Yuvavahini

AUG 26, 2024 2.51 PM IST

ಯುವವಾಹಿನಿ (ರಿ) ಬಂಟ್ವಾಳ ಘಟಕ

ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು- ಮಂಜುನಾಥನ್ ಎಂ.ಜಿ

ಬಂಟ್ವಾಳ: ದೇಶದ ಭವಿಷ್ಯವು ಯುವಶಕ್ತಿಯ ಕೈಯಲ್ಲಿದೆ. ನಾವು ನಿತ್ಯ ಬಳಸುವ ಬೆಲೆಬಾಳುವ ವಸ್ತುಗಳಿಗಿಂತಲೂ ಅಮೂಲ್ಯವಾದದು ಯುವಶಕ್ತಿ. ಯುವ ಮನಸ್ಸುಗಳಿಗೆ ಸರಿಯಾದ ದಾರಿ ಮತ್ತು ಮಾರ್ಗದರ್ಶನವನ್ನು ನೀಡಿದರೆ ಅವರೇ ಆಸ್ಥಿಯಾಗುತ್ತಾರೆ.

ಎಲ್ಲಾ ಧರ್ಮಗಳಿಗಿಂತಲೂ ಮಾನವ ಧರ್ಮವೇ ಶ್ರೇಷ್ಠವಾದದ್ದು. ವ್ಯಕ್ತಿ ಗೌರವ, ಸ್ನೇಹ,ವಿಶ್ವಾಸದ ಒಳ್ಳೆಯ ನಡೆನುಡಿಯ ಮೂಲಕ ಶ್ರೇಷ್ಠ ವ್ಯಕ್ತಿತ್ವವನ್ನು ನಿರ್ಮಾಣ ಮಾಡಬಹುದು. ನಾರಾಯಗುರುಗಳ ಚಿಂತನೆ ಯುವಸಮುದಾಯಕ್ಕೆ ಚೈತನ್ಯವನ್ನು ತುಂಬುವ ಕೆಲಸವನ್ನು ಮಾಡುತ್ತದೆ.

ಎಲ್ಲರೊಳಗೊಂದಾಗಿ, ಒಳ್ಳೆಯ ಮನುಷ್ಯರಾಗಿ ಬದುಕುವುದು ನಾರಾಯಣ ಗುರು ಚಿಂತನೆಯ ಆಶಯವಾಗಿದೆ. ಯುವ ಪೀಳಿಗೆಗೆ ನಮ್ಮ ದೇಶದ ಸಂತರ ರಾಷ್ಟ್ರೀಯ ಹೋರಾಟಗಾರರ ಚಿಂತನೆಯನ್ನು ಸರಿಯಾದ ರೀತಿಯಲ್ಲಿ ಮುಟ್ಟಿಸುವ ಕೆಲಸವು ಅಗತ್ಯವಾಗಿ ನಡೆಯಬೇಕು. ಜಾತಿ ಮತಗಳನ್ನು ಮೀರಿದ ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ಬಂಟ್ವಾಳ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಅಭಿಪ್ರಾಯ ಪಟ್ಟರು.

ಅವರು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬಂಟ್ವಾಳ ಸಹಯೋಗದೊಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸಹಯೋಗದಲ್ಲಿ ನಾರಾಯಣಗುರು ಸಭಾಭವನ ಗಾಣದಪಡ್ಪುವಿನಲ್ಲಿ ನಡೆದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ “ನಾರಾಯಣ ಗುರು ಚಿಂತನೆಯ” ಕುರಿತ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಮಾತನಾಡಿ ನಾರಾಯಣಗುರುಗಳು ಒಂದೇ ಜಾತಿಗೆ ಸೀಮಿತರಾದವರಲ್ಲ. ನಾರಾಯಣ ಗುರುಗಳ ಚಿಂತನೆ ಇಂದಿಗೂ ಪ್ರಸ್ತುತವಾದದ್ದು. ಯುವ ಜನತೆಗೆ ನಾರಾಯಣಗುರುಗಳ ಚಿಂತನೆಯನ್ನು ಮುಟ್ಟಿಸುವ ಕೆಲಸ ಅಗತ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ವಹಿಸಿ ಕಾರ್ಯಕ್ರಮದ ಅಗತ್ಯತೆ ಪ್ರಸ್ತುತತೆ ಕುರಿತು ಮಾತನಾಡಿದರು‌. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಮೋಹನ್ ಮಾಡೂರು ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು.

ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸಂಘದ ಕಾರ್ಯದರ್ಶಿ ರಮೇಶ್ ಎಂ ತುಂಬೆ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ವಿದ್ಯಾರ್ಥಿ ಸಂಘಟನೆ ನಿರ್ದೇಶಕ ಬ್ರಿಜೇಶ್ ಕಂಜತ್ತೂರು ಉಪಸ್ಥಿತರಿದ್ದರು. ದ್ವಿತೀಯ ಉಪಾಧ್ಯಕ್ಷ ನಾಗೇಶ್ ನೈಬೇಲು ಸ್ವಾಗತಿಸಿದರು. ಕಾರ್ಯದರ್ಶಿ ಚೇತನ್ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!