ಕೂಳೂರು : ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಎಲ್ಲರ ಮನ ಮನೆ ಬೆಳಗಿದಂತೆ ಬಡವರ ಬಾಳಿನಲ್ಲೂ ಬೆಳಕನ್ನು ತರಲಿ ಎಂಬ ಉದ್ದೇಶದಿಂದ ಯುವವಾಹಿನಿ (ರಿ) ಕೂಳೂರು ಘಟಕ ಕಳೆದ 9 ವರುಷಗಳಿಂದ ಅಶಕ್ತ ಕುಟುಂಬಗಳಿಗೆ ನೆರವಿನ ಆಶಾ ದೀಪ ಎಂಬ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರತಿ ವರ್ಷವೂ ಕಡು ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಬ್ಬವನ್ನು ಆಚರಿಸಲು ಬೇಕಾದ ಎಲ್ಲ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ.
ಅದೇ ರೀತಿ ಈ ವರ್ಷವೂ ಕುಟುಂಬ ಸಂಪರ್ಕ ನಿರ್ದೇಶಕರಾದ ಸುಮಾ ಶಿವು ರವರ ಸಂಚಾಲಕತ್ವದಲ್ಲಿ ದಿನಾಂಕ 26-10-2024 ರಂದು ಸಂಜೆ 5.00 ಕ್ಕೆ ಸರಿಯಾಗಿ ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ರವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪ್ರಾರ್ಥನೆ ಮಾಡಿ, ಗುರುಗಳ ಆಶೀರ್ವಾದ ಪಡೆದು, ಬಡ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳನ್ನು ನೀಡಲು ಆಯ್ದ ಬಡ ಕುಟುಂಬದ ಮನೆಗಳಿಗೆ ತೆರಳಿ, ಸಾಮಾಗ್ರಿಗಳನ್ನು ನೀಡಿ, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರೈಸಿದರು.
ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಒಂದನೇ ಉಪಾಧ್ಯಕ್ಷರಾದ ಲತಿಷ್ ಪೂಜಾರಿ, ಎರಡನೇ ಉಪಾಧ್ಯಕ್ಷರಾದ ಗೀತಾ ವಸಂತ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ನಯನ ರಮೇಶ್, ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕಾರ್ಯದರ್ಶಿ ಶ್ರೀಮತಿ ನೈನಾ ಕೋಟ್ಯಾನ್, ಜೊತೆ ಕಾರ್ಯದರ್ಶಿ ಶ್ರೀಮತಿ ಕೀರ್ತನ, ಕೋಶಾಧಿಕಾರಿ ವಿಘ್ನೇಶ್, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.