17-12-2017, 3:14 PM
ಬೆಳ್ತಂಗಡಿ : ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ, ಯುವವಾಹಿನಿಯು ಯುವಜನತೆಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಶಾಸಕ ಕೆ ವಸಂತ ಬಂಗೇರ ಹೇಳಿದರು . ಅವರು ದಿನಾಂಕ 17.12.2017 ರಂದು ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2017-18 ನೆೇ ಸಾಲಿನ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಉಂಗಿಲಬೈಲು ಅಧ್ಯಕ್ಷತೆ ವಹಿಸಿದ್ದರು. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
30-08-2017, 10:46 AM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಕೀಲರ ಸಂಘ ಬೆಳ್ತಂಗಡಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ,ಯುವವಾಹಿನಿ ಸಂಚಾಲನ ಸಮಿತಿ ವೇಣೂರು ಇದರ ಸಹಯೋಗದೊಂದಿಗೆ ದಿನಾಂಕ 30.08.2017 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ಬೆಳ್ತಂಗಡಿ JMFC ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಸತೀಶ್ ಉದ್ಘಾಟಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗುರುನಾರಾಯಣ ಸ್ವಾಮೀ ಸೇವಾ ಸಂಘದ ಮಾಜಿ ನಿರ್ದೇಶಕ, ಕೊಕ್ರಾಡಿ SDMC ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ.ವಹಿಸಿ ಸತತ ಮೂರು ವರ್ಷಗಳಿಂದ ಕಾನೂನು […]
Read More
02-08-2017, 1:34 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಅಗ್ರಹ. ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ. ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ […]
Read More
09-07-2017, 12:46 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ […]
Read More
16-06-2017, 8:58 AM
ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ ,ರಾಜರಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತಹದ್ದಲ್ಲ, ಸೋದರರಿಂದ ಭಾಗಮಾಡಿಕೊಳ್ಳುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ. ಆದ್ದರಿಂದ ಸಕಲ ದಾನಕ್ಕಿಂತಲೂ ವಿದ್ಯಾದಾನವೇ ಶ್ರೇಷ್ಠವಾದುದು. ಶಿಕ್ಷಣಕ್ಕೆ ಬಡತನ, ಆರ್ಥಿಕತೆ, ಇತರ ಬದುಕಿನ ಜಂಜಾಟಗಳು ಯಾವುದೂ ಅಡ್ಡಿ ಬರಬಾರದು ಎಂಬ ನೆಲೆಯಲ್ಲಿ ಕಲಿಯಲು ಹಂಬಲಿಸುವ ಯುವ ಮನಸ್ಸು ಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಮಾಜದ ಅಂಚಿಗೆ ತಳ್ಳಲ್ಪಟ್ಟ ಶೋಷಿತರ ,ಧಮನಿರತರ, ನೋವಿಗೆ ಸ್ಪಂದನೆ ನೀಡುವ ಕೆಲಸ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಮಾಡುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ […]
Read More
08-06-2017, 8:57 AM
ಜೂನ್ 2 ರಂದು ಬೆಳ್ತಂಗಡಿ ಸಂತೆಕಟ್ಟೆ ಸಮೀಪದ ತಿಮ್ಮಪ್ಪ ಪೂಜಾರಿಯನ್ನು ಸ್ಥಳೀಯ ನಿವಾಸಿ ಕಾಲೇಜು ವಿದ್ಯಾರ್ಥಿ ಚಂದ್ರಶೇಖರ ಬೀಕರವಾಗಿ ಕೊಲೆಗೈದಿದ್ದಾನೆ. ಯುವಜನರು ಗಾಂಜ ಸೇರಿದಂತೆ ಮಾದಕ ವ್ಯಸನಗಳಿಗೆ ಬಲಿಯಾಗಿ ಅಡ್ಡ ದಾರಿ ಹಿಡಿಯುತ್ತಿದ್ದಾರೆ. ಕೊಲೆ ಅತ್ಯಾಚಾರದಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಣ್ಣ ಪುಟ್ಟ ವಿಚಾರಗಳಿಗೂ ಕೊಲೆ ಮಾಡುತ್ತಿರುವುದು ಅತ್ಯಂತ ಆತಂಕಕಾರಿ. ಕೊಲೆಯಾದ ತಿಮ್ಮಪ್ಪ ಪೂಜಾರಿಯವರ ಪತ್ನಿ ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕು.ಪತ್ನಿಗೆ ಸರಕಾರಿ ಉದ್ಯೋಗದ ಜತೆಗೆ ಮಕ್ಜಳ ಶಿಕ್ಷಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಬೆಳ್ತಂಗಡಿ […]
Read More
20-05-2017, 1:44 PM
ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ವತಿಯಿಂದ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಮ್ಮನಗಲಿದ ಯುವವಾಹಿನಿಯ ಸಕ್ರೀಯ ಸದಸ್ಯರಾದ ಚಂದ್ರಹಾಸ ಮೇಲಂತಬೆಟ್ಟು ಅವರಿಗೆ ಸಾಂತ್ವನ ನಿಧಿ 50,000/- ರೂಪಾಯಿಗಳ ಚೆಕ್ಕುನ್ನು ಕೇಂದ್ರ ಸಮಿತಿಯ ಅದ್ಯಕ್ಪರಾದ ಪದ್ಮನಾಭ ಮರೋಳಿ ಯವರು ಚಂದ್ರಹಾಸರವರ ತಾಯಿಗೆ ನೀಡಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಹರೀಶ್ ಬೈಲಬರಿ, ರಾಕೇಶ್ ಮೂಡುಕೋಡಿ,ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ಹಾಗೂ ಆತ್ಮೀಯ ಯವಕ ಮಂಡಲದ ಗೌರವ ಅದ್ಯಕ್ಪರಾದ ಸಚಿನ್ ಕುಮಾರ್ ನೂಜೋಡಿ ಹಾಗೂ ಘಟಕದ ನಿರ್ದೇಶಕರದ ಯಶೋದರ ಚಾರ್ಮಾಡಿ ಸ್ಮೀತೆಶ್ ಎಸ್ […]
Read More
11-05-2017, 7:23 AM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 11/04/2017 ರಿಂದ 11.05.2017 ರವರೆಗೆ ಯುವವಾಹಿನಿ ಸಂಚಾಲನ ಸಮಿತಿ ಮೂಡುಕೋಡಿ ಮತ್ತು ಸೇವಾ ಭಾರತಿ ಮೂಡುಕೋಡಿ ಇದರ ಜಂಟಿ ಸಹಯೋಗದೊಂದಿಗೆ ಒಂದು ತಿಂಗಳ ಕಾಲ ಮೂಡುಕೋಡಿ ಶ್ರೀರಾಮ ಮಂದಿರದಲ್ಲಿ ಹೊಲಿಗೆ ತರಬೇತಿ ಶಿಬಿರವು ಜರುಗಿತು. ದಿನಾಂಕ 11.05.2017 ರಂದು ಸಮಾರೋಪ ಸಮಾರಂಭವು ಯುವವಾಹಿನಿ ಸಂಚಾಲನ ಮೂಡುಕೋಡಿಯ ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಜರುಗಿತು..ಮುಖ್ಯ ಅತಿಥಿಗಳಾಗಿ ಸೇವಾ ಭಾರತಿ ಕನ್ಯಾಡಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ […]
Read More
09-04-2017, 6:32 AM
ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]
Read More