19-02-2017, 11:25 AM
ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]
Read More
15-02-2017, 7:38 AM
ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]
Read More
12-02-2017, 12:01 PM
ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]
Read More
04-02-2017, 6:25 AM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು.
Read More
01-02-2017, 12:25 PM
ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.
Read More
31-01-2017, 11:25 AM
ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 31-01-2017 ರಂದು ಶ್ರೀ ನಾರಾಯಣಗುರು ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಲಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ. ರಾಷ್ಟ್ರೀಯ ತರಬೇತುದಾರರಾದ ಜೇಸಿ. ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಪ್ರಾಂಶುಪಾಲರಾದ ಯತೀಶ್ ಅಮೀನ್, ಘಟಕದ […]
Read More
23-01-2017, 2:14 AM
ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ 23.12.2017 ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಾಗಾರವನ್ನು ಉಧ್ಘಾಟಿಸಿದ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ತಿಳಿಸಿದರು . ಉದ್ಯಮಿ ಶ್ರೀ ದತ್ತೇಶ್ ಪೂಜಾರಿ , ಪ್ರಿಯಾ ವುಡ್ […]
Read More
22-01-2017, 12:38 PM
ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]
Read More
22-01-2017, 12:22 PM
ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್‌ನ ಲಯನ್ಸ್‌ಕ್ಲಬ್ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ […]
Read More
22-01-2017, 11:42 AM
ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]
Read More