Yuvavahini

SEP 15, 2024 2.28 PM IST

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ – ಮನಸ್ಸು – ಅಂತರಾಳದ ಅವಲೋಕನ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ “ಮನಸ್ಸು ಅಂತರಾಳದ ಅವಲೋಕನ” ಕಾರ್ಯಕ್ರಮ 15-09-2024 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಯಾಟಕರು ಉದ್ಯಮಿಗಳು ಅನ್ನಪೂರ್ಣ ಮೆಟಲ್‌ ಬೆಳ್ತಂಗಡಿ ರಕ್ಷಾ ರಾಫ್ಲೇಶ್ ರವರು ಪ್ರಸ್ತುತ ಕಾಲಘಟ್ಟದಲ್ಲಿ ಯುವ ಜನತೆಗೆ ಇಂತಹ ಕಾರ್ಯಕ್ರಮ ಅತ್ಯಂತ ಅಗತ್ಯ ಇದೆ. ಯುವವಾಹಿನಿ ಇಂತಹ ಹಲವಾರು ಸಮಾಜಮುಖಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಇನ್ನಷ್ಟು ಸಮಾಜಕ್ಕೆ, ಯುವ ಜನತೆಗೆ ಉಪಯೋಗ ಆಗುವಂತಹ ಕೆಲಸಗಳು ಘಟಕ ಮತ್ತು ಮಹಿಳಾ ಸಂಚಾಲನಾ ಸಮಿತಿಯಿಂದ ನಡೆಯಲಿ ಎಂದು ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹರ್ಷಿತಾ ಎಂ. ವಿ, ಶೈಕ್ಷಣಿಕ ಆಪ್ತ ಸಮಾಲೋಚಕರು ಕೇಂದ್ರೀಯ ವಿದ್ಯಾಲಯ ಉಡುಪಿ, ಇವರು ಮಾಹಿತಿ ನೀಡುತ್ತಾ ಮಕ್ಕಳು ಮತ್ತು ಮಹಿಳೆಯರ ಮೇಲಾಗಿರುವ ದೌರ್ಜನ್ಯದ ಹಲವಾರು ನೈಜ ಘಟನೆಗಳನ್ನು ತಾನು ನಿರ್ವಹಣೆ ಮಾಡಿರುವ ತನ್ನ ಅನುಭವಗಳನ್ನು ಹಂಚಿಕೊಂಡರು.

ಪೋಷಕರು ಮಕ್ಕಳನ್ನುಅವರ ಮುಂದಿನ ಬದುಕು, ಭವಿಷ್ಯ ಭದ್ರತೆಯಿಂದ ಕೂಡಿರುವಂತೆ ಗಟ್ಟಿಗೊಳಿಸಬೇಕು. ತಲೆಯಲ್ಲಿ ಯುಕ್ತಿ ಮನಸ್ನಲ್ಲಿ ಭಕ್ತಿ ತೋಳಿನಲ್ಲಿ ಶಕ್ತಿ ಬೆಳೆಸಿಕೊಳ್ಳುವಂತೆ ಮಕ್ಕಳನ್ನು ನಾವು ಬೆಳೆಸಬೇಕು, ಹಾಗೂ ಸಾಮಾಜಿಕ ಜಾಲತಾಣದ ಒಳಿತು ಕೆಡುಕುಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರು ಸದಾಶಿವ ಊರ ಇಂತಹ ಜಾಗ್ಯತಿ ಕಾರ್ಯಕ್ರಮಗಳಿಂದ ಮಾತ್ರ ಜನತೆ ಜಾಗೃತರಾಗಿ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

ವೇದಿಕೆಯಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್‌ ಕುಮಾರ್‌ ಮೂಡುಕೋಡಿ, ಮಹಿಳಾ ಸಂಚಾಲನ ಸಮಿತಿ ಸಂಚಾಲಕಿ ಪನಿತಾ ಜನಾರ್ಧನ್‌, ಘಟಕದ ಮಹಿಳಾ ನಿರ್ದೇಶಕಿ ಲೀಲಾವತಿ ವಸಂತ ಪೂಜಾರಿ ಉಪಸ್ಥಿತರಿದ್ದರು.

ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸುಜಾತ ಅಣ್ಣಿ ಪೂಜಾರಿ ಪ್ರಸ್ತಾವಿಕ ಮಾತಾನಾಡಿದರು.
ಸುಧಾಮಣಿ ಆರ್ ಸ್ವಾಗತಿಸಿದರು.
ಕನ್ನಿಕಾ ಕಾರ್ಯಕ್ರಮ‌ ನಿರೂಪಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!