ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು.
ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ಸೌಮ್ಯ ಯೋಗೀಶ್ ಹಾಗೂ ಗ್ರಾಮಚಾವಡಿ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ಸುರೇಖ ಹರೀಶ್ ಪೂಜಾರಿ ಗುರು ಸಂದೇಶ ನೀಡಿದರು.
ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ .ಕೆ.ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಳೆದ 8 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಅಭಯಾಶ್ರಮದಲ್ಲಿ ಗುರು ಜಯಂತಿ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಗುರು ಜಯಂತಿಯ ಶುಭಾಶಯ ಕೋರಿದರು.
ಯುವವಾಹಿನಿ(ರಿ.) ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು, ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ್ ಮಾಡೂರು, ಕೊಲ್ಯ ಘಟಕದ ಮೊದಲನೆಯ ಉಪಾಧ್ಯಕ್ಷರಾದ ಶ್ರೀ ನಿತಿನ್ ಕರ್ಕೇರ ಮಾಡೂರು, ಗ್ರಾಮ ಚಾವಡಿ ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಕೊಣಾಜೆ ಗುರು ಜಯಂತಿಯ ಶುಭಾಶಯ ಕೋರಿದರು.
ಕುಮಾರಿ ಶ್ರೀರಕ್ಷಾ ಗುರುಗಳ ನಾಮ ಸಂಕೀರ್ತನೆ ಹಾಡಿದರು. ಅಭಯ ಆಶ್ರಯದ ಮೇಲ್ವಿಚಾರಕಿಯಾದ ಶ್ರೀಮತಿ ಭವಾನಿ ಎಲ್ಲರಿಗೂ ಧನ್ಯವಾದ ತಿಳಿಸಿದರು.
ವಿಶ್ವ ಬಿಲ್ಲವರ ಸೇವಾ ಚಾವಡಿಯ ಸಲಹೆಗಾರರು ಹಾಗೂ ಯುವವಾಹಿನಿ(ರಿ.) ಗ್ರಾಮಚಾವಡಿ- ಕೊಣಾಜೆ ಘಟಕದ ಕಾರ್ಯದರ್ಶಿಯಾದ ಶ್ರೀ ಅಜಿತ್ ಪೂಜಾರಿ ಧನ್ಯವಾದ ಸಮರ್ಪಿಸಿದರು.
ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಕಾರ್ಯದರ್ಶಿ ಹಾಗೂ ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಕುಸುಮಾಕರ್ ಕುಂಪಲ ಕಾರ್ಯಕ್ರಮ ನಿರೂಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ, ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.