29-12-2016, 11:43 AM
ದಿನಾಂಕ 29-12-2016 ರಂದು ಕಂಕನಾಡಿ ಘಟಕದ ವತಿಯಿಂದ ಶ್ರೀ ಮಹಾಂಕಾಳಿ ದೈವಸ್ಥಾನದಲ್ಲಿ ವಾರದ ಪೂಜೆ ಹಾಗೂ ಭಜನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಅಲ್ಲದೆ ದೈವಸ್ಥಾನಕ್ಕೆ 50 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಸಲಹೆಗಾರರಾದ ಜಿ. ಪರಮೇಶ್ವರ ಪೂಜಾರಿ, ಘಟಕದ ಅಧ್ಯಕ್ಷ ಹರೀಶ್ ಕೆ. ಸನಿಲ್, ಶ್ರೀ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಘಟಕದ ಕಾರ್ಯದರ್ಶಿ ಭವಿತ್‌ರಾಜ್ ಹಾಗೂ ನಿಕಟಪೂರ್ವ ಅಧ್ಯಕ್ಷ ಶೇಖರ್ ಅಮೀನ್ ಉಪಸ್ಥಿತರಿದ್ದರು.
Read More
10-12-2016, 11:46 AM
ದಿನಾಂಕ 10-12-2016 ರಂದು ಸುರತ್ಕಲ್ ಘಟಕದ ಹೆಚ್ಚಿನ ಸದಸ್ಯರ ಸಹಕಾರದಿಂದ ಪೆರ್ಮುದೆ ಸರಕಾರಿ ಕೋಡಿಕೆರೆ ಶಾಲೆಗೆ ಒಂದು ಪೋಡಿಯಂನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಭಾಸ್ಕರ ಅಗರಮೇಲು, ಘಟಕದ ಮಾಜಿ ಅಧ್ಯಕ್ಷರುಗಳಾದ ಯೋಗೀಶ್ ಸನಿಲ್, ವಿಜಯಾ ಎಸ್. ಕುಕ್ಯಾನ್, ಸತೀಶ್ ಕೋಟ್ಯಾನ್ ಹಾಗೂ ಘಟಕದ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.
Read More
16-11-2016, 11:29 AM
ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಯ 161 ನೇ ಜನ್ಮದಿನಾಚರಣೆಯ ಪ್ರಯುಕ್ತ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಉಚಿತವಾಗಿ 6 ಫ್ಯಾನ್‌ಗಳನ್ನು 16-09-2016 ರಂದು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ದಿನಾಂಕ 3-11-2016 ರಂದು ಪುತ್ತೂರು ಘಟಕದ ವತಿಯಿಂದ ಅಪಘಾತದಲ್ಲಿ ಕಾಲು ಮುರಿತಕ್ಕೊಳಗಾದ ಯಕ್ಷಿತ್‌ನ ಮನೆಗೆ ತೆರಳಿ ರೂ. 5,000/-ದ ಮೊತ್ತದ ಚೆಕ್ಕನ್ನು ವಿತರಿಸುತ್ತಿರುವುದು. ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು, ನಿಕಟಪೂರ್ವ ಅಧ್ಯಕ್ಷ ಶಶಿಧರ ಕಿನ್ನಿಮಜಲು, ಕಾರ್ಯದರ್ಶಿ ಉದಯ ಕೋಲಾಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, […]
Read More
01-11-2016, 5:50 AM
ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಕೋಲಾಡಿ ಬಟನ್ಸ್ ಮಾಲಕ ಉದಯ ಕುಮಾರ್‌ರವರು ಕೊಡುಗೆಯಾಗಿ ನೀಡಿದ ಸುಮಾರು 18,000 ರೂ. ವೆಚ್ಚದ ಟೆಬಲ್‌ಗಳನ್ನು ಪುತ್ತೂರು ಬಿಲ್ಲವ ಸಂಘಕ್ಕೆ ಹಸ್ತಾಂತರಿಸಲಾಯಿತು.
Read More
23-10-2016, 5:38 AM
ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು. ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು, ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀಗುರು ವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇದ್ದಾವೆ. ಅಂಥವರನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲಾ ಸಾಮಾಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]
Read More
22-10-2016, 5:52 AM
ದಿನಾಂಕ 22-10-2016 ರಂದು ಕಂಕನಾಡಿ ಘಟಕದ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಮಗು ರಿಶಿತ್ ಕುಮಾರ್ ಅವರಿಗೆ ಧಾನಿಗಳ ಸಹಕಾರದಿಂದ ಒಟ್ಟು ಮಾಡಿದ ರೂ. 17,000/-ದ ಚೆಕ್‌ನ್ನು ಘಟಕಾಧ್ಯಕ್ಷರು ವಿತರಿಸುತ್ತಿರುವುದು.
Read More
18-09-2016, 5:19 AM
ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್‌ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು. […]
Read More
07-09-2016, 5:12 AM
ದಿ. 7-9-2016 ರಂದು ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯಲ್ಲಿ ನೆರೆದ ಭಕ್ತಾಭಿಮಾನಿಗಳಿಗೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇದರ ಮುಂಭಾಗದಲ್ಲಿ 1000 ಜನರಿಗೆ ರೂ. 16,000/- ಮೊತ್ತದ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿ, ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯ ಯಶಸ್ಸಿಗೆ ಸಹಕಾರ ನೀಡಲಾಗಿರುತ್ತದೆ.
Read More
14-08-2016, 5:47 AM
ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್‌ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್‌ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]
Read More
12-08-2016, 5:40 AM
ತೀರಾ ಅನಾರೋಗ್ಯದಿಂದ ಬಳಲುತ್ತಿರುವ ಆರಂಬೋಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ಪದ್ಮ ಪೂಜಾರಿಯವರ ಮನೆಗೆ ದಿನಾಂಕ 12-8-2016ರಂದು ಘಟಕದ ಪದಾಧಿಕಾರಿಗಳು, ನಿರ್ದೇಶಕರು, ಸಲಹೆಗಾರರು ಭೇಟಿ ನೀಡಿ ಚಿಕಿತ್ಸಾ ವೆಚ್ಚಕ್ಕಾಗಿ ರೂ. 10,000/- ಮೊತ್ತದ ಸಹಾಯಧನವನ್ನು ನೀಡಿದರು.
Read More