ಇತರೆ

ಪ್ರೀತಿ , ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಿಸೋಣ : ಪರಮಾನಂದ ಸಾಲ್ಯಾನ್

ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಾಣದ ನಮ್ಮ ಹಿರಿಯರ ಕನಸು ಮಾಡುವಲ್ಲಿ ಯುವವಾಹಿನಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಹಿರಿಯ ಪತ್ರಕರ್ತರು ಹಾಗೂ ರಂಗ ನಿರ್ದೇಶಕರಾದ ಪರಮಾನಂದ ಸಾಲ್ಯಾನ್ ತಿಳಿಸಿದರು. ದಿನಾಂಕ 24.09.2017 ರಂದು ಬೆಳುವಾಯಿ ಷಣ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹೊಸ ಚಿಂತನೆಗಳು, ಕ್ರಿಯಾಶೀಲ ಯೋಜನೆ, ಯೋಚನೆಯ ಮೂಲಕ ಯುವವಾಹಿನಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ‌ […]

Read More

ಆರೋಗ್ಯದ ಕಾಳಜಿ ವಹಿಸಿ: ರಮೇಶ್ ಬಂಗೇರ

ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಲ್ಲಿ ದೇಹದ ಸಮತೋಲನದಿಂದ ದಿನಪೂರ್ತಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಸೂಕ್ತ ವೈದ್ಯರಲ್ಲಿ ನಡೆಸಿಕೊಂಡು ರೋಗ ಬರುವ ಮೊದಲೇ ಆರೋಗ್ಯದ ಬಗ್ಗೆ ತಿಳಿದುಕೊಳ್ಳಿರಿ ಎಂದು ಲಯನ್ಸ್ ಕ್ಲಬ್‌ನ ಜಿಲ್ಲಾ ಸಮಿತಿಯ ಅಧಿಕಾರಿ ರಮೇಶ್ ಬಂಗೇರ ಹೇಳಿದರು. ಅವರು ದಿನಾಂಕ 24.09.2017 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಯುವವಾಹಿನಿ ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ,ಲಯನ್ಸ್, ಲಿಯೋ ಮತ್ತು ಪೂಜಾ ಫ಼್ರೆಂಡ್ಸ್‌ನ ಹಾಗೂ ಮುಕ್ಕದ […]

Read More

ಅಧ್ಯಕ್ಷರಾಗಿ ಯಶವಂತ ಪೂಜಾರಿ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ನೇ ಸಾಲಿನ ಅಧ್ಯಕ್ಷರಾಗಿ ಯಶವಂತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಸುವರ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾಗಿ ಜಯಂತ ನಡುಬೈಲು ಹಾಗೂ ನರೇಶ್ ಕುಮಾರ್ ಸಸಿಹಿತ್ಲು, ಕೋಶಾಧಿಕಾರಿಯಾಗಿ ಹರೀಶ್ ಕೆ.ಸನಿಲ್, ಜತೆ ಕಾರ್ಯದರ್ಶಿಯಾಗಿ ಚೇತನ್ ಕುಮಾರ್ ಮುಲ್ಕಿ., ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಭುವನೇಶ್ ಪಚ್ಚಿನಡ್ಕ, ವಾರ್ಷಿಕ ಸಮಾವೇಶ ನಿರ್ದೇಶಕರಾಗಿಹರೀಶ್ ಕೆ.ಪೂಜಾರಿ  ಕ್ರೀಡೆ ಮತ್ತು ಆರೋಗ್ಯನಿರ್ದೇಶಕರಾಗಿಸುಜಿತ್ ರಾಜ್ ಐ. ಸುರತ್ಕಲ್ , ಸಮಾಜ ಸೇವೆ ನಿರ್ದೇಶಕರಾಗಿ ಭಾಸ್ಕರ ಸಾಲ್ಯಾನ್ ಅಗರಮೇಲು, […]

Read More

ಪುಣ್ಯ ಕ್ಷೇತ್ರಗಳ ಪ್ರವಾಸ

ಯುವವಾಹಿನಿ (ರಿ) ಕೊಲ್ಯ ಘಟಕದ ಕುಟುಂಬ ಸದಸ್ಯರ ಪುಣ್ಯ ಕ್ಷೇತ್ರಗಳ ಒಂದು ದಿನದ ಪ್ರವಾಸ ದಿನಾಂಕ 17.09.2017 ರಂದು ಜರುಗಿತು. 58 ಸದಸ್ಯರ ಯುವವಾಹಿನಿ ಕೊಲ್ಯ ಘಟಕದ ಕುಟುಂಬ ಸದಸ್ಯರು ಬಪ್ಪನಾಡು ಕ್ಷೇತ್ರ, ಹಲವು ಮಕ್ಕಳ ತಾಯಿ ದೇವಸ್ಥಾನ, ಹಟ್ಟಿಯಂಡಿ ಗಣಪತಿ, ಕೊಲ್ಲೂರು ಮೂಕಾಂಬಿಕಾ, ಮುರುಡೇಶ್ವರ ಮುಂತಾದ ಪ್ರಸಿದ್ಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡರು. ಈ ಪ್ರವಾಸದ ಕ್ಷಣ ಕ್ಷಣದ ಸವಿನೆನಪು ಎಲ್ಲರಲ್ಲೂ ಮನದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿತು.

