09-08-2026, 4:00 PM
ಮಾಣಿ ಅಗಸ್ಟ್ 09: ಮಾಣಿ ಪರಿಸರದ ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಆಂಬ್ಯುಲೆನ್ಸ್ ಸೇವೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿ ಸಿರಿ ಸಂಭ್ರಮ–2026’ ಕಾರ್ಯಕ್ರಮದ ವೇದಿಕೆಯಲ್ಲಿ ನೆರವೇರಿತು.ಜನರ ತುರ್ತು ಆರೋಗ್ಯ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಿಸಲಾಗುತ್ತಿರುವ ಈ ‘ಸೇವಾ ಸ್ಪರ್ಶ–ಆಂಬ್ಯುಲೆನ್ಸ್ ಸೇವೆ’ ಮಾಣಿ ಹಾಗೂ ಸುತ್ತಮುತ್ತಲಿನ ಜನರಿಗೆ ಮಹತ್ವದ ಆರೋಗ್ಯ ಸೇವಾ ಸೌಲಭ್ಯವಾಗಲಿದೆ. ಆರೋಗ್ಯ ಸೇವೆಯ ಕ್ಷೇತ್ರದಲ್ಲಿ ಮಾನವೀಯ ಕಾಳಜಿಯೊಂದಿಗೆ ಸಮಾಜಮುಖಿ ಹೆಜ್ಜೆ ಇಟ್ಟಿರುವ ಯುವವಾಹಿನಿ (ರಿ.) ಮಾಣಿ ಘಟಕದ […]
Read More
02-08-2026, 7:00 PM
ಮುಲ್ಕಿ, ಆ. 2: ಕಾರ್ಗಿಲ್ ವಿಜಯ ದಿನಾಚರಣೆಯು ಕೇವಲ ವಿಜಯದ ಸಂಭ್ರಮವಲ್ಲ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮ ಯೋಧರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಗೌರವ ಸಲಹೆಗಾರ ವೈ.ಎನ್. ಸಾಲ್ಯಾನ್ ಹೇಳಿದರು. ಅವರು ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾರ್ಗಿಲ್ ವಿಜಯ ಸುಲಭವಾಗಿ ದೊರೆತ ಗೆಲುವಲ್ಲ. ನಮ್ಮ ಯೋಧರು ತಮ್ಮ […]
Read More
27-07-2026, 6:00 PM
ಮಾಣಿ, ಜುಲೈ 27: ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷೆಯ “ಯುವ ಸೇವಾ ಸ್ಪರ್ಶ” ಯೋಜನೆಯ ಮೂರನೇ ಹಂತದ ಸೇವಾ ಕಾರ್ಯದ ಅಂಗವಾಗಿ, ಪೆರಾಜೆ ಗ್ರಾಮದ ನಿವಾಸಿ ಪದ್ಮಾವತಿ ಅವರಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳ ಕಿಟ್‌ನ್ನು ವಿತರಿಸಲಾಯಿತು. ಪದ್ಮಾವತಿ ಅವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದು, ಅನಾರೋಗ್ಯದ ಕಾರಣ ದುಡಿದು ಜೀವನ ನಿರ್ವಹಿಸಲು ಅಸಮರ್ಥರಾಗಿದ್ದಾರೆ. ಅವರ ಸಂಕಷ್ಟವನ್ನು, ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಮನಗಂಡ ಯುವವಾಹಿನಿ (ರಿ.) ಮಾಣಿ ಘಟಕವು ಮಾನವೀಯ ಕಳಕಳಿಯಿಂದ ಒಂದು ತಿಂಗಳಿಗೆ […]
Read More
13-07-2026, 2:00 PM
ಮಂಗಳೂರು, ಜು. 13: ಯುವವಾಹಿನಿ (ರಿ.) ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ದಿವಂಗತ ಅಶೋಕ್ ಅಂಚನ್ ಕೋಡಿಕಲ್ ಅವರ ಕುಟುಂಬಕ್ಕೆ ಯುವವಾಹಿನಿ (ರಿ.) ಮಂಗಳೂರು ಘಟಕವು ಮಾನವೀಯ ಕಾಳಜಿಯಿಂದ ₹75,000/- ಧನಸಹಾಯವನ್ನು ಹಸ್ತಾಂತರಿಸಿತು. ಅಶೋಕ್ ಅಂಚನ್ ಕೋಡಿಕಲ್ ಅವರು ದಿನಾಂಕ 30-06-2026ರಂದು ದೈವಾದೀನರಾಗಿದ್ದರು. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮನಗಂಡ ಯುವವಾಹಿನಿ (ರಿ.) ಮಂಗಳೂರು ಘಟಕವು, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಹಾಗೂ ವಿವಿಧ ಘಟಕಗಳ ಸದಸ್ಯರ ಸಹಕಾರದೊಂದಿಗೆ ಧನಸಹಾಯವನ್ನು ಸಂಗ್ರಹಿಸಿತು. ದಿನಾಂಕ 13-07-2026ರಂದು […]
Read More
09-07-2026, 4:00 PM
