ಘಟಕಗಳು

ಮನೆ ಮನೆ ಭಜನೆ

ಯುವವಾಹಿನಿ ಸದಸ್ಯರೊಳಗೆ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಮನೆ ಮನೆ ಭಜನೆ ಕಾರ್ಯಕ್ರಮ ದಿನಾಂಕ 02-03-2024 ಶನಿವಾರ ಘಟಕದ ಮಾಜಿ ಅಧ್ಯಕ್ಷರು ಯೋಗೀಶ್ ರಕ್ಷಿತಾ ಕೋಟ್ಯಾನ್ ರವರ ಮನೆಯಲ್ಲಿ ಭಜನಾ ಸಂಕೀರ್ತನೆ ನೆರವೇರಿತು. ಈ ಕಾರ್ಯಕ್ರಮದ ನೆನಪಿಗಾಗಿ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಚರಿತ್ರೆ ಪುಸ್ತಕವನ್ನು ನೀಡಲಾಯಿತು. ಭಜನಾ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು ,ಮಾಜಿ ಅಧ್ಯಕ್ಷರು ಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Read More

ದೇವಸ್ಥಾನದಲ್ಲಿ ಸ್ವಯಂ ಸೇವೆ

ಮೂಡುಬಿದಿರೆ: ಮುಂಡ್ಕೂರು ಕಜೆ-ಕುಕ್ಕುದಡಿ ಮಹಾಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ನಾಗಮಂಡಲೋತ್ಸವ ಪ್ರಯುಕ್ತ ದಿನಾಂಕ 25-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಸುಮಾರು 20 ಸದಸ್ಯರು  ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.

Read More

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 27ನೇ ಸ್ವಚ್ಛತಾ ಅಭಿಯಾನವು ಸಂಘಟನಾ ಕಾರ್ಯದರ್ಶಿ ಮುಕೇಶ್ ರವರ ಸಂಚಾಲಕತ್ವದಲ್ಲಿ ಕೂಳೂರು ಪರಿಸರದಲ್ಲಿ ದಿನಾಂಕ 25/02/2024 ಭಾನುವಾರದಂದು ಹಮ್ಮಿಕೊಂಡಿದ್ದರು. ಅಧ್ಯಕ್ಷರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಇಂದಿರಾ ಸುರೇಶ್, ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ , ಭಾಸ್ಕರ್ ಕೋಟ್ಯಾನ್, ನಯನ ರಮೇಶ್ , ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಸಂಘಟನಾ ಕಾರ್ಯದರ್ಶಿ ಮುಕೇಶ್, ಕಾರ್ಯದರ್ಶಿ ನೈನಾ ಕೋಟ್ಯಾನ್ , ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಮಹಿಳಾ ಸ್ವ-ಉದ್ಯೋಗ ಉಚಿತ ತರಬೇತಿ

ಕಂಕನಾಡಿ: ಯುವವಾಹಿನಿ (ರಿ.) ಕಂಕನಾಡಿ ಘಟಕ ಹಾಗೂ ಭಾರತ ಸರ್ಕಾರ ದತ್ತೋಪಂಥ, ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ, ಮಂಗಳೂರು ವತಿಯಿಂದ ಮಹಿಳೆಯರಿಗೆ ಸ್ವಉದ್ಯೋಗ ಉಚಿತ ತರಬೇತಿ ಕಾರ್ಯಗಾರವು ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನ ಸಭಾಂಗಣದಲ್ಲಿ ದಿನಾಂಕ 24-02-2024 ಶನಿವಾರದಂದು ನಡೆಯಿತು. ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷರಾದ ಉಮಾನಾಥ್ ಕೋಟ್ಯಾನ್ ರವರು ದೀಪ ಪ್ರಜ್ವಲಿಸುವ ಮುಖೇನ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ರೇಖಾ ಗೋಪಾಲ್ […]

Read More

ಮನೆ ಮನೆ ಭಜನೆ

ಬಜಪೆ: ಯುವವಾಹಿನಿ ಬಜಪೆ ಘಟಕದ ಫೆಬ್ರವರಿ ತಿಂಗಳ ಮನೆ ಮನೆ ಭಜನಾ ಸಂಕೀರ್ತಣೆಯು ದಿನಾಂಕ 23/02/24 ರಂದು ಘಟಕದ ಪ್ರಧಾನ ಕಾರ್ಯದರ್ಶಿಯಾದ ದೀಕ್ಷಿತ್ ಅಮೀನ್ ಇವರ ಮನೆಯಲ್ಲಿ ಸಾಯಂಕಾಲ 6:00 ಗಂಟೆಯಿಂದ 7:00 ಗಂಟೆಯವರೆಗೆ ಅರ್ಥಪೂರ್ಣವಾಗಿ ನೆರವೇರಿತು.

