28-07-2026, 8:00 PM
ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ […]
Read More
26-07-2026, 7:00 PM
ಕಂಕನಾಡಿ, ಜುಲೈ 26: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ‘ಅಟಿದ ನೆಂಪು’ ಕಾರ್ಯಕ್ರಮವು ಜುಲೈ 26ರಂದು ಭಾನುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಭಗವತಿ ಇಂಗ್ಲೀಷ್ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಾವತಿ ದೀಪ ಬೆಳಗಿಸಿ ಹಾಗೂ ಹಲಸಿನ ಹಣ್ಣನ್ನು ಸಾಂಪ್ರದಾಯಿಕವಾಗಿ ತುಂಡು ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ಸ್ಥಳೀಯವಾಗಿ ದೊರೆಯುವ ಸೊಪ್ಪು, ಹಣ್ಣು ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಜನರು ತಮ್ಮ ಜೀವನವನ್ನು ಸಾಗಿಸುತ್ತಿದ್ದರು. […]
Read More
26-07-2026, 2:00 PM
ಮುಲ್ಕಿ, ಜುಲೈ 26: “ಇಂದು ದೇಶ-ವಿದೇಶಗಳಲ್ಲಿ ಆಟಿಡೊಂಜಿ ದಿನದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದರೆ, ಅದಕ್ಕೆ ಮೂಲ ಪ್ರೇರಣೆಯೇ ಯುವವಾಹಿನಿ (ರಿ.) ಮುಲ್ಕಿ ಘಟಕ” ಎಂದು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ್ ಹೆಜ್ಮಾಡಿ ಹೇಳಿದರು. ಅವರು ಜುಲೈ 26ರಂದು ಮುಲ್ಕಿ ಬಿಲ್ಲವ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಆಯೋಜಿಸಲಾದ 24ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಿಂದಿನ ಕಾಲದ ಚಿಮಿನಿ ದೀಪ ಬೆಳಗಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ […]
Read More
19-07-2026, 3:00 PM
ಬಜಪೆ ಜುಲೈ 19 : ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ -ಕರಂಬಾರು ಇವರ ಸಹಕಾರದಲ್ಲಿ “ಆಟಿದ ನೆಂಪು -2026” ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ 19.07.2026 ರಂದು ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಊರಿಗೆ ಬಂದ ಮಾರಿ ರೋಗದ ಕಳೆ ರುಜಿನದ ಕೊಳೆಯ ಕಳೆಯುತ್ತಾ ಮನೆಯಂಗಳಕ್ಕೆ […]
Read More
19-07-2026, 9:00 AM
ನಿಯಮಾವಳಿ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ, 2026ರ ಆಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಯುವವಾಹಿನಿ ಭಜನಾ ಸ್ಪರ್ಧೆ–2026ರ ನಿಯಮಾವಳಿ ಈ ಕೆಳಗಿನಂತಿದೆ. 🔹 ಅರ್ಹತೆ ಮತ್ತು ಸದಸ್ಯತ್ವ1) ಇದು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್‌ಘಟಕ ಭಜನಾ ಸ್ಪರ್ಧೆಯಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿ, ಕೇಂದ್ರ ಸಮಿತಿಯಿಂದ ಅನುಮೋದನೆಗೊಂಡ ಸದಸ್ಯತ್ವ ಸಂಖ್ಯೆ […]
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ 2026ನೇ ಅಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
25-06-2026, 8:00 PM
ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಗುರುವಾರ ಸಂಜೆ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ಆತಿಥ್ಯದಲ್ಲಿ ಕಟಪಾಡಿಯಲ್ಲಿರುವ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಜನಾ ಸಂಕೀರ್ತನೆ ನಡೆಸಿದರು. ಬಳಿಕ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಸುವರ್ಣ ಅವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ, ಎಲ್ಲರಿಗೂ ಮಹಾಪ್ರಸಾದ ವಿತರಿಸಿದರು. ಗುರು ಸಂದೇಶ ನೀಡಿದ ಖ್ಯಾತ ನಿರೂಪಕರು ಹಾಗೂ ಘಟಕದ […]
Read More
23-06-2026, 9:00 PM
ಕೂಳೂರು ಜೂನ್ 23: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಅವರ “ಅನುಗೃಹ” ನಿವಾಸದಲ್ಲಿ ಮಂಗಳವಾರ ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಭಾಸ್ಕರ್ ಕೋಟ್ಯಾನ್ ಅವರ ಮಾತೃಶ್ರೀಯವರನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ […]
Read More
22-06-2026, 9:00 PM
ಮಂಗಳೂರು: ದಿನಾಂಕ: 22-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ತಂಡ ಕದ್ರಿ ಕಂಬಳ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ […]
Read More
07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
Read More