25-12-2022, 8:51 AM
ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]
Read More
25-12-2022, 5:06 AM
ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]
Read More
13-12-2022, 3:29 PM
ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]
Read More
30-11-2022, 2:34 PM
ಮಂಗಳೂರು :- ಯುವವಾಹಿನಿ ಕೇಂದ್ರ ಸಮಿತಿಗೆ ಒಳಪಟ್ಟ ಎಲ್ಲಾ ಘಟಕಗಳ ಲೆಕ್ಕಪತ್ರ ಹಾಗೂ ಕಡತ ನಿರ್ವಹಣೆ, ಲೆಕ್ಕಪರಿಶೋಧನೆಯ ಕುರಿತು ಲೆಕ್ಕಪತ್ರ ಕಾರ್ಯಾಗಾರವು ದಿನಾಂಕ 30 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ಜರಗಿತು. ಕಾರ್ಯಾಗಾರದ ಉದ್ಘಾಟನೆಯನ್ನು ಕೇಂದ್ರ ಸಮಿತಿಯ ಗೌರವ ಸಲಹೆಗಾರರು ಹಾಗೂ ಹಿರಿಯ ನ್ಯಾಯವಾದಿ ಟಿ ಎನ್ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಸಕ್ತ ಸಾಲಿನ ಲೆಕ್ಕಪರಿಶೋಧಕರಾದ CA ಸುನಿಲ್ ಎ ರವರು ಘಟಕಗಳಲ್ಲಿ ಲೆಕ್ಕಪರಿಶೋಧನೆಗೆ ಪೂರಕವಾದ ಕಡತ […]
Read More
01-11-2022, 4:02 PM
ಬೆಂಗಳೂರು :- 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರ ಮಾಡಿದರು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವ ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಿನಾಂಕ 01 ನವೆಂಬರ್ 2022 ಮಂಗಳವಾರದಂದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇವರು ಕಿಕ್ಕಿರಿದು […]
Read More
30-10-2022, 3:19 PM
ಕಳೆದ 35 ವರುಷಗಳಿಂದ ಯುವವಾಹಿನಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಹಿರಿಯರು, ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ 33 ಘಟಕಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಸದಸ್ಯರ ಶ್ರಮ…..ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ತಿಳಿಸಿದರು. ನಮ್ಮ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಕರ್ನಾಟಕ ಸರಕಾರಕ್ಕೆ ಕೃತಜ್ಞತೆಗಳು ಹಾಗೂ ಪ್ರತಿಯೊಂದು ಯುವವಾಹಿನಿ ಸದಸ್ಯರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದು ಹಾಗೂ ಈ ಸಾಧನೆಯ ಹಿಂದಿರುವ ಪ್ರತಿ ಯುವವಾಹಿನಿ ಸದಸ್ಯರಿಗೆ ಹೃದಯಾಂತರಾಳದ […]
Read More
30-10-2022, 3:15 PM
ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]
Read More
09-10-2022, 7:50 AM
ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]
Read More
09-10-2022, 3:17 AM
ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]
Read More