Yuvavahini

SEP 15, 2024 6.23 AM IST

ಯುವವಾಹಿನಿ (ರಿ.) ಕೂಳೂರು ಘಟಕ

ಸ್ವ ಉದ್ಯೋಗ ಮಾಹಿತಿ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸಂಗೀತ ಇವರ ಸಂಚಾಲಕತ್ವದಲ್ಲಿ ದಿನಾಂಕ 15-09-2024 ಆದಿತ್ಯವಾರದಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಸ್ವ ಉದ್ಯೋಗ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಿದ್ಯಾ ರಾಕೇಶ್ ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಸಾಲ ಪದಾರ್ಥ ತಯಾರಿ, ಕೃತಕ ಆಭರಣ ತಯಾರಿ, ಸಾರೀ ಗೊಂಡೆ ಹಾಕುವ ಬಗ್ಗೆ ತಿಳಿಸಿಕೊಟ್ಟರು. ಇದು ಕೇವಲ ಹೆಣ್ಣು ಮಕ್ಕಳು ಮಾತ್ರವಲ್ಲ. ಯಾರೂ ಬೇಕಾದರೂ ಮಾಡಬಹುದು. ಇದರಿಂದ ಸಂಪಾದನೆ ಕೂಡಾ ಮಾಡಬಹುದು. ನನ್ನ ಬಳಿ ತರಬೇತಿ ಪಡೆದವರಲ್ಲಿ ಕೆಲವರು ಇದರಿಂದ ಆದಾಯ ಗಳಿಸುತ್ತಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ಮಾತನಾಡಿ ಹಿಂದಿನ ಕಾಲದಲ್ಲಿ ಅಡುಗೆ ಮನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದ ಕಾಲವಿತ್ತು, ಆದರೆ ಈಗ ಹಾಗಲ್ಲ ಎಲ್ಲ ಕ್ಷೇತ್ರಗಳಲ್ಲೂ ನಾವು ಮುಂಚೂಣಿಯಲ್ಲಿ ಇದ್ದೇವೆ. ಸ್ವಂತ ಆದಾಯವನ್ನು ಗಳಿಸಲು ಅನುಕೂಲವಾಗುವಂತೆ ಇಂತಹ ಸ್ವ ಉದ್ಯೋಗದಂತಹ ಕಾಯ೯ಕ್ರಮಗಳನ್ನು ಹಮ್ಮಿಕೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು.

ವೇದಿಕೆಯಲ್ಲಿ ಕಾರ್ಯಕ್ರಮದ ಸಂಚಾಲಕರಾದ ಸಂಗೀತ, ಕಾರ್ಯದರ್ಶಿ ಶ್ರೀಮತಿ ನಯನ ಕೋಟ್ಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ನಯನ ರಮೇಶ್, ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಎರಡನೇ ಉಪಾಧ್ಯಕ್ಷರಾದ ಶ್ರೀಮತಿ ಗೀತಾ, ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸದಸ್ಯರ ಬಂಧುಗಳು ಉಪಸ್ಥಿತರಿದ್ದರು.

ಮೋಕ್ಷ ಪ್ರಾಥಿ೯ಸಿದರು. ಕೋಶಾಧಿಕಾರಿ ವಿಘ್ನೇಶ್ ಬೋಳೂರು ಕಾಯ೯ಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಸಂಚಾಲಕಿ ಸಂಗೀತ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!