ಪಡುಬಿದ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರ

ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು   ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಶ್ರಮದಾನ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ 29.07.2018 ರಂದು ಪಡುಬಿದ್ರಿ ಬಿಲ್ಲವ ಸಂಘದ ಪರಿಸರದಲ್ಲಿ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ, ಕಾರ್ಯದರ್ಶಿ ಶೈಲಜಾ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

Read More

ಯುವವಾಹಿನಿಯಿಂದ ಯುವಜನತೆಗೆ ಜಾಗೃತಿ : ರಮೇಶ್ ಅಂಚನ್

ಪಡುಬಿದ್ರಿ : ಸಮಾಜದಲ್ಲಿ ಯುವಜನಾಂಗವು ದಾರಿ ತಪ್ಪುತ್ತಿರುವ ಸಂದರ್ಭದಲ್ಲಿ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು ಅನಿವಾರ್ಯ. ಹಲವಾರು ಸಮಸ್ಯೆಗಳ ನಿವಾರಣೆಗೆ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಬಿಲ್ಲವರ ಯೂನಿಯನ್, ಕುದ್ರೊಟ್ಟು, ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳ್ ಬಡಾದ ಕಾರ್ಯದರ್ಶಿ ರಮೇಶ್ ಅಂಚನ್ ತಿಳಿಸಿದರು.   ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾ ಭವನದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕದ 2018 ನೇ ಸಾಲಿನ ಪದಗ್ರಹಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು […]

Read More

ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆ

ಪಡುಬಿದ್ರೆ : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ದೀಪಕ್. ಕೆ. ಬೀರ ಉಪಾಧ್ಯಕ್ಷರು : ಯೋಗೀಶ್ ಪೂಜಾರಿ ಕಾರ್ಯದರ್ಶಿ : ಶೈಲಜಾ ಜೊತೆ ಕಾರ್ಯದರ್ಶಿ : ಶಾಶ್ವತ್ ಕೋಶಾಧಿಕಾರಿ : ಅಶ್ವಥ್ ಪಾದೆಬೆಟ್ಟು ಸಂಘಟನಾ ಕಾರ್ಯದರ್ಶಿ : ಸುಧೀರ್ ನಿರ್ದೇಶಕರು: ನಾರಾಯಣ ಗುರು ತತ್ವ ಪ್ರಚಾರ : ನಿಶ್ಮಿತಾ ಪಿ.ಎಚ್ ಸಮಾಜಸೇವೆ : ಅಕ್ಷಯ್ ಕುಮಾರ್ ವ್ಯಕ್ತಿತ್ವ ವಿಕಸನ : ಪ್ರಜ್ವಲ್ ಉದ್ಯೋಗ ಮತ್ತು ಭವಿಷ್ಯ […]

Read More

ಮಕ್ಕಳ ಹಬ್ಬ- 2017

ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಅವರ ಪ್ರತಿಭೆಗಳನ್ನು ಗುರುತಿಸಲು ಸಾಂಸ್ಕೃತಿಕ ವೇದಿಕೆಗಳು ಅನಿವಾರ್ಯ. ಇಂತಹ ವೇದಿಕೆಗಳ ಮೂಲಕ ಪ್ರತಿಭೆಯ ಜೊತೆಗೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಿದೆ. ಇಂದು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಹೆತ್ತವರು ಮತ್ತು ಶಿಕ್ಷಕರು ಗಮನಹರಿಸುತ್ತಿರುವುದು ಅನಿವಾರ್ಯವಾಗಿದೆ ಎಂದು ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೋ ಹೇಳಿದರು. ಅವರು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 19.11.2017 ರಂದು ನಂದಿಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ತುಳುನಾಡ : ಆರಾಧನೆ-ಆಶಯ-ಸ್ವರೂಪ

ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು. ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!