Yuvavahini

JUL 21, 2024 4.50 PM IST

ಯುವವಾಹಿನಿ (ರಿ) ಬಂಟ್ವಾಳ ಘಟಕದಿಂದ ನಮ್ಮ ನಾಳೆಗಾಗಿ ವಿಷ಼ನ್ 2024

ಯುವವಾಹಿನಿ ಪರಿವರ್ತನೆಯ ದಾರಿದೀಪ: ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್

ಬಂಟ್ವಾಳ: ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರು ವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು.

ಅವರು ದಿನಾಂಕ 21-07-2024 ನೇ ಬಾನುವಾರ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ತರಬೇತುದಾರ ಅಭಿಜಿತ್ ಕರ್ಕೇರ ವಿವಿಧ ಚಟುವಟಿಕೆಗಳ ಮೂಲಕ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ದಿನೇಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ರಾಜೇಂದ್ರ ಪಲ್ಲಮಜಲು , ಸಲಹೆಗಾರ ಟಿ.ಶಂಕರ ಸುವರ್ಣ ಉಪಸ್ಥಿತರಿದ್ದರು.

ಸುಮಾರು 75 ಸದಸ್ಯರು ವಿವಿಧ ಚಟುವಟಿಕೆಗಳ ಮೂಲಕ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ದಿನೇಶ್ ಸುವರ್ಣ ಸ್ವಾಗತಿಸಿದರು, ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!