Yuvavahini

JUN 14, 2024 5.07 PM IST

ಯುವವಾಹಿನಿ(ರಿ.) ಮೂಲ್ಕಿ ಘಟಕ - ಪದಗ್ರಹಣ

ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನಿಯ: ಹರೀಶ್ ಕೆ. ಪೂಜಾರಿ

ಮೂಲ್ಕಿ: ಯುವವಾಹಿನಿ(ರಿ.) ಮೂಲ್ಕಿ ಘಟಕದ 2024-25 ರ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿ 14-06-2024 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿತು.

ಮೂಲ್ಕಿ ಯುವವಾಹಿನಿ(ರಿ.) ಘಟಕದ ನೂತನ ಅಧ್ಯಕ್ಷರು ರಿತೇಶ್ ಅಂಚನ್ ಅವರ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ, ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ಒತ್ತು ನೀಡುತ್ತಿರುವುದು ಶ್ಲಾಘನಿಯ ಎಂದು ಪದಗ್ರಹಣದಲ್ಲಿ ಮಾತನಾಡಿದರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರು ಡಾ. ಹರಿಶ್ಚಂದ್ರ. ಪಿ. ಸಾಲ್ಯಾನ್, ಬಿರುವೆರ ಕುಡ್ಲ (ರಿ) ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್. ಜೆ . ಸಾಲ್ಯಾನ್ ಬಪ್ಪನಾಡು,
ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷರು ಪ್ರಕಾಶ್ ಸುವರ್ಣ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಪಾಲನ್ ಹಾಗೂ ಘಟಕದ ಕಾರ್ಯದರ್ಶಿ ವಿನಯ ವಿಶ್ವನಾಥ್ ಉಪಸ್ಥಿತರಿದ್ದರು.

ಘಟಕಧ್ಯಕ್ಷ ಮಾಧವ ಪೂಜಾರಿ ಕಿಲ್ಪಾಡಿ ಕಾರ್ಯಕ್ರಮದದ ಅಧ್ಯಕ್ಷತೆ ವಹಿಸಿದ್ದರು. ನಿಕಟ ಪೂರ್ವಧ್ಯಕ್ಷೆ ಭಾರತಿ ಭಾಸ್ಕರ್ ನೂತನ ಕಾರ್ಯಕಾರಿ ಸಮಿತಿಯನ್ನು ಪರಿಚಯಿಸಿದರು. ನೂತನ ಅಧ್ಯಕ್ಷರು ರಿತೇಶ್ ಮಾತನಾಡಿ ಈವರೆಗಿನ ಅಧ್ಯಕ್ಷರುಗಳಿಗೆ ನೀಡಿದ ಸಹಕಾರ ಮುಂದೆಯೂ ನೀಡಿ ಎಂದು ಎಲ್ಲರ ಸಹಕಾರ ಯಾಚಿಸಿದರು.

ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಸಾಧಕ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್ .ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಾಜಿ ಅಧ್ಯಕ್ಷರು ಯೋಗೀಶ್ ಕೋಟ್ಯಾನ್ ರವರ ಪ್ರಾಯೋಜಕತ್ವದಲ್ಲಿ ಆಯ್ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರಾದ ಡಾ. ಹರೀಶ್ಚಂದ್ರ ಪಿ. ಸಾಲ್ಯಾನ್ ರನ್ನು ಅವರ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಸೇವಾ ಕಾರ್ಯವನ್ನು ಗುರುತಿಸಿ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆ ಸಂಚಾಲಕರಾಗಿ ಆಯ್ಕೆ ಗೊಂಡ ಘಟಕದ ಮಾಜಿ ಅಧ್ಯಕ್ಷರು ಹರಿಂದ್ರ ಸುವರ್ಣ ರನ್ನು ಗೌರವಿಸಲಾಯಿತು.

ಅಧ್ಯಕ್ಷರಾದ ಮಾಧವ ಪೂಜಾರಿಯವರಿಗೆ ಮಾಜಿ ಅಧ್ಯಕ್ಷರು ಸೇರಿ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಮಾಧವ ಪೂಜಾರಿಯವರು ತಮ್ಮ ಒಂದು ವರ್ಷದ ಅಧ್ಯಕ್ಷ ಅವಧಿಯಲ್ಲಿ ಸಹಕಾರ ನೀಡಿದ ಸರ್ವರಿಗೂ ಧನ್ಯವಾದ ತಿಳಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕೇಂದ್ರ ಸಮಿತಿ ಪ್ರದಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಘಟಕದ ಅಧ್ಯಕ್ಷರ ನೂತನ ತಂಡಕ್ಕೆ ಶುಭ ಹಾರೈಸಿದರು

ಪ್ರೇರಣಾ ಪ್ರಾರ್ಥನೆಗೈದರು, ಅಧ್ಯಕ್ಷರು ಮಾಧವ ಪೂಜಾರಿ ಸ್ವಾಗತಿಸಿದರು, ಕಾರ್ಯದರ್ಶಿ ವಿನಯ ವಿಶ್ವನಾಥ್ ವಾರ್ಷಿಕ ವರದಿ ಮಂಡಿಸಿದರು. ಮಾಜಿ ಅಧ್ಯಕ್ಷರು ಉದಯ್ ಅಮೀನ್ ಮಟ್ಟು ನಿರೂಪಣೆಗೈದರು. ನೂತನ ಕಾರ್ಯದರ್ಶಿ ಲತೀಶ್ ಕಾರ್ನಾಡ್ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!