Yuvavahini

OCT 20, 2024 8.47 AM IST

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ಯುವವಾಹಿನಿಯ 35ನೇ ಘಟಕ – ಪೆರ್ಮಂಕಿ ಉದ್ಘಾಟನೆ

ಪೆರ್ಮಂಕಿ : ಯುವವಾಹಿನಿಯ 35 ನೇ ಘಟಕವಾಗಿ ಪೆರ್ಮಂಕಿ ಘಟಕವನ್ನು ನಾರಾಯಣಗುರು ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟೀ ಹಾಗೂ ಉದ್ಯಮಿ ಶೈಲೇಂದ್ರ ವೈ ಸುವರ್ಣ ಉದ್ಘಾಟಿಸಿದರು.
ವಿದ್ಯೆಯಿಂದ ಸ್ವಾವಲಂಬಿ ಬದುಕು ಸಾಧ್ಯ, ಈ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ಯುವವಾಹಿನಿಯ ಕೊಡುಗೆ ಅಪಾರ ಎಂದರು.
ಅವರು ದಿನಾಂಕ 20-10-2024 ರಂದು ವಿಶಾಲ್ ಗಾರ್ಡನ್, ಕೊಂಬೆಲ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತಾನಾಡಿದರು.

340 ಸದಸ್ಯರ ಬಲಿಷ್ಠ ಪೆರ್ಮಂಕಿ ತಂಡದ ಪ್ರಥಮ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಭೋದನೆ ನನ್ನ ಸೌಭಾಗ್ಯ ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ತಿಳಿಸಿದರು.

ಕರ್ನಾಟಕ ಧಾರ್ಮಿಕ ಪರಿಷತ್‌ನ ಮಾಜಿ ಸದಸ್ಯ ಪದ್ಮನಾಭ ಕೋಟ್ಯಾನ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಲ್ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಲ್ಲೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾಜಾರಾಮ್ ಕೋಟ್ಯಾನ್, ಪೆರ್ಮಂಕಿ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಭಜನಾ ಮಂದಿರ ಅಧ್ಯಕ್ಷ ಪ್ರವೀಣ್ ಅಂಚನ್, ಗುರುನಗರ ಸತ್ತಿಕಲ್ಲು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ದೀಕ್ಷಿತ್ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ನವೆಂಬರ್ 10ರಂದು ನಡೆಯುವ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು, ಈ ಸಂದರ್ಭದಲ್ಲಿ ವಿಶುಕುಮಾರ್ ದತ್ತಿನಿಧಿ ಸಂಚಾಲಕ ಸುರೇಶ್ ಪೂಜಾರಿ, ಹಾಗೂ ದತ್ತಿನಿಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು

ಯುವವಾಹಿನಿಯ ಮುಖವಾಣಿ ಯುವಸಿಂಚನ ಬಿಡುಗಡೆ
ಯುವವಾಹಿನಿ ಸಂಸ್ಥೆಯ ಮಾಸಿಕ ಪತ್ರಿಕೆ ಯುವಸಿಂಚನವನ್ನು ಬಿಡುಗಡೆಗೊಳಿಸಲಾಯಿತು, ಯುವಸಿಂಚನ ಸಂಪಾದಕ ದಿನಕರ್ ಡಿ ಬಂಗೇರ ಹಾಗೂ ಸಂಪಾದಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಪಾಲನ್ ನೂತನ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸಭೆಗೆ ಪರಿಚಯಿಸಿದರು.

ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಪಾಲನ್, ಸಮಾಜ ಸೇವಾ ನಿರ್ದೇಶಕರಾದ ಜಯರಾಮ್ ಪೂಜಾರಿ, ಶ್ರೀ ಗುರು ಚೆಂಡೆ ಸೆಟ್ ಪೆರ್ಮಂಕಿ ಇದರ ಪರವಾಗಿ ನಾಗೇಶ್ ಬಜಿಲೊಟ್ಟು, ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾ ಪ್ರತಿಭೆ ರಕ್ಷಿತ್.ಡಿ.ಬಂಗೇರ ಅವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಸ್ವಾಗತಿಸಿದರು. ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಪ್ರಸ್ತಾವನೆಗೈದರು. ಯುವವಾಹಿನಿ ಉಡುಪಿ ಘಟಕದ ಉಪಾಧ್ಯಕ್ಷ ದಯಾನಂದ್ ಉಪ್ಪೂರು ಹಾಗೂ ವಿದ್ಯಾ ರಾಕೇಶ್ ನಿರೂಪಿಸಿದರು. ಜೊತೆ ಕಾರ್ಯದರ್ಶಿ ರೇಖಾ ಗೋಪಾಲ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!