ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು.
ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ ಇವರು ಸೈಬರ್ ಜಗತ್ತಿನಲ್ಲಿ ನಡೆಯುತ್ತಿರುವ ಅಪರಾಧಗಳನ್ನು ಪಿ.ಪಿ.ಟಿ ಮೂಲಕ ಕೂಲಂಕುಷವಾಗಿ ವಿವರಿಸಿ, ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳ ಮಾಹಿತಿ ನೀಡಿ ಜಾಗೃತರಾಗಿರುವಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಸುಮಾರು 650 ಮಂದಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.
ಕಾಲೇಜಿನ ಪ್ರಾಚಾರ್ಯರಾದ ಡಾ. ಸುಮಾರವರು ಸಕಾಲದಲ್ಲಿ ಇಂತಹ ಒಂದು ಒಳ್ಳೆಯ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ನಡೆಸಿಕೊಟ್ಟದ್ದಕ್ಕೆ ಯುವಾಹಿನಿ ಸಂಸ್ಥೆಗೂ, ಸಂಪನ್ಮೂಲ ವ್ಯಕ್ತಿಗಳಿಗೂ ಧನ್ಯವಾದಗಳನ್ನು ಸಮರ್ಪಿಸಿದರು.
ಯುವವಾಹಿನಿಯ ಮಾಜಿ ಅಧ್ಯಕ್ಷರುಗಳು, ಸದಸ್ಯರು, ಶಾಲಾ ಉಪನ್ಯಾಸಕ ವರ್ಗದವವರು ಈ ಕಾರ್ಯಕ್ರಮದಲ್ಲಿ ಭಾಗಿಗಳಾದರು. ಕೊನೆಯಲ್ಲಿ ನೆನಪಿನ ಕಾಣಿಕಯೊಂದಿಗೆ ಧನ್ಯವಾದಗಳನ್ನು ನೀಡಲಾಯಿತು.