Yuvavahini

ಬೆಳ್ತಂಗಡಿ

ನಾಯಕತ್ವ ಗುಣಗಳು ಸಂಘಟನೆಯ ಯಶಸ್ಸಿನ ಭದ್ರ ಬುನಾದಿ : ರಾಜೇಶ್ ಎಸ್. ಬಲ್ಯ

ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು. ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ […]

Read More

ಪದಗ್ರಹಣ ಸಮಾರಂಭ

ಬೆಳ್ತಂಗಡಿ, ಜುಲೈ 16: “ಯುವವಾಹಿನಿಯು ಕೇವಲ ಒಂದು ಸಂಘಟನೆಯಲ್ಲ; ಸಮಾಜವನ್ನು ಬೆಸೆಯುವ ಮಹತ್ವದ ಶಕ್ತಿಯಾಗಿದೆ” ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು. ಅವರು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ, ಉತ್ತಮ ನಾಯಕರನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ […]

Read More

ಅಧ್ಯಕ್ಷರಾಗಿ ಲೀಲಾವತಿ ಕೆ ಆಯ್ಕೆ

ಬೆಳ್ತಂಗಡಿ ಜುಲೈ 12 : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಲೀಲಾವತಿ ಕೆ ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿಕೆ ಆಯ್ಕೆಯಾದರು

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕವು ಚತುರ್ಥ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕವು ಆಕರ್ಷಕ ಟ್ರೋಫಿಯೊಂದಿಗೆ ಚತುರ್ಥ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Read More

ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ತುರ್ತು ಚಿಕಿತ್ಸಾ ತಜ್ಞರಾದ ಡಾ. […]

Read More

ಸೇವೆ–ಕ್ರೀಡೆ–ಸೌಹಾರ್ದತೆಯ ಸಂಗಮ: ದಶ ಸಂಭ್ರಮಕ್ಕೆ ಯುವವಾಹಿನಿಯಿಂದ ಸಮಾಜಮುಖಿ ಸಂದೇಶ

ಬೆಳ್ತಂಗಡಿ: ನೊಂದ ಕುಟುಂಬಗಳಿಗೆ ಸಾಂತ್ವನ ನೀಡುವ ಜೊತೆಗೆ ಯುವಜನತೆಯಲ್ಲಿ ಸ್ನೇಹ, ಸೌಹಾರ್ದತೆ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುವ ಕಾರ್ಯದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯವಾಗಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಶ ಸಂಭ್ರಮದ ಪ್ರಯುಕ್ತ ಆಯೋಜಿಸಲಾದ ಕ್ರೀಡಾಕೂಟ ಹಾಗೂ ಸಾಂತ್ವನ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಗೇರ ಬ್ರಿಗೇಡ್ ಅಧ್ಯಕ್ಷ ಬಿನುತಾ ಬಂಗೇರ ಮಾತನಾಡಿ, ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ಮನಸ್ಸಿಗೆ ಧೈರ್ಯ ತುಂಬುವ ಸಂಘಟನೆ […]

Read More

ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, […]

Read More

ಗುರುನಮನ ಕಾರ್ಯಕ್ರಮ -ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ

05/10/2025 ಆದಿತ್ಯವಾರ ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿದೆ ಸಂಘಟನೆ ಮೂಲಕ ಸಮಾಜ ಉತ್ತಮ ಸದೃಢವಾಗಿ ಮುಂದುವರಿಯಲಿ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹಾರೈಸಿದರು. ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ […]

Read More

” ಆಟಿದ ಕಮ್ಮೆನ” -ಯುವವಾಹಿನಿ( ರಿ.) ಬೆಳ್ತಂಗಡಿ ಘಟಕ

ಘಟಕದ ಆಶ್ರಯದಲ್ಲಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆತಿಥ್ಯದಲ್ಲಿ ದಿನಾಂಕ 02.08.2025ನೇ ಶನಿವಾರದಂದು ಆಟಿದ ಕಮ್ಮೆನ ಕಾರ್ಯಕ್ರಮವು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ನೆರವೇರಿಸಿ ಶುಭ ಹಾರೈಸಿದರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಘಟಕದ ಸಲಹೆಗಾರರಾದ ಸುಧಾಮಣಿ ಆರ್ ಮಾತನಾಡಿ ಆಟಿ ತಿಂಗಳ ವಿಶೇಷತೆಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕರಾದ […]

Read More

ಉಮಾನಾಥ ಕೋಟ್ಯಾನ್ ಬೆಳಾಲು ಇವರಿಗೆ ನುಡಿನಮನ-ಯುವವಾಹಿನಿ( ರಿ.) ಬೆಳ್ತಂಗಡಿ ಘಟಕ

ಇತ್ತೀಚಿಗೆ ನಮ್ಮನ್ನಗಲಿದ ಘಟಕದ ಸಲಹೆಗಾರರಾದ ಉಮನಾಥ ಕೋಟ್ಯಾನ್ ಬೆಳಾಲು ಇವರಿಗೆ ನುಡಿನಮನ ಕಾರ್ಯಕ್ರಮವನ್ನು ದಿನಾಂಕ 18.09.2025 ಗುರುವಾರದಂದು ಘಟಕದ ವತಿಯಿಂದ ನಡೆಸಿ ಅವರಿಗೆ ಗೌರವ ಸಲ್ಲಿಸಲಾಯಿತು. ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳರವರು ಉಮಾನಾಥ್ ಕೋಟ್ಯಾನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರೊಂದಿಗಿನ ಒಡನಾಟದ ಬಗ್ಗೆ ಹಾಗೂ ಸಂಘಟನೆಯ ಯಶಸ್ಸಿನ ಹಿಂದೆ ಇದ್ದ ಅವರ ಕೊಡುಗೆಯನ್ನು ಸ್ಮರಿಸಿದರು ಘಟಕದ ಸ್ಥಾಪಕಧ್ಯಕ್ಷರಾದ ರಾಕೇಶ್ ಕುಮಾರ್ ಮೂಡುಕೋಡಿ, ಮಾಜಿ ಅಧ್ಯಕ್ಷರಾದ ಎಂ ಕೆ ಪ್ರಸಾದ್, ಅಶ್ವಥ್ ಕುಮಾರ್, ಸದಾಶಿವ ಪೂಜಾರಿ ಊರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!