ಸಸಿಹಿತ್ಲು

ವಿಶುಕುಮಾರ್ ಸಾಹಿತ್ಯ ಸಮ್ಮೇಳನದಲ್ಲಿ..ಹಾಸ್ಯ-ಹರಟೆ….

“ನಾನು ಅದೆಷ್ಟೋ ವರ್ಷಗಳ ಕಾಲ ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿ ಕೆಲಸ ಮಾಡಿರುತ್ತೇನೆ.  ಹಲವಾರು ಕಾನ್ಫೆರನ್ಸಗಳಲ್ಲಿ ಪ್ರಬಂಧ ಮಂಡಿಸಿ, ಹಲವಾರು ಕೃತಿಗಳನ್ನು ಬರೆದು ಸಾಹಿತ್ಯಾತ್ಮಕವಾಗಿ ಒಂದಷ್ಟು ಕೆಲಸ ಮಾಡಿದ್ದೇನೆ. ಆದರೂ…. ದೇಶದಲ್ಲಾಗಲಿ ವಿದೇಶದಲ್ಲಾಗಲೀ ನನ್ನನ್ನು ಕಂಡಾಗ ಗುರುತಿಸುವುದು ಎಕ್ಕಸಕ್ಕ ಬರೆತಿನಾರ್ ಮೇರ್ (ಎಕ್ಕಸಕ್ಕ ಬರೆದವರು ಇವರು) ಎಂದು. “೪೦ ದಶಕಗಳ ಹಿಂದೆ ಬರೆದ ಆ ಹಾಡು ನನ್ನನ್ನು ಇವತ್ತಿಗೂ ಸಾಹಿತ್ಯಲೋಕದಲ್ಲಿ ಜೀವಂತವಾಗಿರಿಸಿದೆ. ಇಂತಹ ಜನಪ್ರಿಯತೆಯನ್ನು ಪಡೆಯಲು ಕಾರಣ ಅಂದು ನನಗೆ ಅವಕಾಶ ನೀಡಿದ ವಿಶುಕುಮಾರ್‌ರವರು. ಈ ಎಲ್ಲಾ ಕೀರ್ತಿಸಲ್ಲಬೇಕಾದುದು ವಿಶುಕುಮಾರ್ […]

Read More

ಮರೆಯಲಾಗದ ಚೇತನ ವಿಶುಕುಮಾರ್ : ಪ್ರೊ.ಬಿ.ಎ ವಿವೇಕ್ ರೈ

ಮಂಗಳೂರು : ನಮ್ಮಿಂದ ಮರೆಯಾದ ವ್ಯಕ್ತಿ ಎಲ್ಲಿಯವರೆಗೆ ಜನರ ಮನಸಲ್ಲಿ ಜೀವಂತವಾಗಿರುತ್ತಾರೋ ಅಲ್ಲಿಯವರೆಗೆ ಅವರು ಬದುಕಿರುವ ಚೇತನ, ಅಂತಹ ಮಹಾನ್ ವ್ಯಕ್ತಿ, ತನ್ನ ಸಾವಿನ 33 ವರುಷದ ಬಳಿಕವೂ ಜೀವಂತವಾಗಿರುವವರು. ವಿಶುಕುಮಾರ್ ಅವರ ಸಾಧನೆ ಅವರನ್ನು ಜೀವಂತವಾಗಿರಿಸಿದೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ ವಿವೇಕ್ ರೈ ತಿಳಿಸಿದರು. ಅವರು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ವಿಶುಕುಮಾರ್ […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ 2018 ನೇ ಸಾಲಿನ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ, ಯುವ ಸಾಹಿತಿ ದಿನೇಶ್ ಸುವರ್ಣ ರಾಯಿ ಇವರಿಗೆ ಪ್ರದಾನ ಮಾಡಲಾಯಿತು. ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯ

