ಇತರೆ

2022-23 ನೇ ಸಾಲಿನ ಪದಗ್ರಹಣ ಸಮಾರಂಭ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 14 ಆಗಸ್ಟ್ 2022 ರಂದು ಬ್ರಹ್ಮಶ್ರೀ ನಾರಾಯಣಗುರು ಸಭಾ ಮಂದಿರ ಕೊಲ್ಯದಲ್ಲಿ ಜರಗಿತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್ ಕೊಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಚುನಾವಣಾಧಿಕಾರಿ ಮತ್ತು ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ರವಿ ಕೊಂಡಾಣ 2022-23 ನೇ ಸಾಲಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೇರವೇರಿಸಿದರು. ಯುವವಾಹಿನಿ (ರಿ.) […]

Read More

ರಕ್ಷಾ ಬಂಧನ ಕಾರ್ಯಕ್ರಮ

ಶಕ್ತಿ ನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕ ಇದರ ವತಿಯಿಂದ 11 ಆಗಸ್ಟ್ 22ರ ಗುರುವಾರ ದಂದು ಘಟಕದ ವತಿಯಿಂದ ಪವಿತ್ರ ಹಬ್ಬ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮಕ್ಕೆ ಘಟಕದ ಮಾಜಿ ಅಧ್ಯಕ್ಷರಾದ ಭಾರತೀ ಜಿ ಅಮೀನ್ ರವರು ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು. ಸಭೆಯಲ್ಲಿ ಸಹೋದರತ್ವದ ಬಗ್ಗೆ ಅಧ್ಯಕ್ಷರಾದ ಜಯರಾಮ್ ಇವರು ಮಾತನಾಡುತ್ತಾ ಸಹೋದರ ಮತ್ತು ಸಹೋದರಿ ಎನ್ನುವ ಈ ಸುಂದರ ಬಂಧದ ಮಹತ್ವವನ್ನು ಗುರುತಿಸಲು, ಪ್ರತಿ ವರ್ಷ, ರಕ್ಷಾ ಬಂಧನ ಹಬ್ಬವನ್ನು ನಮ್ಮ ಯುವವಾಹಿನಿ […]

Read More

ಆರೋಗ್ಯ ಮಾನವನ ಶ್ರೇಷ್ಠ ಸಂಪತ್ತು : ಪಲ್ಲವಿ ಕಾರಂತ್

ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]

Read More

ತುಳುವರ ಬದುಕಿನ ಸಂಸ್ಕೃತಿ, ತಮ್ಮ ದಿನನಿತ್ಯದ ಕೆಲಸ – ಕಾರ್ಯ :- ಡಾ. ಯೋಗೀಶ್ ಕೈರೋಡಿ

ಮಾಣಿ :- ತುಳುವರ ಬದುಕಿನ ಪ್ರತಿಯೊಂದು ಕಾರ್ಯವು ಕೆಲಸಕ್ಕೆ ಕೇಂದ್ರಿತವಾಗಿದ್ದು,ಕೆಲಸದ ಪ್ರತಿಯೊಂದು ಕ್ರಮವೇ ಆಚರಣೆಯ ಒಂದು ಭಾಗವೇ ಆಗಿರುತ್ತದೆ.ತುಳುನಾಡಿನ ಹಳೆಯ ವಸ್ತುಗಳೇ ಒಂದೊಂದು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿಯವರು ನುಡಿದರು. ಅವರು ದಿನಾಂಕ 07 ಆಗಸ್ಟ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಹಮ್ಮಿಕೊಂಡ “ಆಟಿದ ತಿರ್ಲ್” ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು . ಕಾರ್ಯಕ್ರಮವನ್ನು ನೆಲ ಶುಧ್ಧಿಕರಿಸಿ,ಸುತ್ತಿಗೆ ಇಟ್ಟು ,ದೀಪ […]

Read More

ಹಾಳೆ ತೊಗಟೆಯ ಕಷಾಯ ವಿತರಣೆ

ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]