Read More

ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾನೂನು ಮತ್ತು ಶಿಸ್ತಿನ ಅರಿವು

ಯುವವಾಹಿನಿ(ರಿ.) ಕೊಲ್ಯ ಘಟಕದ ವತಿಯಿಂದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ದಿನಾಂಕ 23-02-2024ನೇ ಶುಕ್ರವಾರದಂದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾನೂನು ಮತ್ತು ಶಿಸ್ತಿನ ಅರಿವು ಮುಗ್ದ ಮನಗಳೊಂದಿಗೆ ಒಲವಿನ ಸಂವಾದ ಎಂಬ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟು ಶಾಲಾ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಸುಸಂದರ್ಭದಲ್ಲಿ ಆನಂದಾಶ್ರಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳು ತಮ್ಮ ಜೀವನದಲ್ಲಿ ಬಹಳ ಅಗತ್ಯವಾಗಿ ಅಳವಡಿಸಿಕೊಳ್ಳಬಹುದಾದ ಮೌಲ್ಯಯುತವಾದ ಕಾರ್ಯಕ್ರಮವೆಂದು ಹರ್ಷ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಡಿ. ಸುವರ್ಣ […]

Read More

ಉಳ್ಳಾಲ ಬಿಲ್ಲವ ಸಮಾವೇಶ: ಮನೆ ಮನೆ ಭೇಟಿ

ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಇವರ ಆಶ್ರಯದಲ್ಲಿ ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶ ಸಮಿತಿ ಸಹಭಾಗಿತ್ವದಲ್ಲಿ ಫೆಬ್ರವರಿ 25 ರಂದು ಕೊಲ್ಯ ಬಿಲ್ಲವ ಸಮಾಜ ಸಂಘದ ಆವರಣದಲ್ಲಿ ಬಿಲ್ಲವರ ಸಮಾವೇಶ ನಡೆಯಲಿದೆ. ಕೇಂದ್ರ ಸರ್ಕಾರದ ಮಾಜಿ ವಿತ್ತ ಸಚಿವರು, ಬಿಲ್ಲವರ ಹಿರಿಯ ಮುಖಂಡರಾದ ಬಿ. ಜನಾರ್ಧನ ಪೂಜಾರಿ ಇವರಿಂದ ಉದ್ಘಾಟನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಗಣ್ಯಾತಿಗಣ್ಯರು ಭಾಗವಹಿಸಲಿದ್ದು ದಿನಪೂರ್ತಿ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಉಳ್ಳಾಲ ವಲಯದ ಅನೇಕ ಬಿಲ್ಲವ […]

Read More

ಅನ್ನಸಂತರ್ಪಣೆ ಸೇವೆ

ವಿಟ್ಲ: ಪುಣಚ ನೀರುಮಜಲು ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಸಂದರ್ಭ ದಿನಾಂಕ 22-02-2024 ಗುರುವಾರ ದಂದು ರಾತ್ರಿ 8-00ರಿಂದ 11-00 ಗಂಟೆಯವರೆಗೆ ಯುವವಾಹಿನಿ ವಿಟ್ಲ ಘಟಕದ ಸದಸ್ಯರು ಅನ್ನ ಸಂತರ್ಪಣೆಯ ಸ್ವಯಂ ಸೇವೆಯಲ್ಲಿ‌ ಭಾಗವಹಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ, ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲಾ, ಪದಾಧಿಕಾರಿಗಳು ಮತ್ತು ಸುಮಾರು 20 ಸದ್ಯಸರು ಸ್ವಯಂ ಸೇವೆಯಲ್ಲಿ ಪಾಲ್ಗೊಂಡರು.

Read More

ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕ ಹಾಗೂ ಅಂಬಲಪಾಡಿ ರೋಟರಿ ಜಂಟಿ ಆಶ್ರಯದಲ್ಲಿ ಭಾರತ ಸರ್ಕಾರ ದತ್ತೋಪಂಥ ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇವರ ವತಿಯಿಂದ ಮಹಿಳೆಯರಿಗಾಗಿ ಅರ್ಧ ದಿನದ ಸ್ವಉದ್ಯೋಗ ಉಚಿತ ತರಬೇತಿ ಕಾರ್ಯಾಗಾರವು ಯುವವಾಹಿನಿ ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 21-02-24 ರಂದು ನಡೆಯಿತು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶಿಬಿರ ಆರಂಭಗೊಂಡಿತು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ […]

Read More

ಯುವವಾಹಿನಿ ಯುವಜನತೆಯ ಸ್ಪೂರ್ತಿ : ಹರೀಶ್ ಕೆ.ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!