ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು.
ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು.
ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಅಧ್ಯಕ್ಷರೂ ಆಗಿರುವ ಶ್ರೀ ಸಂತೋಷ್ ಕುಮಾರ್ ಉದ್ಯಾವರ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ತಮ್ಮ ತಂಡದೊಂದಿಗೆ ಪಿಪಿಟಿ ಮೂಲಕ ಕಾರ್ಯಾಗಾರವನ್ನು ನಡೆಸಿ ಕೊಟ್ಟರು.
ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸುಮಾರು 60 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.