Yuvavahini

SEP 05, 2024 1.56 PM IST

ಯುವವಾಹಿನಿ (ರಿ) ಕೊಣಾಜೆ ಗ್ರಾಮಚಾವಡಿ - ಶಿಕ್ಷಕರ ದಿನಾಚರಣೆ

ಶಿಕ್ಷಣ – ಶಿಕ್ಷಕರ ವೃತ್ತಿಯ ಬಗ್ಗೆಯೂ ಒಲವು ಹೆಚ್ಚಾಗಲಿ: ಗಂಗಾಧರ ಪೂಜಾರಿ

ಕೊಣಾಜೆ : ಪ್ರಸ್ತುತ ಕಾಲದಲ್ಲಿ ತಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಆಗಬೇಕೆಂದು ಬಯಸುವವರೇ ಹೆಚ್ಚು. ಆದರೆ ಶಿಕ್ಷಕರಾಗಬೇಕೆನ್ನುವವರು ಬಹಳ ಕಡಿಮೆ. ಎಲ್ಲಾ ವೃತ್ತಿಯ ಮೂಲ ಬೇರು ಆಗಿರುವ ಶಿಕ್ಷಕ ವೃತ್ತಿಯೇ ಅತ್ಯಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವೃತ್ತಿಯ ಬಗ್ಗೆಯೂ ಹೆಚ್ಚು ಒಲವು ಅಗತ್ಯ ಎಂದು ನಿವೃತ್ತ ಶಿಕ್ಷಕರಾದ ಗಂಗಾಧರ ಪೂಜಾರಿ ಅವರು ಹೇಳಿದರು.‌

ಅವರು ಕೊಣಾಜೆ ಗ್ರಾಮ ಚಾವಡಿಯ ಯುವವಾಹಿನಿ (ರಿ) ಘಟಕದ ವತಿಯಿಂದ ಗುರುವಾರ 05-09-2024 ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಮನೆಯೇ ಮೊದಲ ಪಾಠ ಶಾಲೆ. ಹಿಂದೆ ಕೂಡು ಕುಟುಂಬದಲ್ಲಿ ಹಿರಿಯರಿಂದ ಕಿರಿಯರಿಗೆ ಜೀವನದ ಶಿಕ್ಷಣದ ಅನುಭವ ಸಿಗುತ್ತಿದ್ದು, ಆದರೆ ಇಂದು ವಿಭಕ್ತ ಕುಟುಂಬದಿಂದ ಇಂತಹ ಅನುಭವ ದೂರವಾಗಿದೆ. ಯಾವುದೇ ಗುರಿಯನ್ನು ತಲುಪಬೇಕಾದರೆ ಗುರುವಿನ ಮಾರ್ಗದರ್ಶನ ಅತೀ ಅಗತ್ಯ ಎಂದರು.

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರು ರವೀಂದ್ರ ಬಂಗೇರ ಮುಖ್ಯ ಅತಿಥಿಯಾಗಿ ಮಾತನಾಡಿ, ಗುರುಗಳ ಮಾರ್ಗದರ್ಶನವಿಲ್ಲದೆ ನಾವು ಮುನ್ನಡೆಯಲು ಸಾಧ್ಯವಿಲ್ಲ. ಇಂತಹ ಗುರು ವೃತ್ತಿಯಲ್ಲಿರುವವರನ್ನು ಯುವವಾಹಿನಿ ಘಟಕವು ಗ್ರಾಮಚಾವಡಿಯಲ್ಲಿ ಅಭಿನಂದಿಸುವ ಕಾರ್ಯ ಮಾಡಿರುವುದು ಅಭಿನಂದನೀಯ ಎಂದರು.‌

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾಮಚಾವಡಿ ಯುವವಾಹಿನಿ ಘಟಕದ ಅಧ್ಯಕ್ಷರು ಹರೀಶ್ ಪೂಜಾರಿ ಯುವವಾಹಿನಿ ಘಟಕದ ವತಿಯಿಂದ ಶಿಕ್ಷಕರನ್ನು ಗೌರವಿಸಲಾಗಿದೆ. ಮುಂದಿನ ದಿನಗಳಲ್ಲಿ ಘಟಕದ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಸುವರ್ಣ ,‌ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು ನಾಗೇಶ್ ಅಮೀನ್ ಮುಲ್ಲಕಾಡು,‌ ಸಮಾಜ ಸೇವಾ ನಿರ್ದೇಶಕಿ ಬಬಿತಾ ಯಾದವ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕರು ಸುನೀತಾ, ಸುರೇಖಾ ಹರೀಶ್ ಪೂಜಾರಿ, ಅನಿತಾ ಜಯಂತ್, ಡಾ.ಸಂಜಿತ್ ಎಸ್ ಅಂಚನ್ , ಸೌಮ್ಯ, ದಯಾವತಿ, ರೋಹಿತ್ ಪೂಜಾರಿ, ಗುರುರಾಜ್ ಪರಂಡೆ, ಅವರನ್ನು ಯುವವಾಹಿನಿ ಗ್ರಾಮಚಾವಡಿ ಘಟಕದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಸಮಾಜ ಸೇವಾ ನಿರ್ದೇಶಕಿ ಬಬಿತಾ ಸ್ವಾಗತಿಸಿದರು.

ಸಂಘಟನಾ‌ ಕಾರ್ಯದರ್ಶಿ ಸುರೇಶ್ ಪೂಜಾರಿ ವಂದಿಸಿದರು.

ಅಜಿತ್ ಹಾಗೂ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.‌

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!