ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಮತ್ತು ಯುವವಾಹಿನಿ ಘಟಕಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇದರ ಸಹಯೋಗದೊಂದಿಗೆ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ 04-08-2024 ರಂದು ರವಿವಾರ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರು ಬ್ರಿಜೇಶ್ ಚೌಟ, ಶಾಸಕರು ವೇದವ್ಯಾಸ ಕಾಮತ್, ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್.ಕೆ.ಪೂಜಾರಿ, ಆರೋಗ್ಯ ನಿರ್ದೇಶಕರು ತಾರಾನಾಥ್ ಕೋಟ್ಯಾನ್ ಸೂರಾಲು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 80ಕ್ಕೂ ಅಧಿಕ ಮಂದಿ ರಕ್ತದಾನ ಗೈದರು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡ ಜನರು ಸಾಮಾನ್ಯ ಆರೋಗ್ಯ ತಪಾಸಣೆ , ಬಿಪಿ , ಶುಗರ್ ತಪಾಸಣೆ, ಹೃದಯ ರೋಗಕ್ಕೆ ಸಂಬಂಧಪಟ್ಟಂತೆ ಇಸಿಜಿ ಇನ್ನಿತರ ತಪಾಸಣೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.