Yuvavahini

AUG 15, 2024 4.02 AM IST

ಯುವವಾಹಿನಿ (ರಿ.) ಕೂಳೂರು ಘಟಕ

ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸುಸಂದಭ೯ದಲ್ಲಿ ಧ್ವಜಾರೋಹಣವನ್ನು ಘಟಕದ ಮಾಗ೯ದಶ೯ಕರಾದ ಜಯಾನಂದ ಅಮೀನ್ ಇವರು ನಡೆಸಿಕೊಟ್ಟರು. ನಂತರ ಮಾಗ೯ದಶ೯ಕರು ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಈ ದಿನ ನೆನಪುಮಾಡಿ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು. ವೇದಿಕೆಯಲ್ಲಿದ್ದ ಮಾಜಿ ಸೇನಾನಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ ಮಾಡಿ ಪ್ರಾಣತೆತ್ತ ಹೋರಾಟಗಾರರನ್ನು ನೆನಪು ಮಾಡಿಕೊಂಡು ನಮ್ಮಂತ ಸೈನಿಕರನ್ನು ಗುರುತಿಸಿಕೊಂಡು ಇಂದಿನ ಸಭೆ ಸಮಾರಂಭಗಳಿಗೆ ಆಮಂತ್ರಿಸುವುದು ತುಂಬಾ ಸಂತೋಷವಾಗಿದೆ ಎಂದರು.

ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮಾತನಾಡಿ ಘಟಕದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷವೂ ಆಚರಿಸಬೇಕೆಂದರು ಹಾಗೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಹಲವು ವೀರರನ್ನು ನಾವು ಮರೆತಿದ್ದೇವೆ. ಅವರು ಅಂದು ಮಾಡಿದ ಹೋರಾಟ ಇಂದು 78ನೇ ವಷ೯ದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್ ವಹಿಸಿ ಮಾತನಾಡಿದ ಅವರು ಘಟಕದಲ್ಲಿ ಕಳೆದ 3ವಷ೯ದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ನಾವು ಆಚರಿಸಿಕೊಂಡು ಬಂದಿರುವೆವು. ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪುಮಾಡಿಕೊಳ್ಳುವುದು. ನಮ್ಮ ಕತ೯ವ್ಯವಾಗಿರುತ್ತದೆ ಎಂದರು. ವೇದಿಕೆಯಲ್ಲಿ ದ್ವಿತೀಯ ಉಪಾಧ್ಯಕ್ಷರಾದ ಗೀತಾ ವಸಂತ್, ಸಂಚಾಲಕರಾದ ಸಂಘಟನಾ ಕಾರ್ಯದರ್ಶಿ ಮುಕೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ನಯನ ರಮೇಶ್, ದೀಕ್ಷಿತ್ ಸಿ.ಎಸ್ ಮಾಗ೯ದಶ೯ಕರಾದ ಚಂದಪ್ಪ ಸನಿಲ್, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಘಟಕದ ಸದಸ್ಯರಾದ ಸುಷ್ಮಾ ಇವರು ದೇಶಭಕ್ತಿ ಗೀತೆಯನ್ನು ಹಾಡಿದರು. ಮಾಜಿ ಅಧ್ಯಕ್ಷರಾದ ದೀಕ್ಷಿತ್ ಸಿಎಸ್ ಕಾಯ೯ಕ್ರಮವನ್ನು ನಿರೂಪಿಸಿದರು. ಸಮಾರಂಭದ ಕೊನೆಯಲ್ಲಿ ಲಘು ಉಪಹಾರದ ವ್ಯವಸ್ಥೆ ಮಾಡಿರುವರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!