Yuvavahini

OCT 06, 2024 4.59 PM IST

ಯುವವಾಹಿನಿ (ರಿ.) ಬೆಂಗಳೂರು ಘಟಕ

ಯುವವಾಹಿನಿ (ರಿ.) ಬೆಂಗಳೂರು ಘಟಕದ ಕುಟುಂಬ ಸಮ್ಮಿಲನ ಬಾಂಧವ್ಯ – 2024

ಬೆಂಗಳೂರು : ಘಟಕದ ಒಂದು ದಿನದ ಪ್ರವಾಸ ಕಾರ್ಯ ಯೋಜನೆಯು ದಿನಾಂಕ ಅಕ್ಟೋಬರ್ 6 ಆದಿತ್ಯವಾರದಂದು ಯಶಸ್ವಿಯಾಗಿ ನಡೆಯಿತು.

ಈ ಪ್ರವಾಸದಲ್ಲಿ ಘಟಕದ ಸದಸ್ಯರು ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ, ಮಠಾಧೀಶರಾದ ರಾಮನಗರ ಜಿಲ್ಲೆಯ ಸೋಲೂರು ಮಠ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನ ಮತ್ತು ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಗಳಿಗೆ ಭೇಟಿಕೊಟ್ಟು ಶ್ರೀದೇವರ ದರ್ಶನವನ್ನು ಮಾಡಿದರು.

ಬೆಳಿಗ್ಗೆ 9:00ಗೆ ಬೆಂಗಳೂರಿನ ಜೆಪಿ ನಗರದಿಂದ ಬಸ್ ಮೂಲಕ ಬಾಂಧವ್ಯದ ಪಯಣ ಆರಂಭಗೊಂಡಿತು.

ಸದಸ್ಯರು, ಪದಾಧಿಕಾರಿಗಳು ಸೇರಿ ಒಟ್ಟು 40 ಸದಸ್ಯರು ಈ ಕುಟುಂಬ ಸಮ್ಮಿಲನದಲ್ಲಿ ಪಾಲ್ಗೊಂಡಿದ್ದರು. ಮನೋರಂಜನೆ ಹಾಗೂ ಇತಿಹಾಸದಲ್ಲಿ ತಿಳಿದಿರದ ವಿಷಯಗಳ ಚರ್ಚೆಗಾಗಿ ಬಸ್ಸಿನಲ್ಲಿ ಪಡುಮಲೆ, ಕೋಟಿ ಚೆನ್ನಯ ಹಾಗೂ ಬೆಂಗಳೂರು ಘಟಕಕ್ಕೆ ಸಂಬಂಧಪಟ್ಟ ವಿಷಯಗಳ ರಸಪ್ರಶ್ನೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.

11:00 ಗಂಟೆಗೆ ಸರಿಯಾಗಿ ರಾಮನಗರ ಜಿಲ್ಲೆಯ ಸೋಲೂರು ಮಠ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ತಲುಪಿ, ಮೊದಲನೆಯದಾಗಿ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಗಳನ್ನು ಭೇಟಿ ಮಾಡಿ ಎಲ್ಲ ಸದಸ್ಯರ ಪರಿಚಯವನ್ನು ಮಾಡಿಸಿ, ಘಟಕದ ಬೆಳವಣಿಗೆ, ಘಟಕದ ಸಂಘಟನೆ ಹಾಗೂ ಘಟಕದ ಸಮಾಜಮುಖಿ ಸೇವೆಯ ಬಗ್ಗೆ ತಿಳಿಸಿ, ಘಟಕದ ದೊಡ್ಡ ಕನಸು ಬೆಂಗಳೂರು ಯುವವಾಹಿನಿಗೆ ಸ್ವಂತ ಸೂರು ಕಚೇರಿ-ಜಾಗ ಹೊಂದಬೇಕೆನ್ನುವ ಮನವಿಯನ್ನು ಪತ್ರದ ಮುಖೇನ ಸ್ವಾಮೀಜಿಗಳಿಗೆ ನೀಡಲಾಯಿತು.

ಶ್ರೀ ಕ್ಷೇತ್ರಕ್ಕೆ ನವರಾತ್ರಿ ಉತ್ಸವದ ಅನ್ನದಾನಕ್ಕಾಗಿ ಘಟಕದ ವತಿಯಿಂದ 5,000/- ರುಪಾಯಿಯ ಚೆಕ್ಕನ್ನು ದೇಣಿಗೆಯಾಗಿ ಸ್ವಾಮೀಜಿ ಗಳಿಗೆ ಹಸ್ತಾಂತರಿಸಲಾಯಿತು.

