ಘಟಕಗಳು

ಹಳೆಯಂಗಡಿ-ಕೊಪ್ಪಳ ರಸ್ತೆಗೆ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ನಾಮಕರಣ

ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್‌ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.

Read More

ಹೆಜಮಾಡಿ ಘಟಕದ ವಿವಿಧ ಕಾರ್ಯಕ್ರಮಗಳು

ದಿನಾಂಕ 11-9-2016 ರಂದು ಹೆಜಮಾಡಿ ಘಟಕದ ವತಿಯಿಂದ ಗುರುಜಯಂತಿಯ ಪ್ರಯುಕ್ತ ಹೆಜಮಾಡಿ ನಾಲ್ಕು ಕರೆಯ ಗ್ರಾಮಸ್ಥರಿಗೆ ಜರಗಿದ ಕ್ರೀಡಾಕೂಟ ’ಹಗ್ಗಜಗ್ಗಾಟ’ ಕಾರ್ಯಕ್ರಮ. ಹೆಜಮಾಡಿ ಘಟಕದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. ತಾ. 6-9-2016 ರಂದು ಸುರತ್ಕಲ್ ಘಟಕದ ವತಿಯಿಂದ ಸುರತ್ಕಲ್ ಲಯನ್ಸ್ ಕ್ಲಬ್‌ನ ಸ್ಪೆಷಲ್ ಚಿಲ್ಡ್ರನ್ಸ್ ಸ್ಕೂಲ್(ವಿಶೇಷ ಮಕ್ಕಳ ಶಾಲೆ)ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರಗಿತು. ಅಲ್ಲಿದ್ದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಹೆಜಮಾಡಿ ಘಟಕದ ವತಿಯಿಂದ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ರೂ. 10,000/- ವೈದ್ಯಕೀಯ ನೆರವು ವಿತರಣೆ

Read More

ಬೆಳ್ತಂಗಡಿ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]

Read More

ಕೂಳೂರಿನಲ್ಲಿ ಚಿಗುರೊಡೆದ ಯುವವಾಹಿನಿಯ 23ನೇ ಘಟಕ

ದಿ. 11-09-2016 ರಂದು ಕೂಳೂರು ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ ಕೂಳೂರು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಕಾರ್ಯಕ್ರಮ ಜರಗಿತು. ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷ ರಾಘವೇಂದ್ರ ಕೂಳೂರು ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಘಟಕದ ಸರ್ವರಿಗೂ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ಘೋಷಣೆಯನ್ನು ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ. ಪೂಜಾರಿ ಇವರು ನೆರವೇರಿಸಿಕೊಟ್ಟರು. ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ನೂತನ […]

Read More

ಹಳೆಯಂಗಡಿ ಘಟಕದ ಸಮಾಜ ಸೇವೆ

ದಿ. 7-9-2016 ರಂದು ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯಲ್ಲಿ ನೆರೆದ ಭಕ್ತಾಭಿಮಾನಿಗಳಿಗೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇದರ ಮುಂಭಾಗದಲ್ಲಿ 1000 ಜನರಿಗೆ ರೂ. 16,000/- ಮೊತ್ತದ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿ, ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯ ಯಶಸ್ಸಿಗೆ ಸಹಕಾರ ನೀಡಲಾಗಿರುತ್ತದೆ.

Read More

ಮೂಲ್ಕಿ ಯುವವಾಹಿನಿಯಿಂದ ಶಿಕ್ಷಕರ ದಿನಾಚರಣೆ

ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆ ಮುಲ್ಕಿ ಹಾಗೂ ಯುವವಾಹಿನಿ (ರಿ) ಮೂಲ್ಕಿ ಘಟಕ ಇವರ ಜಂಟಿ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರಗಿತು. ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ  ನಾರಾಯಣಗುರು ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕರಾದ ಹೇಮರಾಜ್ ಹಾಗೂ ಶ್ರೀಮತಿ ಜಯಶ್ರೀ  ಇವರನ್ನು ಶಿಕ್ಷಕ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು. ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾರಾಯಣ ಗುರು ವಿದ್ಯಾಸಂಸ್ಥೆಯ ಸಂಚಾಲಕ […]

Read More

ವೃತ್ತಿ ಮಾರ್ಗದರ್ಶನ ಶಿಬಿರ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಭಾಷಣ ಸ್ಪರ್ಧೆ

ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್‌ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]

Read More

ನಾಯಕತ್ವ ತರಬೇತಿ ಶಿಬಿರ

ಮಂಗಳೂರು ಘಟಕದ ವತಿಯಿಂದ ದಿನಾಂಕ 27-08-2016 ರಂದು ಗೋಕರ್ಣನಾಥ ಕಾಲೇಜ್‌ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಗೆ ನಾಯಕತ್ವ ತರಬೇತಿ ಶಿಬಿರ ನಡೆಯಿತು. 27 ಈ ತರಬೇತಿ ಶಿಬಿರದಲ್ಲಿ ಸುಮಾರು 10 ಕಾಲೇಜುಗಳಿಂದ 48 ವಿದ್ಯಾರ್ಥಿಗಳು ಭಾಗವಹಿಸಿರುವರು. ಶಿಬಿರದ ಉದ್ಘಾಟನೆಯನ್ನು ಬಿ.ಜಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕೇಶವ ಕಟೀಲು ನೆರವೇರಿಸಿದರು. ಅಡ್ಯಾರು ಸಹ್ಯಾದ್ರಿ ಎಂ.ಬಿ.ಎ. ಕಾಲೇಜಿನ ಪ್ರಾಧ್ಯಾಪಕ ಪದ್ಮನಾಭರವರು ತರಬೇತಿಯನ್ನು ನಡೆಸಿಕೊಟ್ಟರು. ವಕೀಲರಾದ ನವನೀತ್ ಡಿ. ಹಿಂಗಾಣಿಯವರು ಬಿಲ್ಲವ ಸಂಘಟನೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಂತರ ನರೇಶ್ ಸಸಿಹಿತ್ಲು ಯುವವಾಹಿನಿ […]

Read More

ಸೋಣ ಸಂಭ್ರಮ

ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!