Yuvavahini

JUL 28, 2024 3.51 AM IST

ಮೂಡುಬಿದ್ರಿ ಯುವವಾಹಿನಿ ಘಟಕ

ಆಟಿದ ಕೂಟ – 2024

ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ
ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.

ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ ತನ್ನ ಬಾಲ್ಯದ ಕಹಿ ನೆನಪುಗಳನ್ನು ಹಂಚಿಕೊಂಡರು. ಇಂದಿನ ಪೀಳಿಗೆಯ ಮಕ್ಕಳು ಹೆತ್ತವರಿಗೆ ಗೌರವ ಕೊಟ್ಟು ಬದುಕಲು ಕಲಿಯಬೇಕೆಂದು ತಿಳಿ ಪಡಿಸಿದರು.

ಸನ್ಮಾನ

ಈ ಸುಸಂದರ್ಭದಲ್ಲಿ ಸೀತಾರಾಮ್ ಕಟೀಲು, ಭಾರತ್ ಬ್ಯಾಂಕ್ ಮಾಜಿ ಮ್ಯಾನೇಜರ್ ಸತೀಶ್ ಎನ್. ಬಂಗೇರ, ಸಮಾಜ ಸೇವಕ ಉಮೇಶ್ ಕೋಟ್ಯಾನ್, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸಿದ ಕರಾಟೆ ಪಟು ಕುಮಾರಿ ಹರ್ಷ ಯು.ಕೋಟ್ಯಾನ್ ಗೌರವಿಸಿ ಸನ್ಮಾನಿಸಲಾಯಿತು.

ಮುಖ್ಯ ಅತಿಥಿ ಗಂಜಿಮಠ ಪಂಚಾಯಿತಿ ಅಧ್ಯಕ್ಷೆ ಮಾಲತಿ ಗೋಪಿನಾಥ್ ಆಟಿ ತಿಂಗಳ ಬಗ್ಗೆ ಮತ್ತು ಉದ್ದೇಶಗಳ ಬಗ್ಗೆ ಹಿತ ವಚನ ನೀಡಿದರು. ಯುವವಾಹಿನಿ (ರಿ ) ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಭಾಗವಹಿಸಿ ಶುಭ ಹಾರೈಸಿದರು.

ಯುವವಾಹಿನಿ ಸದಸ್ಯರು ಸೇರಿ ಸುಮಾರು 65 ಬಗೆಯ ವಿವಿಧ ತಿಂಡಿ ತಿನಸುಗಳನ್ನು ಮನೆಯಲ್ಲಿ ತಯಾರಿಸಿ ತಂದು ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದು, ಒಟ್ಟು 350 ಸದಸ್ಯರು ಕೂಟದಲ್ಲಿ ಭಾಗವಹಿಸಿದ್ದರು.
ಸದಸ್ಯರಿಗೆ ಮನೋರಂಜನೆ ಆಟಗಳನ್ನು ಆಡಿಸಿ ಬಹುಮಾನ ವಿತರಿಸಲಾಯಿತು.

ಸೌಮ್ಯ ಎಂ. ಕೋಟ್ಯಾನ್ ಮತ್ತು ಸುಧಾಕರ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!