09-08-2026, 8:00 PM
ಕಡಬ, ಆಗಸ್ಟ್ 09: ಯುವಕರ ಒಗ್ಗಟ್ಟು ಹಾಗೂ ಸಂಘಟಿತ ಪ್ರಯತ್ನವೇ ಯುವವಾಹಿನಿಯ ಶಕ್ತಿ. ಯುವಜನತೆ ಸಮಾಜಮುಖಿ ಚಿಂತನೆಯೊಂದಿಗೆ ಒಗ್ಗಟ್ಟಾಗಿ ಮುನ್ನಡೆದಾಗ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲು ಸಾಧ್ಯ ಎಂದು ಶ್ರೀ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಹೇಳಿದರು. ಅವರು ದಿನಾಂಕ 09.08.2026ರಂದು ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ, ಬಿಲ್ಲವ ಸಂಘ ಕಡಬ ತಾಲೂಕು ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಅಲಂಕಾರು–ಪೆರಾಬೆ ಗ್ರಾಮದ ಶ್ರೀ ರಕ್ತೇಶ್ವರಿ ದೈವಸ್ಥಾನ ಮಾಯಿಲ್ಗದ ಮುಂಭಾಗದ […]
Read More
09-08-2026, 10:00 AM
ಕಾಪು, ಆಗಸ್ಟ್ 09: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಸಿಎಆರ್‌ನ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಉಮೇಶ್ ಪಿ. ಹೇಳಿದರು. ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾದ ‘ಯುವವಾಹಿನಿ ಟ್ರೋಫಿ–2026’ ಓಪನ್ ಹಾಗೂ ವಯೋಮಿತಿ ಚೆಸ್ ಪಂದ್ಯಾವಳಿಗೆ […]
Read More
02-08-2026, 8:00 PM
ಹೆಜಮಾಡಿ, ಆ. 2: ಯುವವಾಹಿನಿ (ರಿ.) ಹೆಜಮಾಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಹೆಜಮಾಡಿ ಬಿಲ್ಲವರ ಸಂಘ (ರಿ.) ಸಭಾಂಗಣದಲ್ಲಿ ಘಟಕದ ಅಧ್ಯಕ್ಷ ನಿಶಾಂಕ್ ಎಸ್. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘ (ರಿ.) ಅಧ್ಯಕ್ಷ ಮೋಹನ್ ದಾಸ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯು ಸಮಾಜಮುಖಿ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ […]
Read More
02-08-2026, 1:00 PM
ಬಂಟ್ವಾಳ, ಆ. 3: ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ರಾಮಚಂದ್ರ ಸಾಲ್ಯಾನ್ ಅವರಿಗೆ ಸೇವಾ ಯೋಜನೆಯಡಿ ₹25,000 ಮೊತ್ತದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಈ ಸೇವಾ ಯೋಜನೆಯನ್ನು ರೂಪಿಸಲಾಗಿದ್ದು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನೆರವಿನ ಮೊತ್ತವನ್ನು ಫಲಾನುಭವಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾರ್ಗದರ್ಶಕರಾದ ಭುವನೇಶ್ ಪಚ್ಚಿನಡ್ಕ ಚಕ್ ಹಸ್ತಾಂತರ ಮಾಡಿದರು ಯುವವಾಹಿನಿ ಬಂಟ್ವಾಳ […]
Read More
01-08-2026, 2:00 PM
ಮೂಡುಬಿದಿರೆ, ಆ. 1: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೂಡುಬಿದಿರೆಯಲ್ಲಿ ಆಗಸ್ಟ್ 1ರಂದು ‘ವಿದ್ಯಾರ್ಥಿ ಮನೋಹಿತ’ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಾಗಾರ–2 ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ಶಿಸ್ತುಬದ್ಧ ಜೀವನಶೈಲಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಸಂತೋಷ್ ನಾಯ್ಕ್ […]
Read More
28-07-2026, 8:00 PM
ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ […]
Read More
26-07-2026, 7:00 PM
ಕಂಕನಾಡಿ, ಜುಲೈ 26: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ‘ಅಟಿದ ನೆಂಪು’ ಕಾರ್ಯಕ್ರಮವು ಜುಲೈ 26ರಂದು ಭಾನುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಭಗವತಿ ಇಂಗ್ಲೀಷ್ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಾವತಿ ದೀಪ ಬೆಳಗಿಸಿ ಹಾಗೂ ಹಲಸಿನ ಹಣ್ಣನ್ನು ಸಾಂಪ್ರದಾಯಿಕವಾಗಿ ತುಂಡು ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ಸ್ಥಳೀಯವಾಗಿ ದೊರೆಯುವ ಸೊಪ್ಪು, ಹಣ್ಣು ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಜನರು ತಮ್ಮ ಜೀವನವನ್ನು ಸಾಗಿಸುತ್ತಿದ್ದರು. […]
Read More
26-07-2026, 2:00 PM
ಮೂಡುಬಿದಿರೆ, ಜುಲೈ 26: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಶಿರ್ತಾಡಿ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ, ಶಿರ್ತಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು–ಮೂಡುಬಿದಿರೆ ವತಿಯಿಂದ ಉಚಿತ ನೇತ್ರ ತಪಾಸಣೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, […]
Read More
26-07-2026, 2:00 PM
ಮುಲ್ಕಿ, ಜುಲೈ 26: “ಇಂದು ದೇಶ-ವಿದೇಶಗಳಲ್ಲಿ ಆಟಿಡೊಂಜಿ ದಿನದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದರೆ, ಅದಕ್ಕೆ ಮೂಲ ಪ್ರೇರಣೆಯೇ ಯುವವಾಹಿನಿ (ರಿ.) ಮುಲ್ಕಿ ಘಟಕ” ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ್ ಹೆಜ್ಮಾಡಿ ಹೇಳಿದರು. ಅವರು ಜುಲೈ 26ರಂದು ಮುಲ್ಕಿ ಬಿಲ್ಲವ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಆಯೋಜಿಸಲಾದ 24ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಿಂದಿನ ಕಾಲದ ಚಿಮಿನಿ ದೀಪ ಬೆಳಗಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ […]
Read More
25-07-2026, 1:00 PM
ಬಂಟ್ವಾಳ, ಜು. 25 : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಐ.ಎಂ.ಎ. ಮಂಗಳೂರು ಶಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ಜಾಗೃತಿ ಹಾಗೂ ಸಮಾಜಸೇವೆಯ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಯುವವಾಹಿನಿಯ ಸುಮಾರು 70 ಮಂದಿ ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ […]
Read More