ಕಾರ್ಕಳ, ಜುಲೈ 9: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಕೆರ್ವಾಶೆ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಎಸ್‌ಎಲ್‌ಆರ್‌ಎಂ (SLRM) ಮತ್ತು ವಿಆರ್‌ಡಬ್ಲ್ಯು (VRW) ಸಿಬ್ಬಂದಿಗಳಿಗೆ ಮಳೆಗಾಲದ ಸೇವಾ ಕಾರ್ಯವನ್ನು ಸುಗಮಗೊಳಿಸುವ ಉದ್ದೇಶದಿಂದ ಛತ್ರಿ ಹಾಗೂ ರೇನ್‌ಕೋಟ್‌ಗಳನ್ನು ವಿತರಿಸಲಾಯಿತು. ಕೆರ್ವಾಶೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜುಲೈ 9ರಂದು ನಡೆದ ಸರಳ ಸಮಾರಂಭದಲ್ಲಿ ಯುವವಾಹಿನಿ (ರಿ.) ಕಾರ್ಕಳ ಘಟಕದ ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರ್ವಾಶೆ, ಕಾರ್ಯದರ್ಶಿ ರಾಕೇಶ್ ಅಮೀನ್, ಕ್ರೀಡಾ ನಿರ್ದೇಶಕ ಪ್ರಶಾಂತ್ ಬಜಗೋಳಿ, ಜೊತೆ ಕಾರ್ಯದರ್ಶಿ ಶ್ರೇಯಸ್, […]
Read More
06-07-2026, 10:00 PM
ಮಾಣಿ, ಜೂನ್: ಯುವವಾಹಿನಿ (ರಿ.) ಮಾಣಿ ಘಟಕದ ‘ಯುವ ಸೇವಾ ಸ್ಪರ್ಶ’ ಯೋಜನೆಯಡಿ ಗೋಳಿಕಟ್ಟೆಯ ನಿವಾಸಿಗಳಾದ ಆನಂದ ಹಾಗೂ ಲೀಲಾ ದಂಪತಿಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ಲೀಲಾ ಅವರು ನಡೆಯಲೂ ಕಷ್ಟಪಡುತ್ತಿರುವುದಲ್ಲದೆ ಆನಂದ ಅವರ ಆರೋಗ್ಯವೂ ಉತ್ತಮವಾಗಿಲ್ಲ. ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಈ ದಂಪತಿಗಳಿಗೆ ಮಾನವೀಯ ಕಾಳಜಿಯಿಂದ ಯುವವಾಹಿನಿ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಿ ನೆರವು ನೀಡಲಾಯಿತು. ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ಅವರ ಅಧ್ಯಕ್ಷತೆಯಲ್ಲಿ ಹಾಗೂ […]
Read More
28-06-2026, 2:00 PM
ಶಕ್ತಿನಗರ, ಜೂನ್ 28: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ […]
Read More
27-06-2026, 5:30 PM
ಪುತ್ತೂರು, ಜೂನ್ 27: ಸಮಾಜಸೇವೆಯ ಅಂಗವಾಗಿ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಕೊಯಿಲತಡ್ಕ ಅಂಗನವಾಡಿ ಕೇಂದ್ರಕ್ಕೆ ಅಗತ್ಯವಿದ್ದ ಡಿಜಿಟಲ್ ಸ್ಕೇಲ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಅಂಗನವಾಡಿ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘಟಕದ ವತಿಯಿಂದ ಡಿಜಿಟಲ್ ಸ್ಕೇಲ್ ಅನ್ನು ಹಸ್ತಾಂತರಿಸಲಾಯಿತು. ಮಕ್ಕಳ ಆರೋಗ್ಯದ ಮೇಲ್ವಿಚಾರಣೆ ಹಾಗೂ ಬೆಳವಣಿಗೆಯನ್ನು ನಿಖರವಾಗಿ ದಾಖಲಿಸಲು ಈ ಉಪಕರಣವು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಪುತ್ತೂರು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ […]
Read More
26-06-2026, 1:00 PM
ವೇಣೂರು ಜೂನ್ 26: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ “ಬೆಳಕು” ಯೋಜನೆಯಡಿ ಸಮಾಜಮುಖಿ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡು, ಬೆಳ್ತಂಗಡಿ ತಾಲೂಕಿನ ಪೇರಿ–ಹೊಸಂಗಡಿ ಗ್ರಾಮದ ಶ್ರೀಮತಿ ಬೇಬಿ ಅವರ ಮನೆಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. ಈ ಕಾರ್ಯಕ್ರಮವು ದಿನಾಂಕ 26-06-2026ರಂದು ಪೇರಿ–ಹೊಸಂಗಡಿ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್ ನಾರಾವಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನ ಹಾಗೂ “ಆಸರೆ” ಯೋಜನೆ ಕುರಿತು ಚರ್ಚಿಸಿ, […]
Read More