ಬಜಪೆ

ಬಜಪೆ ಪ್ರಥಮ, ಉಡುಪಿ ದ್ವಿತೀಯ, ಮುಲ್ಕಿ ತೃತೀಯ

ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]

Read More

ಸ್ವಚ್ಚತಾ ಅಭಿಯಾನದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು.

ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ […]

Read More

ಪೆರ್ಮುದೆ -ಎಕ್ಕಾರು : ಸಮಾಲೋಚನಾ ಸಭೆ

ಪೆರ್ಮುದೆ -ಎಕ್ಕಾರು ; ದಿನಾಂಕ 16 .09 .18 ರಂದು ಭಾನುವಾರ ಪೆರ್ಮುದೆ -ಎಕ್ಕಾರು ಇಲ್ಲಿ ಯುವವಾಹಿನಿಯ ನೂತನ ಘಟಕ ರಚಿಸುವ ನಿಟ್ಟಿನಲ್ಲಿ ಸಮಲೋಚನಾ ಸಭೆಯು ಬ್ರಹ್ಮಶ್ರೀ ನಾರಾಯಣಗುರು ಸಂಘ ಎಕ್ಕಾರು -ಪೆರ್ಮುದೆ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಕೆಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಅಂಚನ್, ಉಪಾದ್ಯಕ್ಷರಾದ ನರೇಶ್ ಸಸಿಹಿತ್ಲು, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ,ಯುವಸಿಂಚನ ಸಂಪಾದಕ ರಾಜೇಶ ಸುವರ್ಣ , ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ ಮಧು […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]

Read More

ಸಂಗೀತ ಕ್ಷೇತ್ರದ ಸಾಧಕಿ ಗ್ರೀಷ್ಮಾಇವರಿಗೆ ಅಭಿನಂದನೆ

ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರಾದ ಕುಮಾರಿ ಗ್ರೀಷ್ಮ ಇವರ ಸಂಗೀತ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ದಿನಾಂಕ 27.08.2018 ರಂದು ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೆೇ ಜನ್ಮ ದಿನಾಚರಣೆಯು ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಆಶ್ರಯದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ

ಬಜಪೆ : ಬ್ರಹ್ಮ ಶ್ರೀ ನಾರಾಯಣ ಸಮಾಜ ಸೇವಾ ಸಂಘ ಬಜಪೆ -ಕರಂಬಾರು ,ಯುವವಾಹಿನಿ (ರಿ) ಬಜಪೆ ಘಟಕ ,ಯುವವಾಹಿನಿ (ರಿ) ಕರಂಬಾರು -ಕೆಂಜಾರು ಘಟಕ ಹಾಗೂ ಬಿರುವೆರ್ ಕುಡ್ಲ (ರಿ) ಬಜಪೆ ಘಟಕದ ಸಹಯೋಗದಲ್ಲಿ ದಿನಾಂಕ 27.08.2018 ರಂದು ಸುಂಕದಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಬಜಪೆ ನಾರಾಯಣ ಗುರು ಮಂದಿರದ ವರೆಗೆ ಶ್ರೀ ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ ಬಹಳ ವಿಜೃಂಭಣೆಯಿಂದ ನಡೆಯಿತು. ಸುಂಕದಕಟ್ಟೆ ಅನ್ನಪೂರ್ಣೆಶ್ವರಿ ದೇವಸ್ಥಾನದ ಮೊಕ್ತೇಸರರು ಹಾಗೂ ಮುಲ್ಕಿ ಮೂಡಬಿದ್ರಿ ಕ್ಷೇತ್ರದ […]

Read More

ಬಡ ಕುಟುಂಬದ ಹೆಣ್ಣು ಮಗಳ ಮದುವೆಗೆ ಧನಸಹಾಯ

ಬಜ್ಪೆಯಲ್ಲಿ ವಾಸವಾಗಿರುವ ದಿ| ಮನೋಜ್ ಕುಮಾರ್ ಮತ್ತು ಶ್ರೀಮತಿ ಶಾಲಿನಿಯವರ ಪುತ್ರಿ ಕುಮಾರಿ ದಿವ್ಯ ಇವರ ಮದುವೆ ಖರ್ಚಿನ ಸಹಾಯಾರ್ಥವಾಗಿ ದಿನಾಂಕ 17.08.2017ರಂದು ಯುವವಾಹಿನಿ (ರಿ) ಬಜ್ಪೆ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೋಕಟ್ಟೆ, ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಆಟಿದ ನೆಂಪು ಯುವ ಜನಾಂಗದಲ್ಲಿ ಜಾಗ್ರತಿ ಮೂಡಿಸಿದೆ : ಪ್ರಭಾಕರ ನೀರುಮಾರ್ಗ

. ಬಜ್ಪೆ: ವ್ಯವಸಾಯ ಮತ್ತು ಕೃಷಿಯೊಂದಿಗೆ ಆಟಿ ತಿಂಗಳಿಗೆ ಅತೀ ಹತ್ತಿರದ ಸಂಭಂದವಿದೆ. ಆಹಾರ ಅನುಷ್ಠಾನಗಳಲ್ಲಿ ಪ್ರತಿ ತಿಂಗಳಿಗೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಪ್ರಕೃತಿ, ಭೂಮಿ ಮತ್ತು ನಮ್ಮ ಈ ಜೀವ, ದೇಹದ ನಡುವೆ ಅತೀಯಾದ ಸಂಭಂದವಿರುವುದು ಆಟಿ ತಿಂಗಳಲ್ಲಿ. ಈ ತಿಂಗಳಲ್ಲಿ ನಾವೇನನ್ನ ಆಹಾರ ಪಥ್ಯಗಳಾಗಿ ಸ್ವೀಕರಿಸುತ್ತೇವೆ, ಪ್ರಕೃತಿ ಭೂಮಿಗೂ ಅದನ್ನು ಉಣಬಡಿಸಿ ಸಮ ತೋಲನವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಈ ಹಿಂದಿನ ದಿನ ಮಾನಗಳಲ್ಲಿ ಅವಶ್ಯವಾಗಿ ಆಟಿ ತಿಂಗಳಲ್ಲಿ ಸೇವಿಸಬೇಕಾದ ಆಹಾರವು ಔಷಧವಾಗಿ ಇಡೀ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!