13-03-2022, 11:56 AM
ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 23ನೇ ಸ್ವಚ್ಛತಾ ಅಭಿಯಾನವು ಪಂಜಿಮೊಗರು ಮಂಜೊಟ್ಟಿ ಅಂಗನವಾಡಿ ರಸ್ತೆಯ ಹತ್ತಿರ ದಿನಾಂಕ 13-03-2022 ಭಾನುವಾರ ನಡೆಯಿತು. ಘಟಕದ ಸುಮಾರು 18 ಸದಸ್ಯರನ್ನು ಒಳಗೊಂಡ ತಂಡವು ಬೆಳಿಗ್ಗೆ 7.30 ರಿಂದ 10.30 ರ ವರೆಗೆ ಪಂಜಿಮೊಗರು ಅಂಗನವಾಡಿ ಪರಿಸರದಲ್ಲಿ ಸ್ವಚ್ಚತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ನಂತರ ಬಡಕುಟುಂಬದ ಮಂಜುನಾಥ್ ಆಚಾರಿಯವರ ಮನೆ ದುರಸ್ಥಿಯ ಸಲುವಾಗಿ ಅವರ ಮನೆಯಲ್ಲಿ ಶ್ರಮದಾನ ಮಾಡಲಾಯಿತು, ಮತ್ತು ಘಟಕದ ವತಿಯಿಂದ ರೂ 5000/- ಮೊತ್ತವನ್ನು ಆ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. […]
Read More
13-03-2022, 11:48 AM
ಬೆಳ್ತಂಗಡಿ: ”ಮಹಿಳೆ ಇನ್ನೊಬ್ಬರ ಮುಂದೆ ಕೈ ಚಾಚಿ ಬದುಕುವುದಕ್ಕಿಂತ ತಾನೇ ಹಣ ಗಳಿಸಿಕೊಳ್ಳಬೇಕು. ಆಕೆ ಅರ್ಥಿಕವಾಗಿ ಸದೃಢವಾದಾಗ ಸಮಸ್ಯೆ ದೂರವಾಗುವುದರ ಜೊತೆಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದು’ ಎಂದು ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ರೇಖಾ ಗೋಪಾಲ್ ಹೇಳಿದರು. ಅವರು ದಿನಾಂಕ 13.03.2022 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್,ಇದರ ಸಭಾಂಗಣದಲ್ಲಿ ಬೆಳ್ತಂಗಡಿ ಯುವವಾಹಿನಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ […]
Read More
13-03-2022, 11:00 AM
ಸಮಾಜಮುಖಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆಯನ್ನು ಪಡೆದ ಯುವವಾಹಿನಿ ಬೇರೆ ಸಂಸ್ಥೆಗಳಿಗೆ ಕೈಗನ್ನಡಿಯಾಗಿದೆ, ಸಮಾಜದ ವಿವಿಧ ಅಯಾಮಗಳಲ್ಲಿ ನೊಂದವರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಮುಂದೆ ಹೊಸ ತಂಡದೊಂದಿಗೆ ಇನ್ನಷ್ಟು ಕಾರ್ಯಗಳು ಮೂಡಿಬರಲಿ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮನಾಥ ಕೋಟ್ಯಾನ್ ತಿಳಿಸಿ ಶುಭ ಹಾರೈಸಿದರು. ಅವರು ದಿನಾಂಕ 13.03.2022 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ ಬಜ್ಪೆ ಘಟಕದ ನೂತನ ತಂಡದ ಪದಗ್ರಹಣ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸಮಾರಂಭದ […]
Read More
12-03-2022, 4:46 AM
ಕಡಬ :- ದಿನಾಂಕ 12.03.2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಭೇತಿ ಕಾರ್ಯಗಾರ “ವಿದ್ಯಾ ಸ್ಪೂರ್ತಿ” ಕಾರ್ಯಕ್ರಮವು ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ “ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ SSLC ಯ ಅಂಕಗಳು ಮಾನ ದಂಡವಾಗುತ್ತದೆ ಹಾಗೆಯೇ ಈ ಅದ್ಭುತ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕ […]
Read More
08-03-2022, 5:00 AM
