ಘಟಕಗಳು

ಯುವವಾಹಿನಿ ಉಡುಪಿ ಘಟಕದ ವತಿಯಿಂದ ಯೋಗ ದಿನಾಚರಣೆ

ಉಡುಪಿ : ಯುವವಾಹಿನಿಯ ಉಡುಪಿ ಘಟಕದ ವತಿಯಿಂದ 5 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಘಟಕದ ಸಭಾಂಗಣದಲ್ಲಿ ದಿನಾಂಕ 21/06/2019 ರಂದು ನಡೆಯಿತು. ಯುವವಾಹಿನಿಯ ಉಡುಪಿ ಘಟಕದ ಅಧ್ಯಕ್ಷರಾದ ನಾರಾಯಣ್ ಬಿ. ಎಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಪತಾಂಜಲಿ ಹರಿದ್ವಾರ ಯೋಗ ಶಿಬಿರ” ಉಡುಪಿ ಇದರ ಯೋಗ ಶಿಕ್ಷಕಿ ಅನಿತಾ ಹಾಗೂ ಅವರ ಪತಿ ಯೋಗ ಶಿಕ್ಷಕ ತಿಪ್ಪೆಶ್ ರವರು ಯೋಗದ ಮಹತ್ವವನ್ನು ತಿಳಿಸಿದರು ಹಾಗೂ ಎಲ್ಲಾ ಸದಸ್ಯರಿಗೂ ತರಬೇತಿ ನೀಡಿದರು. ಯೋಗ ಗುರು […]

Read More

ಮೂಡಿಗೆರೆ ಪ್ರಕೃತಿಯ ಮಡಿಲಲ್ಲಿ ನಾಲ್ಕು ಘಟಕಗಳ ಸಮ್ಮಿಲನ

ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಹಮ್ಮಿಕೊಂಡಿದ್ದ ಕಾಡಿನ ನಡುವೆ ಒಂದು ದಿನದ ಚಾರಣ ದಲ್ಲಿ ನಾಲ್ಕು ಘಟಕ.ಸಮ್ಮಿಲನ ಗೊಂಡಿದ್ದು ಪರಿಚಯ ಮತ್ತು ಆತ್ಮೀಯತೆಗೆ ಕಾರಣವಾಗಿದೆ. ಮುಂಜಾನೆಯ ಹೊತ್ತು ಯುವವಾಹಿನಿ ಸಸಿಹಿತ್ಲು ಘಟಕದ ಸದಸ್ಯರನ್ನು ಬೆಳ್ತಂಗಡಿ ಘಟಕದ ಸದಸ್ಯರು ಬೆಳ್ತಂಗಡಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಅಲ್ಲಿಂದ ಆರಂಭಗೊಂಡ ಚಾರಣ ಮತ್ತೂರು ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಮುಂದುವರಿಯಿತು. ಚಾರ್ಮಾಡಿಯಲ್ಲಿ ಚಾರಣ, ಸ್ನಾನ ಬಳಿಕ ಮೂಡಿಗೆರೆ ಕಾಮತ್ ರೆಸಾರ್ಟ್ ನಲ್ಲಿ ಸ್ನೇಹಮಿಲನ.ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ರಚನೆಯಾದ ಯುವವಾಹಿನಿ […]

Read More

“ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ

ಮೂಡುಬಿದಿರೆ : ಯುವವಾಹಿನಿ .ರಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-6-2019ನೇ ಆದಿತ್ಯವಾರದಂದು “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು “ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ. ರಿ ಮೂಡುಬಿದಿರೆಯಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದಿರೆ‌ ಯುವವಾಹಿನಿ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ ವಹಿಸಿದ್ದರು. ಯುವಸ್ಪಂದನ ಸೇವಾಯೋಜನೆಯ ಉದ್ಘಾಟನೆಯನ್ನು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ […]

Read More

ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಯುವ ಸ್ಪೂರ್ತಿ 2018-19

ಮಾಣಿ : ದಿನಾಂಕ 16-06-2019ರಂದು ಯುವವಾಹಿನಿ(ರಿ.)ಮಾಣಿ ಘಟಕದ ವತಿಯಿಂದ ಸ.ಹಿ.ಪ್ರಾ.ಶಾಲೆ ಗಡಿಯಾರ, ಕೆದಿಲ ಇಲ್ಲಿ ಯುವ ಸ್ಪೂರ್ತಿ 2018-19 ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು.ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು,ನಿವೃತ್ತ ಸಿಎ ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ,ಮಾಣಿ ಘಟಕ ಸಲಹೆಗಾರ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ , ಗಡಿಯಾರ […]

