್ಟರಿಗೆ ಸಿಂಹಸ್ಚಪ್ನರಾಗಿ ಭಕ್ತ ಜನರಿಗೆ ರಕ್ಷಕರಾಗಿ ಇದ್ದ ಕೆಲವು ಶಕ್ತಿಗಳು ಪವಾಡ ಪುರುಷರಾಗಿ ಭೂತಾರಾಧನೆಯ ಕೇಂದ್ರ ಬಿಂದುಗಳಾಗಿ ಇಂದಿಗೂ ಪ್ರಸ್ತುತರಾಗಿದ್ದಾರೆ.

ಅಂದಿನ ಅತಿಶಯ ಶಕ್ತಿವಂತ ನಂಬಿದವರಿಗೆ ಇಂಬುಕೊಟ್ಟ ತುಳು ಇತಿಹಾಸದ ದೈವಗಳಲ್ಲಿ ಜುಮಾದಿ ಎಲ್ಲರಿಗೂ ತಿಳಿದಿರುವಂತಹ ಪವಾಡ ಶೀಲ ಭೂತ ಪ್ರಸ್ತುತ ಹಾಗೂ ಭವಿಷ್ಯತ್ ಎಲ್ಲವೂ ಹೀಗೆ ತುಳುನಾಡಿನ ಆದಿ ದೈವ ಜನಾದಿಯ ಬಗ್ಗೆ ಒಂದು ಆಳವಾದ ಸಾಂಸ್ಕೃತಿಕ ಅಧ್ಯಯನ ಮಾಡಿ 2014 ರಲ್ಲಿ ಕಣ್ಣೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಡಾ| ನವೀನ್ ಕುಮಾರ್ ಮರಿಕೆಯವರು ಶೇಷ್ಠ ಸಾಧಕರಾಗಿ ಬಿಲ್ಲವ ಸಮುದಾಯದ ಹೆಮ್ಮೆಯ ಕುಡಿ ಎಂದೆನಿಸಿಕೊಂಡಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ. ಸ್ನಾತಕೋತ್ತರ ಪದವಿಗಳಿಸಿ ದಶಕಕ್ಕೂ ಮಿಕ್ಕಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ, ಉಪನ್ಯಾಸಕರಾಗಿ ಮಾಡಿ ತನ್ನ ಅಧ್ಯಯನ ಶೀಲ ಬರವಣಿಗೆಯ ಮೂಲಕ ಎಲ್ಲರಿಗೂ ಪರಿಚಿತರಾಗಿರುವುದೇ ಅಲ್ಲದೆ ತನ್ನ ಸೃಜನ ಶೀಲ ಬರವಣಿಗೆಯಿಂದ ಸಾಹಿತ್ಯ ಸಂಸ್ಕೃತಿ ಆಸಕ್ತರ ಗಮನ ಸೆಳೆದಿದ್ದಾರೆ

ತುಳುನಾಡಿನಲ್ಲಿ ಕೊರಗತನಿಯ ಒಂದು ಅದ್ಯಯನ (2000), ’ಆಕಾಶದಲ್ಲಿ ಬೇಟೆ’ ಕಥಾ ಸಂಕಲನ 2001, ’ಗರುಡ ರೇಖೆ-2004 ಕಥಾಸಂಕಲನ’ ಮರಕೂರು ಜನನದ ದೈವಗಳು 2015 ಇವೆಲ್ಲಾ ಕೃತಿಗಳು ಇವರು ನಾಡಿನ ಸಂಸ್ಕೃತಿಗೆ ಸಲ್ಲಿಸಿದ ಅಕ್ಷರ ಗೌರವವೆನ್ನಬಹುದು ರಾಜ್ಯ ರಾಷ್ಟ್ರಮಟ್ಟದ ಅನೇಕ ಕಾರ್ಯಗಾರ, ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ, ’ಕತ್ತಲಿನಿಂದ’ ಕೃತಿಗೆ ತುಳು ಸಾಹಿತ್ಯ ಅಕಾಡಮಿ ಪುಸ್ತಕ ಬಹುಮಾನ 2016 ಪ್ರಶಸ್ತಿ, ಕರಾವಳಿಯ ಅನೇಕ ಸಂಘ ಸಂಸ್ಥೆಗಳಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಕಾಶವಾಣಿಯಲ್ಲಿ ತುಳು, ವೈಚಾರಿಕ ಭಾಷಣಗಾರರಾಗಿ ಶೇಷ್ಠ ಸಾಧನೆ ಮಾಡಿದ ಡಾ| ನವೀನ್ ಕುಮಾರ್ ಮರಿಕೆಯವರು ಬಿಲ್ಲವ ಸಮುದಾಯದ ಅಭಿಮಾನದ ಗೌರವಕ್ಕೆ ಪಾತ್ರರಾಗಿದ್ದಾರೆ ಅವರಿಗೆ ಯುವವಾಹಿನಿಯ ಗೌರವ ಅಭಿನಂದನೆಗಳು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!