Yuvavahini

JUL 21, 2024 4.53 PM IST

ಯುವವಾಹಿನಿ (ರಿ) ಮಾಣಿ ಘಟಕ

ತುಳುವ ಸಂಸ್ಕೃತಿ, ಸಂಸ್ಕಾರ ಉಳಿವಿಗೆ ನಾವೇ ಜವಾಬ್ದಾರರು: ವಿಜಯಲಕ್ಷ್ಮೀ ಕಟೀಲು

ಮಾಣಿ: ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು, ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು, ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು, ಆಟಿ ಕಳೆಂಜನು ಆ ತಿಂಗಳಲ್ಲಿ ಯಾಕೆ ಬರುವನು, ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗೂ ಮಹತ್ವವನ್ನು ನೀಡಿ ಅದನ್ನು ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗೂ ಅದರದೇ ಆದ ವಿಶೇಷತೆ, ಸಂಸ್ಕೃತಿ, ಸಂಪ್ರದಾಯ ಇತ್ತು ಎಂದು ಸರಕಾರಿ ಪ್ರೌಢಶಾಲೆ, ಮಂಚಿ ಕೊಳ್ನಾಡು ಇಲ್ಲಿಯ ಶಿಕ್ಷಕರು ಹಾಗೂ ಸಾಹಿತಿಗಳಾದ ವಿಜಯಲಕ್ಷ್ಮೀ ಕಟೀಲು ಹೇಳಿದರು.

ಅವರು ದಿನಾಂಕ 21-07-2024ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಮಾಣಿ ಇಲ್ಲಿ ಯುವವಾಹಿನಿ (ರಿ) ಮಾಣಿ ಘಟಕ ಆತಿಥ್ಯದಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾದ ಕುಶಾಲಪ್ಪ ಪೂಜಾರಿ ಪತ್ತ್ ಕಲಸೆ ರವರು ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನಷ್ಟು ಇಂತಹ ಕಾರ್ಯಕ್ರಮ ಘಟಕದಿಂದ ಮೂಡಿಬರಲಿ ಎಂದು ಹಾರೈಸಿದರು. ಘಟಕದ ಗೌರವ ಸಲಹೆಗಾರರಾದ ನಾರಾಯಣ ಸಾಲ್ಯಾನ್ ರವರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಘಟಕದ ಅದ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಕಾರ್ಯಕ್ರಮಕ್ಕೆ ತಮ್ಮ ತಮ್ಮ ಮನೆಯಲ್ಲಿ ಆಟಿಯ ತಿಂಗಳ ವಿಶೇಷತೆಯನ್ನು ಬಿಂಬಿಸುವ ವಿವಿಧ ತಿನಿಸುಗಳನ್ನು ತಯಾರಿಸಿ ತಂದ ಘಟಕದ ಸದಸ್ಯರಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಸಂಚಾಲಕರಾದ ಸತೀಶ್ ಮುರುವ ಹಾಗೂ ಸಹ ಸಂಚಾಲಕರಾದ ಶಶಿಪ್ರಭ ಮಿತ್ತೂರು ಉಪಸ್ಥಿತರಿದ್ದರು.

ಅಸ್ಮಿತಾ ಖೇಲೊ ಇಂಡಿಯಾ ರಾಷ್ಟಿಯ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡ ಬರಿಮಾರು ಗ್ರಾಮದ ರಕ್ಷಾ.ಜಿ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ Selfie with ಚಾವಡಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ದೀಪಕ್ ಪೆರಾಜೆ ಮತ್ತು ದ್ವಿತೀಯ ಬಹುಮಾನ ಸಾಯಿ ಪ್ರಣಾಮ್ ಹಾಗೂ ಲಕ್ಕಿ ಮೆಂಬರ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಬಾಲಕೃಷ್ಣ ದೇಲಬೆಟ್ಟು ದ್ವಿತೀಯ ಬಹುಮಾನ ಸತ್ಯಪ್ರಕಾಶ್ ಪಡೆದುಕೊಂಡರು.

ಕಾರ್ಯಕ್ರಮವನ್ನು ಘಟಕದ ಸದಸ್ಯಯರಾದ ಪದ್ಮಿನಿ, ನಿಕ್ಷಿತ, ಭವಿಷ್ಯ ಪ್ರಾರ್ಥಿಸಿದರು, ಘಟಕದ ಕಾರ್ಯದರ್ಶಿಯಾದ ಶಾಲಿನಿ ಜಗದೀಶ್ ರವರು ಸ್ವಾಗತಿಸಿದರು, ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ನವೀನ್ ಸೂರ್ಯ ರವರು ವಂದಿಸಿದರು, ಸದಸ್ಯಯರಾದ ಜಯಶ್ರೀ ಹಾಗೂ ಪ್ರಜ್ಞಾ ಎಂ. ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!