Read More

ಯುವವಾಹಿನಿ (ರಿ.) ಬೆಂಗಳೂರು ಘಟಕದ ಭಾಂಧವ್ಯ – 2019

ಬೆಂಗಳೂರು : ದಿನಾಂಕ 16-06-2019 ರಂದು 45 ಸದಸ್ಯರು ಹಾಗೂ 6 ಮಕ್ಕಳು ಒಟ್ಟು 51 ಮಂದಿ ಒಂದು ದಿನದ ಪ್ರವಾಸಕ್ಕೆ ಡ್ರೀಮ್ ಲ್ಯಾಂಡ್ ರೆಸಾರ್ಟ್ ಗೊಲ್ಲಹಳ್ಳಿ, ಬೆಂಗಳೂರು ಇಲ್ಲಿಗೆ ಕೈಗೊಂಡಿದ್ದೇವು.ಈ ಕಾರ್ಯಕ್ರಮವು ನಿರೀಕ್ಷೆಗೆ ಮೀರಿ ಯಶಸ್ವಿ ಗೊಂಡಿತು. ಬೆಳಿಗ್ಗೆ ಸರಿಯಾಗಿ 8.35ಕ್ಕೆ ಬೆಂಗಳೂರಿನಿಂದ ಬಸ್ನಿಂದ ಪ್ರಯಾಣಿಸಿ ಸರಿಯಾಗಿ 9.20 ಕ್ಕೆ ರೆಸಾರ್ಟ್ ತಲುಪಿದೆವು.ಬೆಳಗ್ಗಿನ ಉಪಹಾರ ಮಾಡಿ ಮುಂದಿನ ಆಟಗಳಲ್ಲಿ ತೊಡಗಿಸಿಕೊಂಡಿದ್ದೇವು. ಬೆಂಗಳೂರಿನ ಒತ್ತಡದ ಜೀವನದಲ್ಲಿ ಎಲ್ಲರೂ ಯುವವಾಹಿನಿ ಬಂಧು ಮಿತ್ರರು ಒಟ್ಟಾಗಿ ಒಂದು ದಿನ ಬಿಡುವು […]

Read More

ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಬಂಟ್ವಾಳ : ಬಿರುವೆರ್ ಕುಡ್ಲ ( ರಿ.) ಬಂಟ್ವಾಳ ಘಟಕ ಮತ್ತು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಯೂನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುವ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಕಾರ್ಯಕ್ರಮವು ದಿನಾಂಕ 16-06-2019ನೇ ಆದಿತ್ಯವಾರದಂದು ನಾವೂರ ಪ್ರೌಢಶಾಲೆಯಲ್ಲಿ ನಡೆಯಿತು. ಬಿರ್ವೆರ್ ಕುಡ್ಲ (ರಿ) ಬಂಟ್ವಾಳ […]

Read More

ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಒಂದು ದಿವಸದ ಕಿರುಪ್ರವಾಸ.

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದಿಂದ ದಿನಾಂಕ 16.06.2019 ರ ಭಾನುವಾರ ಶ್ರೃಂಗೇರಿ, ಹೊರನಾಡು, ಕಲಶ ಮತ್ತು ಕುದುರೆಮುಖ ಬೆಟ್ಟಗಳಿಗೆ ಪ್ರವಾಸ ಏರ್ಪಡಿಸಲಾಗಿತ್ತು. ಸುಮಾರು 100 ಜನರನ್ನು ಒಳಗೊಂಡ ಪ್ರವಾಸಿ ತಂಡವು ಎರಡು ಬಸ್ಸುಗಳಲ್ಲಿ ಬೆಳಿಗ್ಗೆ 6.00 ಗಂಟೆಗೆ ಸರಿಯಾಗಿ ಯುವವಾಹಿನಿ ಸಭಾಂಗಣದಿಂದ ಹೊರಟ್ಟಿತ್ತು. ಬಜಗೋಳಿಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿದ ನಂತರ ಕಳಸ, ಹೊರನಾಡು, ಶೃಂಗೇರಿ ಮತ್ತು ಕುದುರೆ ಮುಖ ಬೆಟ್ಟಗಳ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ರಾತ್ರಿ 8.00 ಗಂಟೆಗೆ ವಾಪಸು ಬಂದಿದ್ದೇವೆ. ದಿನವಿಡೀ ಹಾಡು, […]

Read More

ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಆಯ್ಕೆ

  ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ

Read More

ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು : ಉಮನಾಥ್ ಕೊಟ್ಯಾನ್

ಮೂಡುಬಿದಿರೆ : ವಿದ್ಯಾರ್ಥಿಗಳು ಸಾಹಿತ್ಯದ ಅಬಿರುಚಿ ಬೆಳೆಸಿಕೊಳ್ಳಬೇಕು, ಕಥೆ, ಕವನ, ಲೇಖನಗಳನ್ನು ಓದುವ ಹವ್ಯಾಸ ನಮ್ಮನ್ನು ಪ್ರಬುದ್ದರನ್ನಾಗಿಸುತ್ತದೆ ಎಂದು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ “ಉಮನಾಥ್ ಎ. ಕೋಟ್ಯಾನ್ ತಿಳಿಸಿದರು ಅವರು ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-06-2019ನೇ ಆದಿತ್ಯವಾರದಂದು ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸಂಘದಲ್ಲಿ ನಡೆದ “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ […]

Read More

ಯುವವಾಹಿನಿ (ರಿ.) ಹೆಜಮಾಡಿ ಘಟಕದ ಪದಗ್ರಹಣ

ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 16.06 .2019 ರಂದು ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘ ಹೆಜಮಾಡಿಯ “ಜಯ ಸಿ ಸುವರ್ಣ ” ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ  ಹೆಜಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಹೆಜ್ಮಾಡಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಹೆಜಮಾಡಿ ಘಟಕದ ಸಮಾಜಮುಖಿ ಕಾರ್ಯದ ಬಗ್ಗೆ ಮೆಚ್ಚುಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!