ಮುಲ್ಕಿ :- ದಿನಾಂಕ 08.03.2022 ರಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಮುಲ್ಕಿಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಶಾಲೆಯ ಸಭಾಂಗಣದಲ್ಲಿ ಜೇಸಿ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಂದ ಶೈಕ್ಷಣಿಕ ಮಾರ್ಗದರ್ಶನ ಶಿಬಿರವು ನಡೆಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತಾನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ರಾದ ಉದಯ ಅಮೀನ್ ಮಟ್ಟು”ನನ್ನ ಮಾತೃ ಸಂಸ್ಥೆ ಯಾಗಿರುವ ಮುಲ್ಕಿ ಘಟಕವು ನಮ್ಮ ಸಂಸ್ಥೆಯ ಧೇಯೋದ್ದೇಶದಂತೆ ವಿದ್ಯೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಾ […]
Read More
06-03-2022, 10:44 AM
ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]
Read More
27-02-2022, 8:12 AM
ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]
Read More
20-02-2022, 2:26 PM
ಕೋಟ: ಸಂಘಟನೆಗಳು ಸಮಾಜದ ಶ್ರೇಯಸ್ಸಿಗಾಗಿ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೊಂದವರ, ಅಶಕ್ತರ ಬಾಳಿಗೆ ಬೆಳಕಾಗಿ ಹೊಸ ಮುನ್ನುಡಿ ಬರೆಯುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ(ರಿ) ಯಡ್ತಾಡಿ ಘಟಕ ಹಲವಾರು ಸಮಾಜ ಸೇವೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯ ಸ್ಥಾಪನೆಯ ಉದ್ದೇಶದಂತೆ ಹೆಜ್ಜೆ ಹಾಕುತ್ತಿರುವುದು ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಡ್ತಾಡಿ ಶ್ರೀಕೃಷ್ಣ ನಿಲಯದ ವಠಾರದಲ್ಲಿ ಯುವವಾಹಿನಿ (ರಿ) ಯಡ್ತಾಡಿ […]
Read More
18-02-2022, 5:46 AM
ಅಳಿಯೂರು : ಸಿದ್ದತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರು ಹಾಗೂ ಜೇಸೀ ರಾಷ್ಟ್ರೀಯ ತರಬೇತುದಾರರಾದ ಸುಧಾಕರ ಕಾರ್ಕಳ ಅಭಿಪ್ರಾಯ ಪಟ್ಟರು. ಅವರು ದಿನಾಂಕ 18.02.2022 ರಂದು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಜರುಗಿದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟು ಮಾತನಾಡಿದರು ಶಿಕ್ಷಣ ಸಂಯೋಜಕರಾದ ಸ್ಮಿತಾ ಮಿರಾಂದ ದೀಪ ಬೆಳಗುವುದರ ಮೂಲಕ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸರಣಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ […]
Read More
13-02-2022, 4:30 PM
ಕಾರ್ಕಳ :ಬಿಲ್ಲವ ಸಮಾಜ ಸೇವಾ ಸಂಘ(ರಿ) ಬಜಗೋಳಿ,ಯುವವಾಹಿನಿ(ರಿ) ಕಾರ್ಕಳ ಘಟಕ,ಹಾಗೂ ಯೂತ್ ಬಿಲ್ಲವ(ರಿ) ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ ಇದರ ಸಹಯೋಗದೊಂದಿಗೆ ಸಾರ್ವಜನಿಕ ಬ್ರಹತ್ ರಕ್ತದಾನ ಶಿಬಿರವು ಶ್ರೀ ನಾರಾಯಣ ಗುರು ಸಭಾಭವನ ಬಜಗೋಳಿ ಇಲ್ಲಿ ಫೆ.13ರಂದು ನಡೆಯಿತು. ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ನಲ್ಲೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಕಾರ್ಕಳ ಇದರ ಮಾಲಕರಾದ ಸುಶಾಂತ್ ಬಜಗೋಳಿ ಇವರು […]
Read More