Yuvavahini

SEP 08, 2024 5.07 AM IST

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸಂಘಟನೆಯಿಂದ ಸಾಮಾಜಿಕ ಬಲವರ್ಧನೆ ಸಾಧ್ಯವಿದ್ದು, ಸಂಘಟನೆಯೊಂದು ಸಮಾಜಮುಖಿಯಾದ ತನ್ನ ಚಿಂತನೆಗಳಲ್ಲಿ ರಚನಾತ್ಮಕತೆಯನ್ನು ಅಳವಡಿಸಿಕೊಂಡಾಗ ಅದು ಸರ್ವಮಾನ್ಯತೆಯನ್ನು ಪಡೆದುಕೊಳ್ಳುತ್ತದೆ : ಉದ್ಯಮಿ ಲೋಕೇಶ್ ಪೂಜಾರಿ

ಮಂಗಳೂರು : ಯುವವಾಹಿನಿ (ರಿ) ಕಂಕನಾಡಿ ಘಟಕದ ಸಹಯೋಗದಲ್ಲಿ ದಿನಾಂಕ 08-09-2024 ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಲೋಕೇಶ್ ಪೂಜಾರಿ, ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಕಂಕನಾಡಿ ಘಟಕವು ಹಮ್ಮಿಕೊಂಡಿರುವ ಸಮಾಜಮುಖಿ ಹತ್ತು ಹಲವು ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು, ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ಎಂದು ನುಡಿದರು.

ಯುವವಾಹಿನಿ (ರಿ) ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸಿ, ಬಂದಿರುವ ಎಲ್ಲರಿಗೆ ಸ್ವಾಗತವನ್ನು ಕೋರಿದರು.

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಪದಪ್ರಧಾನ ನೆರವೇರಿಸಿದರು.

ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು, ಇಲ್ಲಿಯ ನಿವೃತ್ತ ಡೀನ್ ಡಾ. ಉಮ್ಮಪ್ಪ ಪೂಜಾರಿ.ಪಿ, ಬ್ರಹ್ಮ ಮುಗೇರ ಮಹಾಂಕಾಳಿ ಸೇವಾ ಸಮಿತಿ ಉಜ್ಜೋಡಿ ಇದರ ಅಧ್ಯಕ್ಷ ಉಮನಾಥ್ ಕೋಟ್ಯಾನ್, ಕಾರ್ಯದರ್ಶಿ ಮಮತಾ ತೇಜ್ ಪಾಲ್, ಉದ್ಯಮಿ ಲೋಕೆಶ್ ಪೂಜಾರಿ, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸುಂದರ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಅಧ್ಯಕ್ಷರಾಗಿ ರಾಹುಲ್ ಸನಿಲ್ ಹಾಗೂ ಕಾರ್ಯದರ್ಶಿ ನವೀನ್ ಕೋಟ್ಯಾನ್ ಹಾಗೂ ಪದಾಧಿಕಾರಿಗಳು ಪ್ರತಿಜ್ಞಾವಿಧಿ ಪಡೆದರು. ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಕುಟುಂಬಸ್ಥರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

ನೂತನ ಕಾರ್ಯದರ್ಶಿ ನವೀನ್ ಕೋಟ್ಯಾನ್ ವಂದಿಸಿದರು. ಮೇಘ ಹಾಗೂ ಧನುಷ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!