Yuvavahini

OCT 20, 2024 10.10 AM IST

ಯುವವಾಹಿನಿ (ರಿ ) ಉಡುಪಿ ಘಟಕ

ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20-10-2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ ವಾಸುದೇವ ಕೃಪಾ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿತ್ತು.

ಉಡುಪಿಯ ಖ್ಯಾತ ವಕೀಲರಾದ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲೂರು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ ದಾಸ್ ಉಡುಪರವರು ವಹಿಸಿದ್ದರು.

ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಎಲ್ಲರನ್ನೂ ಸ್ವಾಗತಿಸಿದರು.

ಸ್ಥಳೀಯ ಸಂಸ್ಥೆ ಕಲಾ ಕಿರಣ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಅರುಣ್ ಶೆಟ್ಟಿಯವರು ವಂದಿಸಿದರು.

ಕರ್ನಾಟಕ ಜಾನಪದ ಪರಿಷತ್, ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿಗಳಾದ ಶ್ರೀ ರವಿರಾಜ್ ನಾಯಕ್ ಅವರು ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಣೆ ಮಾಡಿದರು.

ಸಮುದಾಯ ಆರೋಗ್ಯ ವಿಭಾಗ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಉಡುಪಿ ಜಿಲ್ಲಾಸ್ಪತ್ರೆ, ಉಡುಪಿ ಜಿಲ್ಲಾ ರಕ್ತ ನಿಧಿ ಕೇಂದ್ರದ ಜೊತೆಗೆ ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ ಇನ್ನಿತರ ಸಂಸ್ಥೆಗಳು ಮಹಿಷಮರ್ದಿನಿ ಕ್ರಿಕೆಟರ್ಸ್ ಬೈಲೂರು, ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ. ಈ ಮೇಲಿನ ಎಲ್ಲಾ ಸಂಸ್ಥೆಗಳ ಅಧ್ಯಕ್ಷರುಗಳು, ಜಿಲ್ಲಾ ಸರ್ಜನ್ ಶ್ರೀ ಅಶೋಕ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ನಿಶಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ಥಳೀಯರು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

ಯುವವಾಹಿನಿ ಉಡುಪಿ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಪ್ರವೀಣ್ ಬೈಲೂರು ಇವರ ಮುತುವರ್ಜಿಯಲ್ಲಿ ಸಂಪೂರ್ಣ ಶಿಬಿರದ ಕಾರ್ಯ ಚಟುವಟಿಕೆಗಳು ನಡೆದವು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!