ಸಸಿಹಿತ್ಲು : ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 30.09.2018ರಂದು ಬೆಳಿಗ್ಗೆ 9ರಿಂದ 12ಗಂಟೆಯವರೆಗೆ  ಸ್ವಚ್ಛತಾ ಕಾರ್ಯವು ಬ್ರಹ್ಮಶ್ರೀ ನಾರಯಾಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ವಠಾರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಶೈಲೇಶ್ ಕುಮಾರ್ ಸಸಿಹಿತ್ಲು, ಕಾರ್ಯದರ್ಶಿ ವೀಣಾ ಅಮೀನ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Read More

ಕ್ರಿಯಾಶೀಲ ಮನಸುಗಳಿಂದ ಕ್ರಿಯಾಶೀಲ ಕಲ್ಪನೆಗಳ ಸ್ರಷ್ಟಿ : ಜಯಂತ್ ನಡುಬೈಲ್

ಸಸಿಹಿತ್ಲು : ಕ್ರೀಯಾಶೀಲ ಮನಸುಗಳು ಇದ್ದಾಗ ಕ್ರೀಯಾತ್ಮಕ ಕಲ್ಪನೆಗಳು ಹುಟ್ಟಿಕೊಳ್ಳುತ್ತದೆ, ಮಾಡುವ ಕೆಲಸದಲ್ಲಿ ಬದ್ದತೆ ಇದ್ದಾಗ ಲಭಿಸುವ ಫಲಿತಾಂಶವೂ ಫಲಪ್ರದವಾಗಿರುತ್ತದೆ ಇದಕ್ಕೆ ಯುವವಾಹಿನಿ ಸಸಿಹಿತ್ಲು ಘಟಕ ಹಮ್ಮಿಕೊಂಡಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯೇ ಸಾಕ್ಷಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು. ಅವರು, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 01.09.2018 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಮತ್ತು ಲಯನ್ಸ್-ಲಯನೆಸ್ ಕ್ಲಬ್ […]

Read More

ಫ್ರೌಡ ಶಾಲೆಗೆ ಕಂಪ್ಯೂಟರ್ ಕೊಡುಗೆ

ಸಸಿಹಿತ್ಲು : ದಿನಾಂಕ 17.08.2018 ರಂದು ಸುರತ್ಕಲ್ ಎನ್.ಐ,ಟಿ,ಕೆ, ಕನ್ನಡ ಮಾಧ್ಯಮ ಫ್ರೌಡ ಶಾಲೆಗೆ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ವತಿಯಿಂದ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು , ನಿಕಟಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಬೆಂಗಳೂರಿನಲ್ಲಿ ಸಮಾಲೋಚನಾ ಸಭೆ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕ ರಚಿಸುವ ಸಲುವಾಗಿ ದಿನಾಂಕ‌ 17.06.2018 ರಂದು ಬೆಂಗಳೂರಿನ ಮಲ್ಲೇಶ್ವರಂ ನ ಗಾಂಧಿ ಸಾಹಿತ್ಯ ಸಂಘದಲ್ಲಿ ಸಮಾಲೋಚನಾ ಸಭೆ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ‌ ಅಧ್ಯಕ್ಷ ಎಮ್.ಸಂಜೀವ ಪೂಜಾರಿ ದೀಪ ಬೆಳಗುವುದರ ಮೂಲಕ ಸಭೆ ಉದ್ಘಾಟಿಸಿದರು. ನೂತನ ತಂಡ ರಚಿಸುವ ಸಂದರ್ಭದಲ್ಲಿ ತನಗೆ ಇಂತಹ ಹುದ್ದೆ ನೀಡಿ‌ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು‌ ಸದಸ್ಯರು ಆತ್ಮವಿಶ್ವಾಸದಿಂದ ಹುದ್ದೆಯನ್ನು ಸ್ವೀಕರಿಸಿರುವುದು ಉತ್ತಮ ಬೆಳವಣಿಗೆ, ಈ ನಿಟ್ಟಿನಲ್ಲಿ ಬೆಂಗಳೂರು ಘಟಕ ಯಶಸ್ವಿಯಾಗುವುದರಲ್ಲಿ ಎರಡು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!