Yuvavahini

JUL 31, 2016 11.43 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು * ಯುವವಾಹಿನಿ(ರಿ) ಉಡುಪಿ ಘಟಕ

ಶ್ರೇಷ್ಠ ನಾಯಕತ್ವದ ಹಾದಿಯಲ್ಲಿ ರಜತ್ ಕುಮಾರ್ ಎನ್.ಎಸ್.

ಬದುಕಿನಲ್ಲಿ ಸುನಿಶ್ಚಿತ ಗುರಿಯುಳ್ಳ ಇತ್ಯಾತ್ಮಕ ಸಾಧನೆಯ ಮುಂಚೂಣಿ ಮತ್ತು ಮುನ್ನಗ್ಗುವ ಎದೆಗಾರಿಕೆಯುಳ್ಳ ಯುವಜನರಲ್ಲಿ ಕೆಲವೇ ಕೆಲವರು ವಿದ್ಯಾರ್ಥಿ ಜೀವನದಲ್ಲಿ ಸ್ವಯಂಪ್ರೇರಿತವಾಗಿ ಉತ್ತಮ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಯಶಸ್ವೀ ನಾಯಕರಾಗುತ್ತಾರೆ. ಇಂತಹದ್ದೇ ಒಂದು ಮನೋಧರ್ಮದವರಾಗಿದ್ದು ರಾಷ್ಟ್ರ ಚಿಂತನೆಯ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ರಾಜ್ಯಪಾಲರಿಂದ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ (2014-15 ರಲ್ಲಿ) ಬಾಚಿಕೊಂಡ ಓರ್ವ ವಿದ್ಯಾರ್ಥಿಯ ಯಶೋಗಾಥೆ ಇದು.

ಆತ ಬೇರಾರೂ ಅಲ್ಲ; ಪುತ್ತೂರಿನ ಶ್ರೀ N. ಶೀನಪ್ಪ ಪೂಜಾರಿ- ರೇಖಾ ದಂಪತಿಗಳ ಹೆಮ್ಮೆಯ ಪುತ್ರ ಶ್ರೀ ರಜತ್ ಕುಮಾರ್ N.S. ಕಲಿಕೆಯಲ್ಲಿ SSLC ಯಲ್ಲಿ 73%, ಪಿಯುಸಿಯಲ್ಲಿ 90.17% ಹಾಗೂ B.Comನಲ್ಲಿ 75% ಅಂಕಗಳಿಸಿ ಕಲಿಕೆಯಲ್ಲಿ ತನ್ನ ಶ್ರೇಷ್ಠತೆಯನ್ನು ಸಾಬೀತು ಪಿಡಿಸಿ NCCಯಲ್ಲಿ ರಾಷ್ಟಪ್ರೇಮದ ಪಾಠ ಕಲಿತು A,B ಹಾಗೂ C ಸರ್ಟಿಫಿಕೇಟ್ ಗಳಿಸಿರುವುದು ಒಂದು ಅಸಾಧಾರಣ ಸಾಧನೆಯೇ ಸರಿ.

ಇದರೊಂದಿಗೆ ಸಮಾಜ ಸೇವೆಯ ಮೂಲಭೂತ ತತ್ವ ಮೈಗೂಡಿಸಿಕೊಳ್ಳಲು ಪೂರಕವಾದ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯಲ್ಲೂ ತನ್ನನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡು 2015 ರ ಮಂಗಳೂರು ವಿಶ್ವವಿದ್ಯಾಲಯದ ಸರ್ವಶ್ರೇಷ್ಠ NSS ಸ್ವಯಂಸೇವಕ ಪ್ರಶಸ್ತಿ; ಕರ್ನಾಟಕ ರಾಜ್ಯದಲ್ಲೇ ’ಸರ್ವಶ್ರೇಷ್ಠ NSS ಸ್ವಯಂಸೇವಕ’ ಪ್ರಶಸ್ತಿಯನ್ನು ರಾಜ್ಯಪಾಲ ಗೌ| ವಜೂಭಾಯಿವಾಲರಿಂದ ಪಡೆದು ಜಿಲ್ಲೆಗೇ ಹೆಸರು ತರುವ ಮಹೋನ್ನತ ಸಾಧನೆ ಮಾಡಿರುತ್ತಾರೆ. ಇದು ರಜತ್ ಕುಮಾರ್ ಸೇವಾ ಮನೋಭಾವಕ್ಕೆ ಸಂದ ಗೌರವ.

ಶ್ರೇಷ್ಠ ನಾಯಕತ್ವ ಗುಣಗಳಿಂದ ಕೂಡಿದ ಈ ಯುವಕ ಓರ್ವ ಸರ್ವಶ್ರೇಷ್ಠ ವಿದ್ಯಾರ್ಥಿ ಹಾಗೂ ಸೇವಾ ಮನೋಭಾವ ಶ್ರೇಷ್ಠ ಎಂದು St. ಅಲೋಶಿಯಸ್ ಕಾಲೇಜಿನಲ್ಲಿ ಸಾದರ ಪಡಿಸಿ ರಾಷ್ಟ್ರ ಮಟ್ಟದ ಗಣರಾಜ್ಯ ಪೆರೇಡ್‌ಗೆ ಕರ್ನಾಟಕದಿಂದ ಆಯ್ಕೆಯಾದ ಬೆರಳೆಣಿಕೆಯ ವಿದ್ಯಾರ್ಥಿಗಳಲ್ಲಿ ಒಬ್ಬ.

ಪ್ರತಿಭೆ ಎಂಬುವುದು ಸರ್ವತೋಮುಖವಾಗಿದ್ದರೆ ಅದು ಸಮರ್ಥ ನಾಯಕತ್ವಕ್ಕೆ ಬುನಾದಿ ಇಂಥ ಸಾಧನೆಯ ಪ್ರತಿಭೆ ಶ್ರೀ ರಜತ್ ಕುಮಾರ್ N.S ಇವರನ್ನು ಯುವವಾಹಿನಿ ಅಭಿನಂದಿಸುತ್ತಾ ಯುವವಾಹಿನಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!