Read More

28ನೇ ಮನೆ ಮನೆ ಭಜನೆ

ಕೂಳೂರು :- ಸಂಗೀತ ಎಂಬ ದೇವತಾರಾಧನೆ ಕಲೆಯ ಮೊದಲ ಮೆಟ್ಟಿಲು ಭಜನೆ. ಭಕ್ತಿ ತನ್ಮಯತೆಯಿಂದ ದಿನವೂ ದೇವರ ನಾಮ ಹಾಡುವುದರಿಂದ ನಮ್ಮ ಮನಸ್ಸು ಸಾತ್ವಿಕತೆಯ ಒಂದು ಮಾರ್ಗವನ್ನು ಸಾಗುತ್ತದೆ.”ಹರಿ ಭಜನೆ ಮಾಡೋ ನಿರಂತರ, ಹರಿ ಭಜನೆ ಮಾಡೋ ನಿರಂತರ, ಪರ ಗತಿಗಿದು ನಿರ್ಧಾರ” ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ವರಮಹಾಲಕ್ಷ್ಮಿ ಪೂಜೆ

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನ ಇದರ ಸಹಕಾರದೊಂದಿಗೆ ತಾರೀಕು 5 ಆಗಸ್ಟ್ 2022 ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮಿ ಪೂಜೆಯು ಭಜನೆ, ಶ್ರೀ ಲಕ್ಷ್ಮೀ ಅಷ್ಟೋತ್ತರ, ಶ್ರೀ ಲಲಿತಾ ಸಹಸ್ರ ನಾಮ ಪಠನದೊಂದಿಗೆ ನಡೆಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು, ಮಂಗಳೂರು ಘಟಕದ ಅಧ್ಯಕ್ಷರು, ಕಂಕನಾಡಿ ಘಟಕದ ಸರ್ವ ಸದಸ್ಯರು ಹಾಗೂ ಸುಮಾರು […]

Read More

ಧಾರ್ಮಿಕ ಶಿಕ್ಷಣ ಪದ್ಧತಿ ಭಜನಾ ತರಬೇತಿ ಕಮ್ಮಟ

ಕೊಲ್ಯ :- ದಿನಾಂಕ 26 ಜುಲೈ 2022 ರ ಗುರುವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕ ಇದರ ಆಶ್ರಯದಲ್ಲಿ ಧಾರ್ಮಿಕ ಶಿಕ್ಷಣ ಪದ್ಧತಿ ಹಾಗೂ ಭಜನಾ ತರಬೇತಿ ಕಮ್ಮಟವು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ಗುರುಗಳಾದ‌ ಡಾ. ಅರುಣ್ ಉಳ್ಳಾಲ್ ರವರಿಂದ ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ಗಣಪತಿ ಭಜನೆಯನ್ನು ಎಲ್ಲಾ ವಿದ್ಯಾರ್ಥಿಗಳು […]

Read More

ಭಜನಾ ಕಾರ್ಯಕ್ರಮ

ಮಂಗಳೂರು:- ದಿನಾಂಕ 25 ಜುಲೈ 2022ರಂದು ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ, ಕುದ್ರೋಳಿಯಲ್ಲಿ ಸಂಜೆ 5.30 ರಿಂದ 7 ಗಂಟೆ ತನಕ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆಯಲ್ಲಿ ಕಂಕನಾಡಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಹೀಗೆ ಸುಮಾರು 15ಜನ ಸದಸ್ಯರು ಪಾಲ್ಗೊಂಡು ಭಜನಾ ಸಂಕೀರ್ತನೆ ನಡೆಸಿದರು. ಈ ಸಂದರ್ಭದಲ್ಲಿ ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನಾ ಸಂಕೀರ್ತನೆಯ […]

Read More

ಬೆನ್ನಿ ಬೇಸಾಯ – ಕೃಷಿಯಲ್ಲಿ ನಮ್ಮ ಭವಿಷ್ಯ

ಮಂಗಳೂರು :- ದಿನಾಂಕ 24 ಜುಲೈ 2022ರ ಭಾನುವಾರದಂದು ಮೇರು ಕೊಪ್ಪಳ ರಸ್ತೆ ಸಂಕು ಪೂಜಾರಿ ಇವರ ಹಡೀಲು ಬಿದ್ದಿರುವ ಗದ್ದೆಯ ಭೂಮಿಯಲ್ಲಿ ಯುವವಾಹಿನಿಯ ಸದಸ್ಯರಿಂದ ಬಿತ್ತನೆ ಬಿತ್ತಿ ಕೃಷಿ ಮಾಡುವ ಹಾಗೂ ಭತ್ತದ ನೇಜಿ ನೆಡುವ ಹೊಸ ಪ್ರಯತ್ನ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!