26-11-2024, 6:16 AM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳುಭವನದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.
Read More
24-08-2024, 3:32 AM
ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]
Read More
24-12-2023, 9:00 AM
ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]
Read More
25-12-2022, 8:51 AM
ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]
Read More
13-12-2022, 3:29 PM
ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]
Read More
30-10-2022, 3:15 PM
ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]
Read More
30-01-2022, 10:00 AM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]
Read More
11-01-2022, 1:41 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]
Read More
11-11-2019, 11:14 AM
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ನಿಂದ ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’ ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ವಿದ್ಯಾರ್ಥಿ ವೇತನ ವಿತರಣೆ ಅಕ್ಷರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ – ಪ್ರೇರಣಾ -2019 ಕಾರ್ಯಕ್ರಮವು ನ.11 ರಂದು ನಡೆಯಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಲಹೆಗಾರರಾದ ಲೋಕಯ್ಯ ಪೂಜಾರಿಯವರು ಕಾರ್‍ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ವಿದ್ಯಾನಿದಿ ಟ್ರಸ್ಟ್ […]
Read More