Yuvavahini

NOV 04, 2024 2.56 PM IST

ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ

ಯುವವಾಹಿನಿ (ರಿ) ಬೆಳ್ತಂಗಡಿ ವತಿಯಿಂದ ತುಳುನಾಡ ತುಡರ ಪರ್ಬ – ಸಾಮೂಹಿಕ ದೀಪಾವಳಿ ಆಚರಣೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 6ನೇ ವರ್ಷದ ತುಳುನಾಡ ತುಡರ ಪರ್ಬ- 2024 ಸಾಮೂಹಿಕ ದೀಪಾವಳಿ ಹಬ್ಬ ಆಚರಣೆಯನ್ನು 1001 ದೀಪಗಳನ್ನು ಬೆಳಗುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಉಪಾಧ್ಯಕ್ಷರಾದ ಶ್ರೀ ಸುಂದರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಘಟಕದ ಅಧ್ಯಕ್ಷರಾದ ಶ್ರೀ ಸದಾಶಿವ ಊರ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಸುಮತಿ ಪ್ರಮೋದ್, ಯುವವಾಹಿನಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷರು ಘಟಕದ ಮಾಜಿ ಅಧ್ಯಕ್ಷರಾದ ಎಂ.ಕೆ.ಪ್ರಸಾದ್, ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಮೂಡುಕೊಡಿ, ಪ್ರಶಾಂತ್ ಮಚ್ಚಿನ, ಹರೀಶ್ ಸುವರ್ಣ, ಅಶ್ವಥ್ ಕುಮಾರ್, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕರಾದ ವನಿತಾ ಜನಾರ್ಧನ್, ಘಟಕದ ಕಾರ್ಯದರ್ಶಿ ಯಶೋಧರ ಮುಂಡಾಜೆ ಹಾಗೂ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರುಗಳು, ಯುವವಾಹಿನಿ ಘಟಕದ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಘಟಕದ ಅಧ್ಯಕ್ಷರಾದ ಶ್ರೀ ಸದಾಶಿವ ಊರ ಎಲ್ಲರನ್ನೂ ಸ್ವಾಗತಿಸಿದರು.

ಚಂದ್ರಹಾಸ್ ಬಳೆಂಜ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ಮಕ್ಕಳ ಕುಣಿತಾ ಭಜನಾ ತಂಡದ ಭಜಕರು ಕುಣಿತ ಭಜನೆ ನಡೆಸಿಕೊಟ್ಟರು.

ಕಾರ್ಯಕ್ರಮದ ನಂತರ ಫಲಾಹಾರದ ವ್ಯವಸ್ಥೆ ಏರ್ಪಡಿಸಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!