27-08-2018, 6:00 PM
ಕಂಕನಾಡಿ : ಅಜ್ಞಾನ ವೆಂಬ ಕತ್ತಲನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವುದೇ ನಿಜವಾದ ಜ್ಞಾನ. ಅಂತಹ ಜ್ಞಾನವನ್ನು ಜಗತ್ತಿಗೆ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶ, ತತ್ವಗಳು ನಮಗೆ ಸ್ಫೂರ್ತಿ ದಾಯಕ. ಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸಿ ಮಾನವ ಕುಲವನ್ನು ಉನ್ನತಿ ಯೆಡೆಗೆ ಸಾಗಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ದೊಂದಿಗೆ ಮಾನವ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್(ರಿ) ಇದರ ಪದಾಧಿಕಾರಿ ಡಿ.ಎಸ್. ಯಶವಂತ್ ತಿಳಿಸಿದರು. ಅವರು ದಿನಾಂಕ 27-08-2018ರ ಸೋಮವಾರ ದಂದು ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]
Read More
26-08-2018, 6:38 PM
ಕಂಕನಾಡಿ : ದಿನಾಂಕ 26-08-2018ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿ ಪ್ರಯುಕ್ತ ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗೆ ರಂಗೋಲಿ ಸ್ಪರ್ಧೆ,ಕಸದಿಂದ ರಸ ಎಂಬ ಸ್ಪರ್ಧೆ ಹಾಗೂ ಘಟಕದ ಸದಸ್ಯರಿಗೆ ಆಟೋಟ ಸ್ಪರ್ಧೆ ಯನ್ನು ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧಾ ಕಾರ್ಯಕ್ರಮಕ್ಕೆ ಘಟಕದ ಸಲಹೆಗಾರರಾದ ಶ್ರೀಯುತ ಜಿತೇಂದ್ರ.ಜೆ. ಸುವರ್ಣರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭವು […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
07-06-2018, 4:46 PM
ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]
Read More
01-04-2018, 1:36 PM
ಯುವವಾಹಿನಿ (ರಿ) ಕಂಕನಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಭವಿತ್ ರಾಜ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಭವಿತ್ ರಾಜ್ ಉಪಾಧ್ಯಕ್ಷರು : ಸುರೇಶ್ ಎಮ್.ಎಸ್ ಕಾರ್ಯದರ್ಶಿ : ಸುಮಾ ವಸಂತ್ ಜತೆ ಕಾರ್ಯದರ್ಶಿ : ರಾಹುಲ್ ಕೋಶಾಧಿಕಾರಿ : ದೇವಕಿ ಕಿಶೋರ್ ನಿರ್ದೇಶಕರು : ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಲೋಕೇಶ್ ಅಮೀನ್ ಸಮಾಜ ಸೇವೆ : ರೂಪಾ ಕಿರಣ್, ವನಮಾಲ ವ್ಯಕ್ತಿತ್ವ ವಿಕಸನ : ಸುವಾನ್ ಉದ್ಯೋಗ , ಭವಿಷ್ಯ ನಿರ್ಮಾಣ : […]
Read More
01-04-2018, 8:23 AM
ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
08-10-2017, 4:42 PM
ಮಹಾ ಮಾನವತಾವಾದಿ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುವರ್ಯರು ಸಮಾಜದ ಒಳಿತಿಗಾಗಿ ದುಡಿದವರು. ಸಮಸ್ತ ಮಾನವ ಜನಾಂಗಕ್ಕೆ ಹೊಸ ಹಾದಿ ತೋರಿದ ಅವರ ಸಂದೇಶದ ಅನುಷ್ಠಾನದ ಜತೆಗೆ ಅವರು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಮಂಗಳೂರಿನ ಖ್ಯಾತ ವಕೀಲರು ಹಾಗು ಕಾಂತಾವರದ ಅಲ್ಲಮ ಪ್ರಭು ಪೀಠದ ಅಧ್ಯಕ್ಷರಾದ ಶ್ರೀ ಯಶೋಧರ ಪಿ. ಕರ್ಕೇರರವರು ತಿಳಿಸಿದರು ಅವರು ಯುವವಾಹಿನಿ(ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜಯಂತಿಯ ಪ್ರಯುಕ್ತ ದಿನಾಂಕ […]
Read More
30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More
10-09-2017, 3:10 AM
ಯವವಾಹಿನಿಯ (ರಿ) ಕಂಕನಾಡಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನದ ಪ್ರಯುಕ್ತ ದಿನಾಂಕ 10.09.2017ರಂದು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉದಯಶಂಕರ್ ಮತ್ತು ರೇವತಿ ಟೀಚರ್ ಇವರು ತೀರ್ಪುಗಾರರಾಗಿ ಭಾಗವಹಿಸಿದರು ಹಾಗೂ ಈ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಾಗೂ ಯುವವಾಹಿನಿ ಕಂಕನಾಡಿ ಘಟಕದ ಸದಸ್ಯರಿಗೆ ಅಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕಂಕನಾಡಿ […]
Read More