Yuvavahini

JUL 31, 2016 6.40 AM IST

ಯುವವಾಹಿನಿ ಗೌರವ ಅಭಿನಂದನೆ- 2016

ಡಾ| ಪ್ರಕೃತಿ ಶ್ರೀನಾಥ್

ಮೂಲ್ಕಿ ನಾರಾಯಣಗುರು ವಿದ್ಯಾಸಂಸ್ಥೆಯಲ್ಲಿ ಕಲಿತ ಓರ್ವ ಮಹಿಳೆ ಇಂದು ವಿಶ್ವವಿಖ್ಯಾತ ಬೆಂಗಳೂರಿನ CMR Institute of Technology ಯಲ್ಲಿ ಸಹಾಯಕ ಪ್ರೊಫೆಸರ್ ಆಗಿದ್ದಾರೆ. ಹಲವು ವೈಶಿಷ್ಟ್ಯಪೂರ್ಣ ಸಾಧನೆಯ ಈ ಪ್ರತಿಭಾನ್ವಿತೆ ಸಮಾಜದ ಕೆಲವೇ ಸಾಧಕರಲ್ಲಿ ಮೆಚ್ಚುಗೆ ಗಳಿಸಿ ಯುವ ಪೀಳಿಗೆಗೆ ಆದರ್ಶಪ್ರಾಯರೆನಿಸಿದ್ದಾರೆ.

ಪ್ರತಿಷ್ಠಿತ (ಈಗಿನ ವಿದ್ಯಾರ್ಥಿಗಳ ಪ್ರಥಮ ಆಯ್ಕೆ ಎನಿಸಿದ) ಬೆಂಗಳೂರಿನ BMS ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಉತ್ಪಾದನಾ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ PES Institute of Technology ಯಲ್ಲಿ M.Tech ಪದವಿ ಪಡೆದಿರುತ್ತಾರೆ. ಅಲ್ಲಿಗೇ ಸುಮ್ಮನಿರದ ಈಕೆ ವಿಶ್ವವಿಖ್ಯಾತ NITK ಯಲ್ಲಿ Metallurgical Engineering ನಲ್ಲಿ ತನ್ನ Ph.D ಪದವಿ ಪಡೆದಿದ್ದು ಇದು ಕೇವಲ ಅತ್ಯಂತ ಪ್ರತಿಭಾನ್ವಿತರಿಗೆ ಸಾಧ್ಯವೆನಿಸುವ ಉತ್ಕೃಷ್ಠ ಸಾಧನೆಯಾಗಿದೆ.

ಎಂ.ಟೆಕ್‌ನಲ್ಲಿ ಪ್ರಥಮ ರ್‍ಯಾಂಕ್ ಸಹಿತ ಸ್ವರ್ಣ ಪದಕ, PES Institute of Technology-VTU ಸ್ವರ್ಣ ಪದಕ, M.Techನ ಎಲ್ಲಾ ಸೆಮಿಸ್ಟರ್‌ಗಳಲ್ಲಿ M.R.D. Distinction Award ಇದೆಲ್ಲ ಸಾಧನೆ ಎಲ್ಲರ ಗೌರವಕ್ಕೆ ಪಾತ್ರವಾಗುವಂತದ್ದು. ಇಲ್ಲಿಗೇ ನಿಲ್ಲದೆ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಸಮ್ಮೇಳನಗಳಲ್ಲಿ ಭಾಗವಹಿಸಿದ ಇವರು ಹಲವಾರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿ ವಿಶ್ವದ ತಂತ್ರಜ್ಞಾನ ಸಾಧಕರಿಂದ ಭೇಷ್ ಎನಿಸಿಕೊಂಡಿದ್ದಾರೆ. ಸಂಶೋಧಕ ಪ್ರವೃತ್ತಿಯ ಡಾ| ಪ್ರಕೃತಿ ಶ್ರೀನಾಥ್ ಬಿಲ್ಲವ ಸಮುದಾಯದ ಹೆಮ್ಮೆಯ ಪುತ್ರಿ-ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಮುಗಿಸಿರುವುದು ಇವರ ಕಲಾಭಿರುಚಿಯ ಪ್ರತೀಕ. ಇಂತಹ ಸಾಧಕಿಯನ್ನು ಅಭಿನಂದಿಸಲು ಯುವವಾಹಿನಿ ತುಂಬಾ ಸಂತೋಷಪಡುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!