ಸ್ವಾಮೀಜಿಗಳ ಮಾರ್ಗದರ್ಶನದಂತೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆ ಹಾಗೂ ಎಲ್ಲಮ್ಮ ದೇವಿಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಲಾಯಿತು. ನಂತರ ಶ್ರೀ ಕ್ಷೇತ್ರದಲ್ಲಿ ಎಲ್ಲರೂ ಅನ್ನಪ್ರಸಾದವನ್ನು ಸ್ವೀಕರಿಸಿ ಸಂಜೆ 3:30ಕ್ಕೆ ಅಲ್ಲಿಂದ ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಪ್ರಯಾಣ ಬೆಳೆಸಿದರು.

4:30ಕ್ಕೆ ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನವನ್ನು ತಲುಪಿ ಶ್ರೀದೇವರ ದರ್ಶನವನ್ನು ಪಡೆದು ಪ್ರಸಾದವನ್ನು ಸ್ವೀಕರಿಸಿದರು. 5:30 ಕ್ಕೆ ಹೋಟೆಲಲ್ಲಿ ಚಾ- ತಿಂಡಿ ಸೇವಿಸಿ ಬೆಂಗಳೂರಿಗೆ ನಿರ್ಗಮಿಸಿದರು. ರಾತ್ರಿ 7:30 ಗಂಟೆಗೆ ಬೆಂಗಳೂರಿಗೆ ತಲುಪಿದರು.

ಕುಟುಂಬ ಸಮ್ಮಿಲನ ಪ್ರವಾಸ ಕಾರ್ಯಯೋಜನೆಯಲ್ಲಿ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಕಾರ್ಯದರ್ಶಿಗಳಾದ ಧನುಷ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀಧರ್ ಡಿ ಪೂಜಾರಿ, ಘಟಕದ ಗೌರವ ಸಲಹೆಗಾರರಾದ ಸುಧೀರ್ ಎಸ್ ಪೂಜಾರಿ, ಉಪಾಧ್ಯಕ್ಷರಾದ ಶಶಿಧರ್ ಕೋಟ್ಯಾನ್, 2ನೇ ಉಪಾಧ್ಯಕ್ಷರಾದ ಪ್ರಸಾದ್ ಕುಮಾರ್ CP, ನಿಕಟಪೂರ್ವ ಅಧ್ಯಕ್ಷರಾದ ಮಿತೇಶ್ ಕುಮಾರ್, ಜೊತೆಕಾರ್ಯದರ್ಶಿ ಅಶ್ವಿನಿ ಅಮೀನ್, ಕೋಶಾಧಿಕಾರಿಗಳಾದ ಚೇತನ್, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಂತೋಷ್ ಪೂಜಾರಿ, ಸಾಂಸ್ಕೃತಿಕ ನಿರ್ದೇಶಕರಾದ ಶರತ್ ಪೂಜಾರಿ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್, ಕ್ರೀಡಾ ನಿರ್ದೇಶಕರಾದ ಸುಧೀರ್, ಮಹಿಳಾ ಸಂಘಟನೆ ನಿರ್ದೇಶಕರಾದ ಪವಿತ್ರ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಸಂದೀಪ್ ಎಚ್, ವಿದ್ಯಾ ನಿಧಿ ನಿರ್ದೇಶಕರಾದ ಸುದರ್ಶನ್, ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಪುನೀತ್, ಸಂಘಟನಾ ಕಾರ್ಯದರ್ಶಿಗಳಾದ ಸಚಿಂದ್ರ ಕೋಟ್ಯಾನ್‍, ನವನೀತ್, ದಿವ್ಯ HL, ಶ್ವೇತ ಕೋಟ್ಯಾನ್‍, ತಶ್ವೀರ್, ಸದಸ್ಯರಾದ ಗೀತಾ, ಚಂದ್ರ ಪಿ, ಪ್ರೀತಿ ಕರ್ಕೇರಾ, ಸುಷ್ಮಾ ಪೂಜಾರಿ, ಕಿರಣ್, ಭಾವನ, ಕಿರಣ್ ಸೂಜಿ, ರಂಜಿತಾ,‌ ಪ್ರೀಯಾ ಮುಕೇಶ್ ಮತ್ತು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!