Read More

ಪ್ರೀತಿ ವಿಶ್ವಾಸದ ಬೆಸುಗೆ ಯುವವಾಹಿನಿ-ಸುನೀಲ್ ಕುಮಾರ್

ಸಮಾಜ ವನ್ನು ಕಟ್ಟಬೇಕಾಗಿರುವುದು ಹಣದಿಂದಲ್ಲ. ಬದಲಾಗಿ ನಂಬಿಕೆ ವಿಶ್ವಾಸ ಮತ್ತು ಪ್ರೀತಿಯಿಂದ. ಈ ಮೂರರ ಬಂಧನ ಕಳಚಲಾಗದ್ದು. ಅಂತಹ ಬೆಸುಗೆಯನ್ನು ಯುವವಾಹಿನಿ ಬೆಸೆಯುತ್ತಿದೆ ಎಂದು ಚಿಂತಕ, ಯುವ ಸಂಘಟಕ ಸುನೀಲ್ ಕುಮಾರ್ ಬಜಾಲ್ ತಿಳಿಸಿದರು ಅವರು ದಿನಾಂಕ 17.09.2017 ರಂದು ಬಂಟ್ವಾಳ ತಾಲೂಕಿನ ಮಾಣಿ ನಾರಾಯಣಗುರು ಸಮುದಾಯಭವನದಲ್ಲಿ ಜರುಗಿದ ಯುವವಾಹಿನಿಯ 26ನೇ ನೂತನ ಘಟಕ ಯುವವಾಹಿನಿ (ರಿ) ಮಾಣಿ ಘಟಕದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ […]

Read More

ಸೋಣ ಸಂಭ್ರಮ – 2017

ಕೃಷಿಕರಿಗೆ ಸೋಣ ತಿಂಗಳು ಸಂಭ್ರಮದ ತಿಂಗಳು ಆಗಿರುವುದರಿಂದ ಈ ಕಾರ್ಯಕ್ರಮದ ಶೀರ್ಷಿಕೆ ಅರ್ಥಪೂರ್ಣವಾಗಿದೆ.ತಂತ್ರಜ್ಞಾನದಿಂದ ಮನಸ್ಸಿನ ಬದಲಾವಣೆ ಆಗಬಹುದೇ ಹೊರತು ಸಂಸ್ಕೃತಿ, ಸಂಸ್ಕಾರ ಹಾಗೂ ಜೀವನ ಪಾಠವನ್ನು ಕಲಿಸುವುದಿಲ್ಲ ಹಾಗಾಗಿ ಸಂಸ್ಕಾರದ ಜತೆಗೆ ಜೀವನ ಮೌಲ್ಯವನ್ನು ಅಳವಡಿಸುವುದು ಇಂದು ತೀರಾ ಅಗತ್ಯವಾಗಿದೆ ಎಂದು ಮಂಗಳೂರು ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಕೆ.ಎ.ರೋಹಿಣಿ ಅಭಿಪ್ರಾಯ ಪಟ್ಟರು.ಅವರು ದಿನಾಂಕ 09.09.2017 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರುಗಿದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ […]

Read More

ಯುವವಾಹಿನಿ ಪ್ರೇರಕ ಶಕ್ತಿ : ಮೇಯರ್ ಕವಿತಾ ಸನಿಲ್

ಸುದೀರ್ಘ 30 ವರ್ಷಗಳ ಕಾಲ ವಿದ್ಯೆಗೆ ಪ್ರೋತ್ಸಾಹ ನೀಡುತ್ತಿರುವ ಯುವವಾಹಿನಿಯ ಅಧ್ಬುತ ಸಾಧನೆ ಶ್ಲಾಘನೀಯವಾದುದು, ಈ ನಿಟ್ಟಿನಲ್ಲಿ ಯುವವಾಹಿನಿ ಎಲ್ಲರಿಗೂ ಪ್ರೇರಕ ಶಕ್ತಿ .ನಮ್ಮ ಸಂಪಾದನೆಯ ಒಂದಂಶವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಭಾವನೆ ನಮ್ಮಲ್ಲಿರಬೇಕು, ಪರಸ್ಪರ ಸಹಕಾರದಿಂದ ಸದೃಢ ಸಮಾಜದ ನಿರ್ಮಾಣ ಮಾಡೋಣ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರು ಮಂಗಳಾ ಮ್ಯೂಸಿಕ್ ಕ್ಲಬ್ ಹಾಗೂ ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆಯ ಸಹಯೋಗದೊಂದಿಗೆ ಯುವವಾಹಿನಿ […]

Read More

ಭಜನಾ ಕಾರ್ಯಕ್ರಮ ಹಾಗೂ ಸನ್ಮಾನ

ಯುವವಾಹಿನಿ (ರಿ) ಅಡ್ವೆ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಪ್ರಯುಕ್ತ ದಿನಾಂಕ 06.09.2017 ರಂದು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ತದನಂತರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕರು ಹಾಗೂ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬಹಳ ಹಿಂದಿನಿಂದಲೂ ಸೇವೆ ಮಾಡಿಕೊಂಡು ಬಂದಿರುವ ಶ್ರೀ ಸಂಕಪ್ಪ ಪೂಜಾರಿಯವರನ್ನು ಗೌರವಿಸಲಾಯಿತು.

Read More

ಕಾನೂನು ಮಾಹಿತಿ ಶಿಬಿರ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಕೀಲರ ಸಂಘ ಬೆಳ್ತಂಗಡಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ,ಯುವವಾಹಿನಿ ಸಂಚಾಲನ ಸಮಿತಿ ವೇಣೂರು ಇದರ ಸಹಯೋಗದೊಂದಿಗೆ ದಿನಾಂಕ 30.08.2017 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ಬೆಳ್ತಂಗಡಿ JMFC ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಸತೀಶ್ ಉದ್ಘಾಟಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗುರುನಾರಾಯಣ ಸ್ವಾಮೀ ಸೇವಾ ಸಂಘದ ಮಾಜಿ ನಿರ್ದೇಶಕ, ಕೊಕ್ರಾಡಿ SDMC ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ.ವಹಿಸಿ ಸತತ ಮೂರು ವರ್ಷಗಳಿಂದ ಕಾನೂನು […]

Read More

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!