Yuvavahini

SEP 15, 2024 6.26 AM IST

ಯುವವಾಹಿನಿ (ರಿ.) ಉಡುಪಿ ಘಟಕ

ಶಿಕ್ಷಕರ ದಿನಾಚರಣೆ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ 15-09-2024 ರಂದು ಉಡುಪಿಯಲ್ಲಿ ಜರುಗಿತು. ಮುಖ್ಯ ಅತಿಥಿ ಶಿಕ್ಷಣ ತಜ್ಞ ರವೀಂದ್ರ ಪೂಜಾರಿ ಅಡ್ವೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹಾಗೂ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಘಟಕದ ಉಪಾಧ್ಯಕ್ಷರು ದಯಾನಂದ ಉಗ್ಗೆಲ್ಬೆಟ್ಟು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಡ್ವೆ ರವೀಂದ್ರ ಪೂಜಾರಿಯವರು “ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಪಾಠ ಬೋಧನೆಯ ಜೊತೆಗೆ ಜೀವನ ಸಂಗತಿಗಳನ್ನು ಜೀವನ ಮೌಲ್ಯಗಳು ತಿಳಿಸಿ” ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು ರವಿರಾಜ್ ತನ್ನ ಹತ್ತು ವರ್ಷಕ್ಕೂ ಮಿಕ್ಕಿದ ಉಪನ್ಯಾಸ ವೃತ್ತಿಯ ದಿನಗಳ ನೆನಪನ್ನು ಮೆಲುಕು ಹಾಕಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೇರೆ ಬೇರೆ ಕ್ಷೇತ್ರದಲ್ಲಿ ಶಿಕ್ಷಕ ವೃತ್ತಿಯನ್ನು ನಡೆಸುತ್ತಿರುವ ಘಟಕದ ಸದಸ್ಯರನ್ನು ಹೂ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು.

ಘಟಕದ ಅಧ್ಯಕ್ಷರು ಅಮಿತಾಂಜಲಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಧನ್ಯವಾದಗಳೊಂದಿಗೆ ಕಾರ್ಯಕ್ರಮದ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!