ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು.
ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ ಮಾಡಿದೆ ಎಂದರು.
ಕಳೆದ ಮೂರು ವರ್ಷಗಳಿಂದ ಈ ಪರಿಸರದಲ್ಲಿ ನಿರಂತರ ಸಮಾಜಮುಖಿ ಕಾರ್ಯಗಳು ನಡೆಯುತ್ತಿದೆ, ಇವೆಲ್ಲವೂ ಯುವವಾಹಿನಿಯ ನಿಸ್ವಾರ್ಥ ಯುವಕರಿಂದ ಸಾಧ್ಯವಾಗಿದೆ ಎಂದು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಜ್ಜೋಡಿ ಶ್ರೀ ಮಹಾಕಾಳಿ ಸೇವಾ ಸಮಿತಿಯ ಅದ್ಯಕ್ಷರಾದ ಶ್ರೀ ಕೆ.ಶ್ರೀನಿವಾಸ ಬಂಗೇರ ತಿಳಿಸಿದರು.
ವೈದ್ಯಕೀಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಮಂಗಳೂರು ಫಾದರ್ ಮಲ್ಲರ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ.ರೋಶನ್ ಎಂ.ನೆಕ್ಕೆರೆಮಾರ್ ಇವರನ್ನು ಸನ್ಮಾನಿಸಲಾಯಿತು.
ಉದ್ಯಮಿ ನಾಗೇಶ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಭವಿತ್ ರಾಜ್ 2016-17 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ಪದಪ್ರಧಾನ ಮಾಡಿದರು. ಗೋಪಾಲ ಪೂಜಾರಿ ನೇತ್ರತ್ವದ 21 ಸದಸ್ಯರ ತಂಡವು 2017-18 ನೇ ಸಾಲಿನ ಯುವವಾಹಿನಿ ಕಂಕನಾಡಿ ಘಟಕವನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಂಕನಾಡಿ ಯುವವಾಹಿನಿಯ 2016-17 ನೇ ಸಾಲಿನ ಅದ್ಯಕ್ಷರಾದ ಶ್ರೀ ಹರೀಶ್ ಕೆ.ಸನಿಲ್ ಸ್ವಾಗತಿಸಿದರು ಮತ್ತು ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು. ರಾಕೇಶ್ ಕುಮಾರ್ ಪ್ರಸ್ತಾವನೆ ಮಾಡಿದರು. ನೂತನ ಕಾರ್ಯದರ್ಶಿ ಮೋಹನ್ ಜಿ.ಅಮೀನ್ ಧನ್ಯವಾದ ನೀಡಿದರು.
ಸಭಾ ಕಾರ್ಯಕ್ರಮದ ಮೊದಲು ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಉಪನ್ಯಾಸಕ ರಾಕೇಶ್ ಕುಮಾರ್ ಹಾಗೂ ಕಂಕನಾಡಿ ಯುವವಾಹಿನಿ ಸದಸ್ಯರಾದ ಸುವಾನ್ ಮತ್ತು ಜೇಷ್ಮಾ ಕಾರ್ಯಕ್ರಮ ನಿರೂಪಿಸಿದರು.
All the best to kankanadi new team
Yucca van in it once ashakirana