Yuvavahini

AUG 31, 2024 2.40 PM IST

ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ

ತರಬೇತಿ ಕಾರ್ಯಗಾರ

ಉಪ್ಪಿನಂಗಡಿ: ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ, ಘಟಕದ ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿನಾಂಕ 18-08-2024 ರಂದು ರೋಟರಿ ಸಭಾಭವನ ಉಪ್ಪಿನಂಗಡಿಯಲ್ಲಿ ನಡೆಸಲಾಯಿತು.

ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಪ್ಪಿನಂಗಡಿ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ಅಧ್ಯಕ್ಷರು ಹಾಗೂ ಘಟಕದ ಗೌರವ ಸಲಹೆಗಾರರೂ ಆಗಿರುವ ಶ್ರೀ ವರದಾರಾಜ್ ಎಂ. ದೀಪ ಬೆಳಗಿಸಿ ಉದ್ಘಾಟಿಸಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಖ್ಯಾತ ದಂತ ವೈದ್ಯರು ಶ್ರೀಯುತ ಡಾ. ರಾಜಾರಾಮ್ ಕೆ.ಬಿ.ಯವರು ಸಂಘಟನೆ ಮತ್ತು ನಾಯಕತ್ವ ವಿಷಯದಲ್ಲಿ ಮಾಹಿತಿ ನೀಡಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವಿಶು ಕುಮಾರ್ ದತ್ತಿ ನಿಧಿಯ ಮಾಜಿ ನಿರ್ದೇಶಕರು, ಮಾಣಿ ಘಟಕದ ಮಾಜಿ ಅಧ್ಯಕ್ಷರು, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀ ಪ್ರಶಾಂತ್ ಅನಂತಾಡಿ ಯವರು ಯುವವಾಹಿನಿ ಸಂಘಟನೆ ಮತ್ತು ಸದಸ್ಯರುಗಳ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರು ಶ್ರೀ ಅಶೋಕ್ ಕುಮಾರ್ ಪಡ್ಪು ಘಟಕದ ನೂತನ ಸದಸ್ಯರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಶುಭ ಹಾರೈಸಿದರು.

ಕೇಂದ್ರ ಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರು ಶ್ರೀ ಅಜಿತ್ ಕುಮಾರ್ ಪಾಲೇರಿ ಘಟಕಗಳು ತಮ್ಮ ಸದಸ್ಯರುಗಳಿಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಶುಭ ಹಾರೈಸಿದರು.

ಕುಮಾರಿ ಅಭಿಜ್ಞಾ ಪ್ರಾರ್ಥಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮನೋಹರ್ ಕುಮಾರ್ ಧನ್ಯವಾದ ಸಲ್ಲಿಸಿದರು. ಮಹಿಳಾ ಸಂಘಟಕಿ ಶ್ರೀಮತಿ ನಯನಾ ಮನೋಹರ್ ನಿರೂಪಿಸಿದರು. ಕಾರ್ಯದರ್ಶಿ ಶ್ರೀಮತಿ ಅನಿತಾ ಸತೀಶ್ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!